Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬರಗಾಲ ಸರಿಯಾಗಿ ನಿರ್ವಹಿಸಿ. ಅಧಿಕಾರಿಗಳ ಬೇಜವಾಬ್ದಾರಿಯನ್ನು ಸರ್ಕಾರ ಸುತಾರಾಂ ಸಹಿಸಲ್ಲ: ಮುಖ್ಯಮಂತ್ರಿ ಎಚ್ಚರಿಕೆ

ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ, ಅಧಿಕಾರಿಗಳಿಗೆ ಸೂಚನೆ

by cklbkrish October 31, 2023
written by cklbkrish October 31, 2023 0 comments 1 minutes read
2FacebookTwitterPinterestEmail
84

ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ, ಅಧಿಕಾರಿಗಳಿಗೆ ಸೂಚನೆ

ಮಂಡ್ಯ: ಬರಗಾಲದ ಸಂದರ್ಭವನ್ನು ಸರಿಯಾಗಿ ನಿರ್ವಹಿಸಿ. ಅಧಿಕಾರಿಗಳ ಬೇಜವಾಬ್ದಾರಿಯನ್ನು ಸರ್ಕಾರ ಸುತಾರಾಂ ಸಹಿಸಲ್ಲ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಎಂದು ಸೂಚನೆ ನೀಡಿದರು.

ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಪಶು ಸಂಗೋಪನೆ, ಕೃಷಿ ಇಲಾಖೆಗಳ ಪ್ರಗತಿಗೆ ಪ್ರಥಮ ಆಧ್ಯತೆ ನೀಡಬೇಕು.

ಜಿಲ್ಲಾಧಿಕಾರಿ, ಸಿಇಓ, ಕಾರ್ಯದರ್ಶಿಗಳ ಸಭೆಯಲ್ಲಿ ನಾನು ಕೊಟ್ಟ ಸೂಚನೆಗಳು, ನಿರ್ದೇಶನಗಳು ಚಾಚೂ ತಪ್ಪದೆ ಜಾರಿ ಆಗಿದೆಯಾ ? ಎಷ್ಟು ಜಾರಿ ಆಗಿದೆ ಎನ್ನುವ ಕುರಿತು ಸಭೆಗೆ ಸ್ಪಷ್ಟ ಮಾಹಿತಿ ನೀಡಿ. ನಮ್ಮನ್ನು ಒಪ್ಪಿಸುವುದಕ್ಕಾಗಿ ಸಭೆಗೆ ತ್ಪಪ್ಪು ಮಾಹಿತಿ ನೀಡಬೇಡಿ. ತಪ್ಪು ಮಾಹಿತಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟವಾದರೂ ಸರ್ಕಾರ ಹಣ ಒದಗಿಸುತ್ತದೆ. ನೀವು ಜನ ಜಾನವಾರುಗಳಿಗೆ ಯಾವುದಕ್ಕೂ ತೊಂದರೆ ಆಗದಂತೆ ಕೆಲಸ ಮಾಡಬೇಕು.

ಮಾರ್ಚ್, ಏಪ್ರಿಲ್, ಮೇ ತಿಂಗಳಿಗಿಂತ ಹೆಚ್ಚು ವಿದ್ಯುತ್ ಬೇಡಿಕೆ ಇದೆ. ಆಗ 11 ಸಾವಿರ ಮೆಗಾವ್ಯಾಟ್ ಬಳಕೆ ಆಗುತ್ತಿತ್ತು. ಈಗ 15-16 ಸಾವಿರ ಮೆಘಾವ್ಯಾಟ್ ವಿದ್ಯುತ್ ಗೆ ಬೇಡಿಕೆ ಇದೆ.

ರೈತರ ಪಂಪ್ ಸೆಟ್ ಮತ್ತು ಜನರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ನಕಾಶೆ, ಯೋಜನೆ ಸಿದ್ದಪಡಿಸಿ ಅದಕ್ಕೆ ತಕ್ಕಂತೆ ಕ್ರಮ ವಹಿಸಿ.  ಸದ್ಯ ಕಟಾವಿಗೆ ಬರುವ ಬೆಳೆಗಳನ್ನು ಉಳಿಸಿಕೊಳ್ಳಲು ತೀವ್ರ ನಿಗಾವಹಿಸಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಮಾಹಿತಿ ಕೊರತೆ: ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಿಎಂ ತರಾಟೆ

ನಿಮಗೇ ಸರಿಯಾದ ಮಾಹಿತಿ ಇಲ್ಲದಿದ್ದರೆ, ರೈತರಿಗೆ ಏನು ಸಲಹೆ ನೀಡ್ತೀರಿ? ಸ್ಥಳ ಸಮೀಕ್ಷೆ ಮಾಡುವುದನ್ನು ಏಕೆ ನಿಲ್ಲಿಸಿದ್ದೀರಿ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಲಾಸ್ ತೆಗೆದುಕೊಂಡರು.

ರಾಜ್ಯ ಸರ್ಕಾರದ ಆರ್ಥಿಕ ಸಮೀಕ್ಷೆ ಓದಿದ್ದೀರಾ ಎಂದು ಸಿಎಂ ಕೇಳಿದರು. ಇಲ್ಲ ಎಂದು ಉತ್ತರ ಬಂದಿದ್ದರಿಂದ ಗರಂ ಆದರು.

ಬೆಳೆ ಇಳುವರಿ ಮತ್ತು ಬಿತ್ತನೆ ಪ್ರಮಾಣದಲ್ಲಿ ಮಂಡ್ಯ ಜಿಲ್ಲೆ ರಾಜ್ಯದ ಸರಾಸರಿಗಿಂತ ಕಡಿಮೆ ಇದೆ. ಏಕೆ ಹೀಗಾಗಿದೆ‌ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಭೂಮಿಯ ಫಲವತ್ತತೆ ಕಡಿಮೆ ಆಗಿದೆ ಎಂದು ಜಂಟಿ ನಿರ್ದೇಶಕರು ಉತ್ತರಿಸಿದರು. ಹಾಗಿದ್ದರೆ ಫಲವತ್ತತೆ ಹೆಚ್ಚಿಸಲು ಸರ್ಕಾರದ ಕಾರ್ಯಕ್ರಮಗಳಿವೆ. ಅದನ್ನು ಎಷ್ಟು ಜಾರಿ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಕೃಷಿ ಭೂಮಿಗಳಿಗೆ ತಪ್ಪದೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು. ರೈತರ ಜತೆ ಮಾತನಾಡಿ ಅವರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ರೋಗ ರಹಿತ ಬೀಜ, ಅಗತ್ಯ ರಸಗೊಬ್ಬರ, ಫಲವತ್ತತೆ ಹೆಚ್ಚಿಸಲು ಕ್ರಮ ಕೈಗೊಳ್ಳಿ. ಮುಂದಿನ ಸಭೆ ವೇಳೆಗೆ ಪರಿಸ್ಥಿತಿ ಸುಧಾರಿಸಿರಬೇಕು ಎನ್ನುವ ಎಚ್ಚರಿಕೆ ಮಾದರಿಯ ಸಲಹೆಗಳನ್ನು ಮುಖ್ಯಮಂತ್ರಿಗಳು ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chaluvarayaswamycmdroughtkarnatakakmskmskannadamandyameetingSiddaramaiah
2 FacebookTwitterPinterestEmail
cklbkrish

previous post
ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ
next post
ಕಾಂಗ್ರೆಸ್ ಹೊಟ್ಟೆ ತುಂಬಿಸುತ್ತದೆ, ಬಿಜೆಪಿ ಭಾವನೆ ಕೆರಳಿಸುತ್ತದೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ