Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಾಂಗ್ರೆಸ್ಸಿಗೆ ಬಿಸಿ ತುಪ್ಪವಾದ ಬೆಳಗಾವಿ ರಾಜಕೀಯ

by cklbkrish October 19, 2023
written by cklbkrish October 19, 2023 0 comments 2 minutes read
2FacebookTwitterPinterestEmail
91

ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿದ ಮುಸುಕಿನ ಗುದ್ದಾಟ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಶೀತಲ ಸಮರ ತಾರಕಕ್ಕೇರಿದೆ.

ಕಾರ್ಯಕ್ರಮ ನಿಮಿತ್ತ ಬೆಳಗಾವಿಗೆ ತೆರಳಿದ್ದ ಶಿವಕುಮಾರ್ ಅವರು ನಡೆಸಿದ ಸಭೆಗಳಿಂದ ಸತೀಶ್ ಸೇರಿದಂತೆ ಆ ಭಾಗದ ಬಹುತೇಕ ಪಕ್ಷದ ಶಾಸಕರು ಮತ್ತು ಮುಖಂಡರು ದೂರ ಉಳಿದಿದ್ದರು.

ವಿಧಾನ ಪರಿಷತ್ತಿನ ಸದಸ್ಯ ಪ್ರಕಾಶ್ ಹುಕ್ಕೇರಿ, ಶಾಸಕ ಮಹೇಂದ್ರ ಕೆ. ತಮ್ಮಣ್ಣನವರ್ ಹಾಜರಾಗಿರುವುದನ್ನು ಬಿಟ್ಟರೆ ಉಳಿದವರ‍್ಯಾರು ಸಭೆ ಕಡೆಗೆ ಮುಖ ಹಾಕಿರಲಿಲ್ಲ.ಕಳೆದ ಒಂದು ವಾರದಿಂದ ಎರಡು ಗುಂಪುಗಳ ನಡುವೆ ಮುಸುಕಿನ ಗುದ್ದಾಟ ಜೋರಾಗಿ ಸತೀಶ್ ಬಲ ಪ್ರದರ್ಶನಕ್ಕೂ ಮುಂದಾಗಿದ್ದರು.

ಅಷ್ಟೇ ಅಲ್ಲ, ತಮಗೆ ತಕ್ಷಣವೇ ಉಪ ಮುಖ್ಯಮಂತ್ರಿ ಸ್ಥಾನ, ಬೆಳಗಾವಿ ಆಡಳಿತ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಹಿಡಿತ ಮೇಲುಗೈ ಸಾಧಿಸಬೇಕು ಎಂದು ಪಟ್ಟು ಹಿಡಿದಿದ್ದರು. ವರಿಷ್ಠರ ಮಧ್ಯೆ ಪ್ರವೇಶನದಿಂದ ಬಲ ಪ್ರದರ್ಶನವನ್ನು ಹಿಂತೆಗೆದುಕೊಂಡಿದ್ದ ಜಾರಕಿಹೊಳಿ, ತಮ್ಮ ಬೇಡಿಕೆ ಹಾಗೂ ಒತ್ತಾಯದಿಂದ ಹಿಂದೆ ಸರಿದಿರಲಿಲ್ಲ.

ಇದರ ಮಧ್ಯೆ ಬೆಳಗಾವಿಗೆ ತೆರಳಿದ್ದ ಶಿವಕುಮಾರ್‌ಗೆ ಮುಂಬೈ ಕರ್ನಾಟಕ ಭಾಗದಲ್ಲಿ ನಮ್ಮದೇ ಪ್ರಾಬಲ್ಯ ಎಂಬುದನ್ನು ಸಾಬೀತು ಪಡಿಸುವಲ್ಲಿ ಸತೀಶ್ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ. ಶಿವಕುಮಾರ್ ಮಾತ್ರ ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ ಎಂಬಂತೆ ತೋರ್ಪಡಿಸುವ ಪ್ರಯತ್ನ ಮಾಡಿದ್ದಲ್ಲದೆ, ತಾವು ತೆರಳಿದ್ದ ಕಾರ್ಯಕ್ರಮ ಮತ್ತು ಸಭೆಗಳನ್ನು ಮುಗಿಸಿದ್ದಾರೆ.

ಸಭೆಗೂ ಮುನ್ನ ಮಾತನಾಡಿದ ಶಿವಕುಮಾರ್, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿರುಕಿಲ್ಲ. ೧೩೬ ಶಾಸಕರೂ ನಮ್ಮವರೇ. ನಮ್ಮಲ್ಲಿ ಬಿರುಕಿದೆ ಎಂದು ಹೇಳುವ ಬಿಜೆಪಿ ನಾಯಕರು ಒಮ್ಮೆ ಜೆ.ಎಚ್.ಪಟೇಲರ ಭಾಷಣ ಕೇಳಿಸಿಕೊಳ್ಳಲಿ” ಎಂದು ತಿಳಿಸಿದ್ದಾರೆ.

ಬೆಳಗಾವಿಯ ಶಾಸಕರು, ಸಚಿವರು ನಿಮ್ಮನ್ನು ಸ್ವಾಗತಿಸಲು ಬರಲಿಲ್ಲ, ಸತೀಶ್ ಜಾರಕಿಹೊಳಿ ಅವರಿಗೂ ನಿಮಗೂ ಮುನಿಸಿದೆಯೇ ಎನ್ನುವ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, “ನೆನ್ನೆ, ಮೊನ್ನೆ ಸತೀಶ್ ಅವರು ಮತ್ತು ನಾನು ಜೊತೆಯಲ್ಲಿಯೇ ಕುಳಿತು ಮಾತನಾಡಿದ್ದೇವೆ. ನಾನು ಬಂದಿರುವುದು ಖಾಸಗಿ ಕಾರ್ಯಕ್ರಮಕ್ಕೆ. ಲಕ್ಷ್ಮಿ ಹೆಬ್ಬಾಳಕರ್ ಅವರು ನಾಮಕರಣ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿ ಇದ್ದಾರೆ. ಕೌಜಲಗಿ ಅವರಿಗೆ ಆರೋಗ್ಯ ಸರಿಯಿಲ್ಲ. ದಿಢೀರ್ ಎಂದು ನಿನ್ನೆ ರಾತ್ರಿ ಈ ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ. ಎಲ್ಲರಿಗೂ ಅವರದೇ ಆದ ವೈಯಕ್ತಿಕ ಕೆಲಸಗಳು ಇರುತ್ತವೆ” ಎಂದು ಹೇಳಿದರು.

ಸತೀಶ್ ನಮ್ಮ ನಡುವೆ ಯಾವುದೇ ಬಿರುಕಿಲ್ಲ. ನನ್ನನ್ನು ಸ್ವಾಗತಿಸಲು ಬರಲಿಲ್ಲ, ಅದು ಇದು, ಎಂದು ನೀವೇ ಏನೇನೋ ಹೇಳುತ್ತೀರಿ?. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ”.”ನಮ್ಮಲ್ಲಿ ಯಾರ ಬಗ್ಗೆಯೂ ಮುನಿಸಿಲ್ಲ. ಎಲ್ಲಾ ಶಾಸಕರು ನಮ್ಮವರೇ. ನಿಮಗೂ ಹಾಗೂ ಬಿಜೆಪಿಯವರಿಗೆ ಒಂದು ಸುದ್ದಿ ಬೇಕು, ಅದಕ್ಕೆ ಹೀಗೆಲ್ಲಾ ಹೇಳುತ್ತೀರಿ”. ಸತೀಶ್ ಅವರು ಶಾಸಕರ ಜೊತೆ ಪ್ರವಾಸ ಮಾಡುವ ವಿಚಾರವಾಗಿ ನಾವಿಬ್ಬರೂ ಚರ್ಚಿಸಿದೆವು” ಎಂದರು.

ಬೆಳಗಾವಿಯಿಂದಲೇ ಕಾಂಗ್ರೆಸ್ ಬಂಡಾಯ ಆರಂಭ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದು ಕೇಳಿದಾಗ “ಜೆ.ಎಚ್. ಪಟೇಲರ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಆದಾಗ ಅವರು ಒಂದು ಭಾಷಣ ಮಾಡಿದ್ದರು. ಹೋರಿ ಮತ್ತು ನಾಯಿ ಕತೆ. ಅದನ್ನು ನೀವು ಕೇಳಿದ್ದೀರಾ? ಅದನ್ನು ಬಿಜೆಪಿಯವರಿಗೆ ಕೇಳಿಸಿಕೊಳ್ಳಲು ಹೇಳಿ” ಎಂದು ತಿರುಗೇಟು ನೀಡಿದರು.

“ಹುಕ್ಕೇರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲು, ಈ ಭಾಗದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಲು ಹಾಗೂ ಮುಖ್ಯವಾಗಿ ಹುಕ್ಕೇರಿ ಮಠದ ಕಾರ್ಯಕ್ರಮಕ್ಕೆ ಬಂದಿದ್ದೇನೆ” ಎಂದು ಹೇಳಿದರು.

“ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ವ್ಯಂಗ್ಯವಾಡಿದರು. ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ನಿರಂತರವಾಗಿ ಪ್ರಯತ್ನ ನಡೆಸುತ್ತಿರುವುದು ನನಗೆ ತಿಳಿದಿದೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಮುಖ್ಯಮಂತ್ರಿಗೆ ಮಾಹಿತಿ ನೀಡುತ್ತಿದ್ದಾರೆ.”ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ.

ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ” ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavicongressdk shivakumarkarnatakakmskmskannadanewspoliticsSatish jarkiholi
2 FacebookTwitterPinterestEmail
cklbkrish

previous post
ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌
next post
ಆದಾಯ ಮೀರಿದ ಸಂಪತ್ತು ಸಂಪಾದನೆ ಪ್ರಕರಣದಲ್ಲಿ ಡಿಸಿಎಂ ಡಿಕೆಶಿಗೆ ದೊಡ್ಡ ಹಿನ್ನಡೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ