Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನ.2ರಂದು ಮತದಾರರ ವಿಶೇಷ ನೋಂದಣಿ

by cklbkrish October 31, 2023
written by cklbkrish October 31, 2023 0 comments 2 minutes read
2FacebookTwitterPinterestEmail
102

ಅಭಿಯಾನ ನಡೆಸಲಿದೆ ಚುನಾವಣಾ ಆಯೋಗ

ಬೆಂಗಳೂರು:  ಕರ್ನಾಟಕ ವಿಧಾನ ಪರಿಷತ್ ನ  ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಸಂಬಂಧ ಭಾರತದ ಚುನಾವಣಾ ಆಯೋಗವು ಮತದಾರರ ಪಟ್ಟಿ ತಯಾರಿಕೆ ಕುರಿತು  ವೇಳಾ ಪಟ್ಟಿಯನ್ನು ಪ್ರಕಟಿಸಿದೆ.

ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಸಂಬಂಧ ಅರ್ಹ ಪದವೀಧರ ರೈತ ಮತದಾರರನ್ನು ಹಾಗೂ ಅರ್ಹ ಮತದಾರರನ್ನು ನೋಂದಾಯಿಸಲು ನವೆಂಬರ್ 2 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ 5 ತಾಲ್ಲೂಕುಗಳ 86 ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಾಗಿದೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಬೆಂಗಳೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ.ದಯಾನಂದ ಅವರು ತಿಳಿಸಿದ್ದಾರೆ.

ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18 ರಲ್ಲಿ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-19 ರಲ್ಲಿ ಅರ್ಜಿಗಳನ್ನು ದಾಖಲೆಗಳೊಂದಿಗೆ ಅರ್ಹ ಪದವೀಧರರು ಮತ್ತು ಶಿಕ್ಷಕರು ನಿರ್ದಿಷ್ಟ ಪಡಿಸಿದ ಅಧಿಕಾರಿಗಳಿಗೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಈ ಅರ್ಜಿ ನಮೂನೆಗಳನ್ನು ಅರ್ಹ ಪದವೀಧರರು ಮತ್ತು ಶಿಕ್ಷಕರು ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿಗಳು /ತಹಶೀಲ್ದಾರ್/ನಿಯೋಜಿತ  ಅಧಿಕಾರಿಗಳು ರವರ ಕಚೇರಿಗಳಿಂದ ಮತ್ತು ಶಿಕ್ಷಣ ಸಂಸ್ಥೆಗಳಿಂದ ಪಡೆಯಬಹುದು ಅಥವಾ ಮುಖ್ಯ ಚುನಾವಣಾಧಿಕಾರಿರವರ ವೆಬ್ ಸೈಟ್ https://ceo.karnataka.gov.in/341/teachers-and-graduates-constituencies-2024/en ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಪದವೀಧರ ಕ್ಷೇತ್ರದಲ್ಲಿ ಸಾಮಾನ್ಯ ನಿವಾಸಿಯಾಗಿದ್ದು, ನವೆಂಬರ್ ಒಂದಕ್ಕೆ ಮೊದಲು ಕನಿಷ್ಠ ಮೂರು ವರ್ಷಗಳ ಕಾಲ ಅವರು ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು/ ಅಧಿಸೂಚಿತ ಸಂಸ್ಥೆಯಿಂದ ಡಿಪ್ಲೋಮೊ ಹೊಂದಿರಬೇಕು ಅಥವಾ ರಾಜ್ಯ ಮುಖ್ಯ ಚುನಾವಣಾಧಿಕಾರಿರವರು ಸಿದ್ದಪಡಿಸಿರುವ ಪದವೀಧರರಿಗೆ ಸಮಾನವಾದ ವಿದ್ಯಾರ್ಹತೆಗಳನ್ನು ಹೊಂದಿರಬೇಕು.

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಪದವೀಧರ ಕ್ಷೇತ್ರದಲ್ಲಿ ಸಾಮಾನ್ಯ ನಿವಾಸಿಯಾಗಿದ್ದು ಮತ್ತು ನವೆಂಬರ್ ಒಂದಕ್ಕೆ ಮೊದಲು ಆರು ವರ್ಷದೊಳಗೆ ಅರ್ಹ ವ್ಯಕ್ತಿ ನಿರ್ದಿಷ್ಟಪಡಿಸಿದ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಸತತವಾಗಿ ಮೂರು ವರ್ಷಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದೆಂತೆ ಭೋಧನೆಯಲ್ಲಿ ತೊಡಗಿರುವ ವ್ಯಕ್ತಿ ಅರ್ಹರಿರುತ್ತಾರೆ. 

ಶಿಕ್ಷಕರ ಕ್ಷೇತ್ರ ಮಾತದಾರರ ಪಟ್ಟಿಯಲ್ಲಿ  ನೋಂದಾಯಿಸಿಕೊಳ್ಳಲು ನಮೂನೆ 19 ರಲ್ಲಿ ಅರ್ಜಿಯನ್ನು ಸಲ್ಲಿಸಿ ಶಿಕ್ಷಕರ ಕ್ಷೇತ್ರದಲ್ಲಿ ಮತದಾರನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ಅನುಬಂಧ-2 ರಲ್ಲಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.

ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಸಂದರ್ಭದಲ್ಲಿ ನಮೂನೆ-18/ನಮೂನೆ-19 ರೊಂದಿಗೆ ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳ ದೃಢೀಕೃತ ಪ್ರತಿಯನ್ನು ಸಲ್ಲಿಸಬೇಕಾಗಿದ್ದು, ದಾಖಲೆಗಳನ್ನು ಗೊತ್ತುಪಡಿಸಿದ ಅಧಿಕಾರಿಗಳು ಅಥವಾ ಹೆಚ್ಚುವರಿ ನಿಯೋಜಿತ ಅಧಿಕಾರಿಗಳು  ಅಥವಾ ಸಂಬಂಧಪಟ್ಟ ಜಿಲ್ಲೆಯ ಗೆಜೆಟೆಡ್ ಅಧಿಕಾರಿ ಅಥವಾ ನೋಟರಿ ಸಾರ್ವಜನಿಕ ಇವರಿಂದ ದೃಢೀಕರಿಸಿ ಸಲ್ಲಿಸಬೇಕು .

ಈ ಅವಕಾಶವನ್ನು ಅರ್ಹ ಪದವೀಧರರು ಸದುಪಯೋಗಪಡಿಸಿಕೊಂಡು ಸಂಬಂಧಪಟ್ಟ ಬೆಂಗಳೂರು ಪದವೀಧರರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudeputy commissionerdistrictelectionkarnatakakmskmskannadamlc electionvoter list
2 FacebookTwitterPinterestEmail
cklbkrish

previous post
ಕಾಂಗ್ರೆಸ್ ಹೊಟ್ಟೆ ತುಂಬಿಸುತ್ತದೆ, ಬಿಜೆಪಿ ಭಾವನೆ ಕೆರಳಿಸುತ್ತದೆ
next post
ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ