Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಪ್ರಭಾವಿ ಸಚಿವರ ಜತೆ ಗೋವಾ ಸಿಎಂ, ಬಿಜೆಪಿ ಮುಖಂಡರ ಸಂಪರ್ಕ

by admin October 16, 2023
written by admin October 16, 2023 0 comments 1 minutes read
3FacebookTwitterPinterestEmail
113

ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ಬಿಸಿ ತುಪ್ಪ

ಬೆಂಗಳೂರು: ಮಧ್ಯಕರ್ನಾಟಕದ ಪ್ರಭಾವಿ ಸಚಿವರು ಹಾಗೂ ಕೆಲವು ಶಾಸಕರು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಬಿಜೆಪಿ ಮುಖಂಡ ಪ್ರಪುಲ್‌ ಪಟೇಲ್‌ ಜತೆ ನಿರಂತರ ಸಂಪರ್ಕದಲ್ಲಿರುವುದು ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿದೆ.

ಈ ಸಚಿವರು ಅಧಿಕಾರ ವಹಿಸಿಕೊಂಡ ನಂತರ ಒಂದು ದಿನವೂ ತಮ್ಮ ವಿಧಾನಸೌಧದ ಕಚೇರಿಗೂ ಆಗಮಿಸಿಲ್ಲ. ಸರ್ಕಾರ ವಹಿಸಿರುವ ಇಲಾಖೆಯ ಉಸ್ತುವಾರಿ ಹೊಣೆಯನ್ನೂ ಸಮರ್ಥವಾಗಿ ನಿರ್ವಹಿಸಿಲ್ಲ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಬಿಜೆಪಿ ಮುಖಂಡರೊಂದಿಗೆ ಸಂಪರ್ಕ ಹೊಂದಿದ್ದಾರೆ.

ಪಣಜಿ ಹಾಗೂ ಪುಣೆಯಲ್ಲಿ ಬಿಜೆಪಿ ನಾಯಕರೊಂದಿಗೆ ಭೇಟಿ ನಿರಂತರವಾಗಿ ನಡೆದಿದೆ. ವೀರಶೈವ ಸಮುದಾಯದ ಅಧಿಕಾರಿಗಳಿಗೆ ಸರ್ಕಾರದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಬಹಿರಂಗ ಹೇಳಿಕೆ ವಿಚಾರವೂ ಈ ಭೇಟಿಗೆ ಹೆಚ್ಚು ಒತ್ತು ಕೊಟ್ಟಿದೆ. ಸಚಿವರ ಮೂಲಕ ಕೆಲವು ಕಾಂಗ್ರೆಸ್‌ ಶಾಸಕರೊಂದಿಗೆ ಬಿಜೆಪಿ ಮುಖಂಡರು ಸಂಪರ್ಕ ಬೆಳೆಸುತ್ತಿದ್ದಾರೆ. ಈ ಎಲ್ಲಾ ಮಾಹಿತಿಯನ್ನು ರಾಜ್ಯ ಗುಪ್ತಚರ ವಿಭಾಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದೆ.

ಗುಪ್ತಚಾರ ವಿಭಾಗದ ಮಾಹಿತಿ ಬರುತ್ತಿದ್ದಂತೆ ಪಕ್ಷದ ವರಿಷ್ಠರು, ಕೆಪಿಸಿಸಿ ಅಧ್ಯಕ್ಷರು ಹಾಗೂ ತಮ್ಮ ಹಿರಿಯ ಸಹೋದ್ಯೋಗಿಗಳ ಗಮನಕ್ಕೆ ತಂದಿದ್ದಾರೆ. ಆಪರೇಷನ್‌ ಕಮಲದ ಮೂಲಕ ತಮ್ಮ ನೇತೃತ್ವದ ಸರ್ಕಾರವನ್ನು ಕೆಡವಬಹುದು ಎಂಬ ಸಂದೇಶ ಮುಖ್ಯಮಂತ್ರಿ ಅವರ ಅಂಗಳಕ್ಕೆ ತಲುಪಿದೆ.

ತದ ನಂತರ ಗುರುವಾರ ತಮ್ಮ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಮಾಡಿ, ಅಸಮಾಧಾನಿತ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಬಿಜೆಪಿ ಮುಖಂಡರು ಹಾಗೂ ಗೋವಾ ಮುಖ್ಯಮಂತ್ರಿ ಜತೆ ಸಂಪರ್ಕ ಹೊಂದಿರುವ ಸಚಿವರನ್ನು ಸಂಪರ್ಕಿಸಿ ಚರ್ಚೆ ಮಾಡಿರುವುದಲ್ಲದೆ, ತಮಗೆ ಬಂದಿರುವ ಮಾಹಿತಿಯನ್ನು ಅವರ ಗಮನಕ್ಕೆ ತಂದು ವಿವರಣೆ ಕೋರಿದ್ದಾರೆ ಎನ್ನಲಾಗಿದೆ.

ಇದಾದ ನಂತರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು 42 ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಒಂದು ಕಡೆ ಹೇಳಿಕೆ ನೀಡಿದರೆ, ಮತ್ತೊಂದೆಡೆ, ಬಿಜೆಪಿ ಮುಖಂಡರು ಕಾಂಗ್ರೆಸ್‌ ಶಾಸಕರಿಗೆ ಗಾಳ ಹಾಕುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಈ ಹೇಳಿಕೆ ನೀಡಿದ್ದ ಬೆನ್ನಲೇ ಕಾಂಗ್ರೆಸ್‌ ಮುಖಂಡ ಹಾಗೂ ಗುತ್ತಿಗೆದಾರರ ಮನೆಯ ಮೇಲೆ ಐಟಿ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಆಪರೇಷನ್‌ ಹಸ್ತದ ರೂವಾರಿ, ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಬರುವ ಸಂಕ್ರಾಂತಿ ವೇಳೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದರು.

ಈ ಬಾರಿ ಆಪರೇಷನ್‌ ಕಮಲದಿಂದ ಸರ್ಕಾರ ಪತನವಿಲ್ಲ. ಆ ಪಕ್ಷದ ಶಾಸಕರೇ ಈ ಸರ್ಕಾರಕ್ಕೆ ಮುಳುವಾಗಲಿದ್ದಾರೆ ಎಂದು ತಿಳಿಸಿದ್ದರು. ಇದರ ಬೆನ್ನಲೆ ಗುಪ್ತಚರ ವಿಭಾಗವು ಪಕ್ಷದ ಸಚಿವರು ಹಾಗೂ ಶಾಸಕರು ಬಿಜೆಪಿ ಮುಖಂಡರೊಂದಿಗೆ ಸಂಪರ್ಕವಿರುವ ಮಾಹಿತಿಯನ್ನು ಮುಖ್ಯಮಂತ್ರಿ ಅವರಿಗೆ ತಲುಪಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
goa chief ministerkarnatakakmskannadanewsoperation kamalapoliticsPramod Sawant
3 FacebookTwitterPinterestEmail
admin

previous post
ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ
next post
ಕನ್ನಡ ಓದಲು, ಬರೆಯಲು ಬಾರದವರ ಸಮೀಕ್ಷೆಆಗಬೇಕು

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ