Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿದ್ಯುತ್‌ ಖರೀದಿಯಲ್ಲಿ ಅಕ್ರಮ ನಡೆದಿಲ್ಲ

by cklbkrish October 26, 2023
written by cklbkrish October 26, 2023 0 comments 2 minutes read
2FacebookTwitterPinterestEmail
428

ಬೆಂಗಳೂರಿನಲ್ಲಿ ಮಾಡಿದ ಆರೋಪಕ್ಕೆ ದೆಹಲಿಯಲ್ಲಿ ಉತ್ತರ ಕೊಟ್ಟ ಇಂಧನ ಸಚಿವರು

ನವದೆಹಲಿ: ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅದಕ್ಕೆ ಅನುಗುಣವಾಗಿ ಅಗತ್ಯ ವಿದ್ಯುತ್ ಪೂರೈಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ರಾಜ್ಯದಲ್ಲಿ ಹೆಚ್ಚಿರುವ ವಿದ್ಯುತ್‌ ಬೇಡಿಕೆ ಮತ್ತು ಅದರ ಪೂರೈಕೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಲು ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಇಂಧನ ಸಚಿವರು ಮಾತನಾಡಿದರು.

“ಈ ಬಾರಿ ವಿದ್ಯುತ್ ಬೇಡಿಕೆ ಎಷ್ಟರ ಮಟ್ಟಿಗೆ ಏರಿಕೆಯಾಗಿದೆ ಎಂದರೆ, ಆಗಸ್ಟ್‌ ತಿಂಗಳ ವಿದ್ಯುತ್ ಬಳಕೆ ಬೇಸಿಗೆ ಕಾಲದಲ್ಲಿನ ಬಳಕೆಯನ್ನು ಮೀರಿಸಿದೆ. ಈ ಅಕ್ಟೋಬರ್‌ನಲ್ಲೇ 15,000 ಮೆ.ವ್ಯಾ.ಗಿಂತ ಹೆಚ್ಚಿನ ವಿದ್ಯುತ್ ಬೇಡಿಕೆ ಇದೆ. ಆ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‌ ಒದಗಿಸುವುದು ನಮ್ಮ ಜವಾಬ್ದಾರಿ. ಅದಕ್ಕಾಗಿ ಪ್ರಯತ್ನ ಮಾಡಿದ್ದು, ಅದರಂತೆ ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ನಿಯಮದ ಪ್ರಕಾರ ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಪ್ರಕ್ರಿಯೆ ನಡೆಯುತ್ತಿದ್ದು, ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ರಾಜ್ಯ ಸರ್ಕಾರ ಇದನ್ನು ತಳ್ಳಿಹಾಕುತ್ತದೆ,” ಎಂದರು.

ವಿದ್ಯುತ್ ಬಳಕೆ ಏರಿಕೆ

“ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಪ್ರತಿ ತಿಂಗಳಿಗೆ 200 ಮಿಲಿಯನ್ ಯೂನಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಆಗುತ್ತಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಅತ್ಯಧಿಕ ಅಂದರೆ 11,268 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. 2022ರ ಆಗಸ್ಟ್‌ನಲ್ಲಿ ಗರಿಷ್ಠ ಬಳಕೆ 208 ಮಿಲಿಯನ್ ಯೂನಿಟ್ ನಷ್ಟಿದ್ದರೆ, ಈ ವರ್ಷ ಆಗಸ್ಟ್‌ನ ಗರಿಷ್ಠ ಬಳಕೆ 294 ಮಿಲಿಯನ್ ಯೂನಿಟ್ ಗೆಗೆ ಏರಿದೆ. ಇಂತಹ ಸವಾಲಿನ ಪರಿಸ್ಥಿತಿಯಲ್ಲೂ, ನೀರಾವರಿ ಉದ್ದೇಶಗಳಿಗಾಗಿ ರೈತರಿಗೆ 5 ಗಂಟೆಗಳ ನಿರಂತರ ವಿದ್ಯುತ್ ಪೂರೈಸಲು ಇಂಧನ ಸಚಿವಾಲಯವು ಹಗಲು-ರಾತ್ರಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿನ ಬೆಳೆ ಮಾದರಿ ಮತ್ತು ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕಬ್ಬು ಮತ್ತು ಭತ್ತ ಬೆಳೆಯುವ ಭಾಗಗಳಲ್ಲಿ 7 ಗಂಟೆಗಳ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್ ಸರಬರಾಜಿನ ಮೇಲ್ವಿಚಾರಣೆಗೆ ಚೀಫ್‌ ಎಂಜಿನಿಯರ್ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ರಾಜ್ಯದ ಲೋಡ್‌ ಡಿಸ್ಪ್ಯಾಚ್ ಸೆಂಟರ್ (ಎಸ್‌ಎಲ್‌ಡಿಸಿ) ಪರಿಸ್ಥಿತಿ ಮೇಲೂ ನಿಗಾ ಇರಿಸಿದ್ದಾರೆ,” ಎಂದು ಇಂಧನ ಸಚಿವರು ಹೇಳಿದರು.

“ಈ ವರ್ಷ ಮುಂಗಾರು ಕೈ ಕೊಟ್ಟಿರುವುದರಿಂದ ಗೃಹ ಬಳಕೆ ಮತ್ತು ನೀರಾವರಿ ಪಂಪ್ ಸೆಟ್‌ಗಳಲ್ಲಿ ವಿದ್ಯುತ್ ಬಳಕೆ ಅಂದಾಜು ಶೇ. 45ರಷ್ಟು ಹೆಚ್ಚಳವಾಗಿದೆ. ವಿದ್ಯುತ್ ಬಳಕೆಯ ಹೆಚ್ಚಳದಲ್ಲಿ ನೀರಾವರಿ ಪಂಪ್ ಸೆಟ್‌ಗಳದ್ದು ಸಿಂಹಪಾಲು. ಉಷ್ಣ ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆಯ ಕೊರತೆ (ಮಳೆ ಕೊರತೆ), ಸೌರ ವಿದ್ಯುತ್ ಮತ್ತು ಪವನ ಶಕ್ತಿ (ಪ್ರತಿಕೂಲ ಹವಾಮಾನ ಪರಿಸ್ಥಿತಿ) ರಾಜ್ಯದ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯವು 300 ಮಿಲಿಯನ್ ಯೂನಿಟ್ ನಷ್ಟು ಕುಸಿತ ಕಂಡಿದೆ. ಪ್ರತಿದಿನ, 270-280 ಮಿ.ಯೂ. ವಿದ್ಯುತ್ ಬೇಡಿಕೆಯಿದ್ದರೂ, ನಮ್ಮ ಉತ್ಪಾದನಾ ಸಾಮರ್ಥ್ಯ 230-240 ಮೆ.ಯೂ.ನಷ್ಟಿದೆ. ಹಾಗಾಗಿ ದಿನಕ್ಕೆ 30-40 ಮಿ.ಯೂ. ವಿದ್ಯುತ್‌ ಕೊರತೆ ಎದುರಿಸುತ್ತಿದ್ದೇವೆ. ಆದರೂ ನಮ್ಮ ಸರ್ಕಾರವ ವಿದ್ಯುತ್‌ ಪೂರೈಕೆಗೆ ಸಾಧ್ಯವಿರುವ ಎಲ್ಲ ಕ್ರಮ ಕೈಗೊಂಡು ಗೃಹ ಬಳಕೆದಾರರು, ರೈತರು ಮತ್ತು ಕೈಗಾರಿಕೋದ್ಯಮಿಗಳ ಹಿತಾಸಕ್ತಿ ಕಾಯುತ್ತಿದೆ,”ಎಂದರು.

ವಿದ್ಯುತ್‌ ಪೂರೈಕೆಗೆ ಕ್ರಮಗಳು

“ಸಾಮಾನ್ಯವಾಗಿ ಮಳೆಗಾಲದಲ್ಲಿ ವಿದ್ಯುತ್‌ ಬೇಡಿಕೆ ಕಡಿಮೆ ಇರುವುದರಿಂದ ಈ ಅವಧಿಯಲ್ಲಿ ಕೆಪಿಸಿಎಲ್‌ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ವಾರ್ಷಿಕ ನಿರ್ವಹಣೆ ಕಾರ್ಯ ನಡೆಯುತ್ತದೆ. ಹಾಗಾಗಿ ಉತ್ಪಾದನೆ ಕಡಮೆಯಾಗಿತ್ತು. ಶೀಘ್ರದಲ್ಲೇ ಉಷ್ಣ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದನೆ ಆರಂಭವಾಗಲಿದೆ. ಕೇಂದ್ರ ಗ್ರಿಡ್‌ನಿಂದ ವಿದ್ಯುತ್‌ ಖರೀದಿಸುವ ಜತೆಗೆ ಪಂಜಾಬ್, ಉತ್ತರ ಪ್ರದೇಶದಿಂದಲೂ ಪರಸ್ಪರ ವಿದ್ಯುತ್ ಕೊಟ್ಟು-ತೆಗೆದುಕೊಳ್ಳುವ ವ್ಯವಸ್ಥೆ ಆಗಲಿದೆ ಎಂದು ಮಾಹಿತಿ ನೀಡಿದರು.

ಕಲ್ಲಿದ್ದಲ್ಲು ಸಿಗುವ ಸ್ಥಳಗಳಲ್ಲಿ ಮಳೆಯಾಗಿ ಅದರ ಗುಣಮಟ್ಟ ತಗ್ಗಿದೆ. ಇಂಥ ಕಲ್ಲಿದ್ದಲ್ಲನ್ನು ಬಳಸುವುದರಿಂದ ಶಾಖೋತ್ಪನ್ನ ಯಂತ್ರಗಳು ದುರಸ್ತಿಗೆ ಬರುತ್ತಿವೆ. ಹೀಗಾಗದಂತೆ ಎಚ್ಚರವಹಿಸಿ, ಕಲ್ಲಿದ್ದಲು ಆಮದು ಮಾಡಿಕೊಂಡು, ಮಿಶ್ರಣ ಮಾಡಲಾಗುತ್ತದೆ. ರಾಜ್ಯದಲ್ಲಿನ ಶಾಖೋತ್ಪನ್ನ ಸಹ-ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನಗಳಿಂದ ವಿದ್ಯುತ್ ಪಡೆಯಲು “ರಾಷ್ಟ್ರೀಯ ವಿಪತ್ತಿನ ಅಡಿಯಲ್ಲಿ” ವಿದ್ಯುತ್‌ ಕಾಯ್ದೆಯ ಸೆಕ್ಷನ್ 11 ಜಾರಿಗೊಳಸಲಾಗಿದೆ. ಇದರಿಂದ ಖಾಸಗಿ ವಿದ್ಯುತ್ ಉತ್ಪಾದಕರೊಂದಿಗೆ ಒಪ್ಪಂದ ಮಾಡಿಕೊಂಡು ವಿದ್ಯುತ್‌ ಖರೀದಿ ಮಾಡಲಾಗುತ್ತದೆ,”ಎಂದು ಸಚಿವರು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
KJ Georgekmskmskannadaminister power crisis in karnatakanewdelhinewspower
2 FacebookTwitterPinterestEmail
cklbkrish

previous post
ಸ್ಥಳ, ಸಮಯ, ದಿನ ಫಿಕ್ಸ್‌ ಮಾಡಿ: ಡಿಸಿಎಂ ಡಿಕೆಶಿ ಬಹಿರಂಗ ಚರ್ಚೆ ಸವಾಲ್ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ
next post
ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಐಐಎಂ ಕೊಡುಗೆ ಅಪಾರ: ರಾಜ್ಯಪಾಲರು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ