Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಮ್ಮ ಮೆಟ್ರೊಗೆ ಬಸವೇಶ್ವರರ ಹೆಸರು ನಾಮಕರಣ ಸಿಎಂ ಜತೆ ಚರ್ಚೆ: ಎಂಬಿ ಪಾಟೀಲ

by cklbkrish October 27, 2023
written by cklbkrish October 27, 2023 0 comments 2 minutes read
2FacebookTwitterPinterestEmail
105

ಬಸವೇಶ್ವರರು ನಾಡಿನ ಸಂಸ್ಕೃತಿಯ ಪ್ರತೀಕ

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೊ’ಗೆ ನಾಮಕರಣ ಮಾಡುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಮೆಟ್ರೊಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೊ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ ಬಸವೇಶ್ವರರ ಹೆಸರು ಇಡುವುದು ಸೂಕ್ತ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟ ಹಾಗೆ ಮೆಟ್ರೊಗೊ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ಮಾಡಲಾಗುವುದು ಎಂದರು.

ಅಂತೆಯೇ, ಬಿಜಾಪುರ ಹೋಗಿ ವಿಜಯಪುರ ಆಗಿರುವ ಜಿಲ್ಲೆಗೆ “ಬಸವೇಶ್ವರ ಜಿಲ್ಲೆ” ಎಂದು ನಾಮಕರಣ ಮಾಡಬೇಕೆಂಬ ಧ್ವನಿಯೂ ಕೇಳಿಬಂದಿದೆ. ಯಾವುದಕ್ಕೇ ಆಗಲಿ ಬಸವೇಶ್ವರರ ಹೆಸರನ್ನು ಇಡುವುದಕ್ಕೆ ನಮ್ಮ ಯಾರ ವಿರೋಧವೂ ಇಲ್ಲ. ವೈಯಕ್ತಿಕವಾಗಿ ನಾನಂತೂ ಬಸವಣ್ಣನವರ ಅಪ್ಪಟ ಅನುಯಾಯಿ. ಆದರೆ, ಹೆಸರು ಬದಲಾವಣೆ ಮಾಡುವುದಕ್ಕೆ ಮುಂಚೆ ಇತರ ಹತ್ತು ಹಲವು ಸಾಧಕ ಬಾಧಕಗಳ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯದ ಹೆಸರನ್ನು “ಬಸವೇಶ್ವರ ನಾಡು” ಎಂದು ಬದಲಾಯಿಸುವ ಪ್ರಸ್ತಾವ ಇದೆಯೇ ಎಂದು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಅಂತಹ ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಆ ರಾಜ್ಯದ ಸಾಂಸ್ಕೃತಿಕ ಪ್ರತೀಕ ಎಂದು ಪರಿಗಣಿಸಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲಿ ಬಸವೇಶ್ವರ ಅವರನ್ನು ಸಾಂಸ್ಕೃತಿಕ ಪ್ರತೀಕವಾಗಿ ಪರಿಗಣಿಸಬೇಕು ಎಂಬ ಬೇಡಿಕೆಗಳು ಇವೆ.

ಎಂ.ಬಿ.ಪಾಟೀಲ

ಒಂದು ಹೆಸರನ್ನು ಬದಲಾಯಿಸಿದರೆ ಅದು ಸ್ಥಳೀಯ ಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದವರೆಗೆ ಬದಲಾವಣೆ ಆಗಬೇಕಾಗುತ್ತದೆ. ಹೀಗಾದಾಗ ಕೆಲವು ತೊಡಕುಗಳು ಕೂಡ ಉಂಟಾಗುತ್ತವೆ. ಬಿಜಾಪುರ ಎಂಬ ಹೆಸರನ್ನು ವಿಜಯಪುರ ಎಂದು ಬದಲಾಯಿಸಿದಾಗ ಕೂಡ ಸಾಕಷ್ಟು ಅಡಚಣೆಗಳು ಎದುರಾಗಿದ್ದವು. ಈಗಷ್ಟೇ ಅವೆಲ್ಲಾ ಒಂದು ಹಂತಕ್ಕೆ ಬಂದಿವೆ. ಅಲ್ಪಾವಧಿಯಲ್ಲಿ ಒಂದು ಸ್ಥಳದ ಹೆಸರನ್ನು ಎರಡನೇ ಸಲ ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಬಸವೇಶ್ವರ ನಾಡು ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ.

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೊ’ಗೆ ನಾಮಕರಣ ಮಾಡುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಮೆಟ್ರೊಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೊ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ ಬಸವೇಶ್ವರರ ಹೆಸರು ಇಡುವುದು ಸೂಕ್ತ. ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟ ಹಾಗೆ ಮೆಟ್ರೊಗೊ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ಮಾಡಲಾಗುವುದು ಎಂದರು.

ಅಂತೆಯೇ, ಬಿಜಾಪುರ ಹೋಗಿ ವಿಜಯಪುರ ಆಗಿರುವ ಜಿಲ್ಲೆಗೆ “ಬಸವೇಶ್ವರ ಜಿಲ್ಲೆ” ಎಂದು ನಾಮಕರಣ ಮಾಡಬೇಕೆಂಬ ಧ್ವನಿಯೂ ಕೇಳಿಬಂದಿದೆ. ಯಾವುದಕ್ಕೇ ಆಗಲಿ ಬಸವೇಶ್ವರರ ಹೆಸರನ್ನು ಇಡುವುದಕ್ಕೆ ನಮ್ಮ ಯಾರ ವಿರೋಧವೂ ಇಲ್ಲ. ವೈಯಕ್ತಿಕವಾಗಿ ನಾನಂತೂ ಬಸವಣ್ಣನವರ ಅಪ್ಪಟ ಅನುಯಾಯಿ. ಆದರೆ, ಹೆಸರು ಬದಲಾವಣೆ ಮಾಡುವುದಕ್ಕೆ ಮುಂಚೆ ಇತರ ಹತ್ತು ಹಲವು ಸಾಧಕ ಬಾಧಕಗಳ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯದ ಹೆಸರನ್ನು “ಬಸವೇಶ್ವರ ನಾಡು” ಎಂದು ಬದಲಾಯಿಸುವ ಪ್ರಸ್ತಾವ ಇದೆಯೇ ಎಂದು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಅಂತಹ ಪ್ರಸ್ತಾಪದ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಅವರನ್ನು ಆ ರಾಜ್ಯದ ಸಾಂಸ್ಕೃತಿಕ ಪ್ರತೀಕ ಎಂದು ಪರಿಗಣಿಸಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲಿ ಬಸವೇಶ್ವರ ಅವರನ್ನು ಸಾಂಸ್ಕೃತಿಕ ಪ್ರತೀಕವಾಗಿ ಪರಿಗಣಿಸಬೇಕು ಎಂಬ ಬೇಡಿಕೆಗಳು ಇವೆ” ಎಂದರು.

ಒಂದು ಹೆಸರನ್ನು ಬದಲಾಯಿಸಿದರೆ ಅದು ಸ್ಥಳೀಯ ಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದವರೆಗೆ ಬದಲಾವಣೆ ಆಗಬೇಕಾಗುತ್ತದೆ. ಹೀಗಾದಾಗ ಕೆಲವು ತೊಡಕುಗಳು ಕೂಡ ಉಂಟಾಗುತ್ತವೆ. ಬಿಜಾಪುರ ಎಂಬ ಹೆಸರನ್ನು ವಿಜಯಪುರ ಎಂದು ಬದಲಾಯಿಸಿದಾಗ ಕೂಡ ಸಾಕಷ್ಟು ಅಡಚಣೆಗಳು ಎದುರಾಗಿದ್ದವು. ಈಗಷ್ಟೇ ಅವೆಲ್ಲಾ ಒಂದು ಹಂತಕ್ಕೆ ಬಂದಿವೆ. ಅಲ್ಪಾವಧಿಯಲ್ಲಿ ಒಂದು ಸ್ಥಳದ ಹೆಸರನ್ನು ಎರಡನೇ ಸಲ ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basavannakarnatakakmskmskannadamb patilminister
2 FacebookTwitterPinterestEmail
cklbkrish

previous post
ಮುಂದಿನ ವಿಜಯದಶಮಿಗೆ ನಾನೇ ಸಿಎಂ!
next post
ಡಿ.ಕೆ.ಶಿವಕುಮಾರ್‌ಗೆ ಸಿಎಂ ಪಟ್ಟ ತಪ್ಪಿಸಲು ಷಡ್ಯಂತರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ