ನಗರದ ಆಯಕಟ್ಟಿನ ಭಾಗಗಳಲ್ಲಿ ಬಿಗಿ ಬಂದೋಬಸ್ತ್
ಬೆಂಗಳೂರು: ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಸಬಾ ಕಾರ್ಯಕ್ರಮದಲ್ಲಿ ಸರಣಿ ಸೋಟ ಬೆನ್ನಲ್ಲೇ ಬೆಂಗಳೂರು ನಗರದಲ್ಲೂ ಸೂಕ್ಷ್ಮ, ಅತೀ ಸೂಕ್ಷ್ಮ ಪ್ರದೇಶಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ನಗರ ಪೊಲೀಸ್ ಆಯಕ್ತ ಬಿ. ದಯಾನಂದ ಸೂಚಿಸಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ್ಯಂತ ಹೈ-ಅಲರ್ಟ್ ಘೋಷಣೆ ಮಾಡಲಾಗಿದ್ದು, ಕೇರಳ ಗಡಿ ಕರಾವಳಿಯಲ್ಲಿ ಹೆಚ್ಚಿನ ನಿಗಾವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ.
ರಾಜ್ಯ ಪೊಲೀಸ್ ಘಟಕಗಳಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ಈಗಾಗಲೇ ತಾಕೀತು ಮಾಡಿದೆ. ಹಾಗಾಗಿ ಕರ್ನಾಟಕ, ಉತ್ತರ ಪ್ರದೇಶ, ದೆಹಲಿ ಹಾಗೂ ಮಂಗಳೂರಿನ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಅಲ್ಲದೇ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ, ಅಲ್ಲಿಗೆ ಆಗಮಿಸುವ ಪ್ರಯಾಣಿಕರು ಮತ್ತು ಅವರ ಲೆಗೇಜ್ ಬ್ಯಾಗ್‌ಗಳನ್ನು ತೀವ್ರ ತಪಾಸಣೆಗೊಳಪಡಿಸಲಾಗುತ್ತಿದೆ. ಅಷ್ಟೇ ಅಲ್ಲದೇ, ನಗರದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ನಗರ ಪೊಲೀಸ್ ಆಯುಕ್ತರು ಸೂಚಿಸಿದಂತೆ ಬಿಗಿ ‘ದ್ರತೆ ಕೈಗೊಳ್ಳಲಾಗಿದೆ. ಇನ್ನು ವಿಧಾನಸೌಧ, ಹೈಕೋರ್ಟ್‌ಗೂ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದ್ದು, ಗುಪ್ತಚರ ಸಂಸ್ಥೆಗಳೊಂದಿಗೆ ಪೊಲೀಸ್ ಇಲಾಖೆ ನಿರಂತರ ಸಂಪರ್ಕದಲ್ಲಿದೆ. ನಗರದಲ್ಲಿ ಹೊಯ್ಸಳ, ಚೀತಾ ಬೀಟ್ ಸಿಬ್ಬಂದಿಗಳ ಗಸ್ತು ಹೆಚ್ಚಳ ಮಾಡಲಾಗಿದೆ.
ಅಲ್ಲದೇ, ಕೇರಳದ ಪೊಲೀಸ್ ಅಧಿಕಾರಿಗಳು, ರಾಜ್ಯ ಮತ್ತು ಕೇಂದ್ರ ಗುಪ್ತಚರ ದಳದ ಅಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಏನಾಗುತ್ತಿದೆ ಎಂಬುದರ ಕುರಿತು ಪ್ರತಿಯೊಂದು ಮಾಹಿತಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ವಿಭಾಗದ ಅಧಿರಿಯೊಬ್ಬರು ತಿಳಿಸಿದ್ದಾರೆ.
ಕೇರಳದ ಕಲಮಶ್ಶೇರಿಯಲ್ಲಿ ಬಾಂಬ್ ಸ್ಫೋಟ
ತಿರುವನಂತಪುರಂ: ಕೇರಳದ ಎರ್ನಾಕುಲಂನ ಕಲಮಶ್ಶೇರಿಯಲ್ಲಿ ಬಾಂಬ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಮೂರು ಪ್ರಬಲ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಕಲಮಶ್ಶೇರಿಯಲ್ಲಿ ಭಾನುವಾರ ಪ್ರಾರ್ಥನೆ ಗಾಗಿ ಸುಮಾರು 2,500 ಮಂದಿ ಸೇರಿದ್ದರು. ಇದೇ ವೇಳೆ ಪ್ರಾರ್ಥನೆ ನಡೆಯುತ್ತಿದ್ದ ಹಾಲ್ ನಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಸ್ಪೋಟದ ಸದ್ದಿಗೆ ಗಾಬರಿಗೊಂಡು ಜನ ದಿಕ್ಕಾಪಾಲಾಗಿ ಓಡತೊಡಗಿದರು. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು ಸ್ಫೋಟಿಸಲಾಗಿದ್ದು,ಇದರ ಹಿಂದೆ ಭಯೋತ್ಪಾದಕ ಕೃತ್ಯ ಇರಬಹುದೆಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆ ಸಂಬಂಧ ಕೇರಳ ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ಕಲಮಶ್ಯೆರಿಯಲ್ಲಿ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಎಲ್ಲ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ. ಘಟನೆ ಸಂಬಂಧ ಒಬ್ಬನನ್ನು ರೈಲ್ವೆ ನಿಲ್ದಾಣ ಬಳಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.