Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜಭವನದಲ್ಲಿ ಪಸರಿಸಿದ ಕನ್ನಡದ ಕಂಪು

ಕನ್ನಡ ಕಂಪನ್ನು ಸಾರಿದ ಕಲಾವಿದರು:

by cklbkrish November 1, 2023
written by cklbkrish November 1, 2023 0 comments 2 minutes read
2FacebookTwitterPinterestEmail
94

ಕರ್ನಾಟಕ, ಕನ್ನಡಾಂಬೆಗೆ ನಮಿಸಿದ ರಾಜ್ಯಪಾಲರು

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಆರೋಗ್ಯಕರ ಮತ್ತು ಸಮೃದ್ಧವಾಗಿಸಲು ಹಾಗೂ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಎಂದು ಕರೆ ನೀಡಿದರು. ಅಲ್ಲದೆ, ರಾಜ್ಯದ ಜನತೆಗೆ ಕನ್ನಡ ಭಾಷೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದರು.

ರಾಜಭವನ, ಕರ್ನಾಟಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಕರ್ನಾಟಕ ರಾಜ್ಯವು ತನ್ನ ಐತಿಹಾಸಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಮತ್ತು ಕಲಾ ಸಾಹಿತ್ಯ, ಸಮನ್ವಯ ಮತ್ತು ಸಾಮರಸ್ಯಕ್ಕೆ ಹೆಸರುವಾಸಿಯಾಗಿದೆ ಎಂದರು.

ಈ ರಾಜ್ಯವು ತನ್ನ ನೈಸರ್ಗಿಕ ಸೌಂದರ್ಯ, ದೇವಾಲಯಗಳು ಮತ್ತು ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಕರ್ನಾಟಕ ರಾಜ್ಯವು ವಾಣಿಜ್ಯ ದೃಷ್ಟಿಯಿಂದ ಉತ್ತಮವಾಗಿ ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ರಾಜ್ಯವಾಗಿದ್ದು, ಸರ್ಕಾರ ಮತ್ತು ದಕ್ಷ ಆಡಳಿತವು ರಾಜ್ಯಕ್ಕೆ ವಿಶೇಷ ಗುರುತನ್ನು ನೀಡಿದೆ. ಕರ್ನಾಟಕ ರಾಜ್ಯವು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಪ್ರಗತಿ ಸಾಧಿಸಿದೆ. ದೇಶದ ಅಭಿವೃದ್ಧಿ ಮತ್ತು ಪ್ರಗತಿಗೆ ಗಣನೀಯ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ.

ಶಿಕ್ಷಣ, ಆರೋಗ್ಯ, ಕೃಷಿ, ಮಾಹಿತಿ ಮತ್ತು ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೈಗಾರಿಕೆ ಮತ್ತು ವಾಣಿಜ್ಯ, ಸ್ಟಾರ್ಟ್‌ಅಪ್‌ಗಳು, ಸಂಶೋಧನಾ ಕೇಂದ್ರಗಳು, ಏರೋಸ್ಪೇಸ್, ​​ಕೃತಕ ಬುದ್ಧಿಮತ್ತೆ, ಇಂಧನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರ್ನಾಟಕ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಪ್ರಶಂಸಿದರು.

ಕರ್ನಾಟಕ ರಾಜ್ಯೋತ್ಸವವು ಹೆಮ್ಮೆ ಮತ್ತು ಏಕತೆಯ ಆಚರಣೆಯಾಗಿದೆ. ನಮ್ಮ ಐತಿಹಾಸಿಕ, ಧಾರ್ಮಿಕ, ಸಾಂಸ್ಕೃತಿಕ ಸಂಪ್ರದಾಯಗಳನ್ನು ನೆನಪಿಟ್ಟುಕೊಳ್ಳಲು ಮತ್ತು ನಮ್ಮ ರಾಜ್ಯದ ಸಾಧನೆಗಳನ್ನು ಗೌರವಿಸಲು ಇದು ಒಂದು ಅವಕಾಶ. ಈ ದಿನ  ಕರ್ನಾಟಕ ರಾಜ್ಯದ ಕಲೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ವಿವಿಧ ವರ್ಣರಂಜಿತ ಮತ್ತು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಗಿದೆ. ಅದ್ಭುತವಾದ ಕಾರ್ಯಕ್ರಮಗಳನ್ನು ಪ್ರಸ್ತುತಿಪಡಿಸಿದೆ ಎಲ್ಲಾ ಕಲಾವಿದರಿಗೆ ಅಭಿನಂದನೆಗಳು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸಂಸ್ಥಾಪನಾ ದಿನದ ಜೊತೆಗೆ ಇಂದು ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ಕೇರಳ, ತಮಿಳುನಾಡು, ಹರಿಯಾಣ, ಪಂಜಾಬ್ ಮತ್ತು ಅಂಡಮಾನ್ ನಿಕೋಬಾರ್, ಚಂಡೀಗಢ, ದೆಹಲಿ, ಲಕ್ಷದ್ವೀಪ ಮತ್ತು ಪುದುಚೇರಿಗಳ ಸಂಸ್ಥಾಪನಾ ದಿನವೂ ಆಗಿದೆ. ಈ ಎಲ್ಲಾ ರಾಜ್ಯಗಳ ನಿವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೇಳಿದರು.

 ಕನ್ನಡ ಕಂಪನ್ನು ಸಾರಿದ ಕಲಾವಿದರು:

ಸಂಜೆ ರಾಷ್ಟ್ರಗೀತೆ ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮವು ವಿದ್ಯುಕ್ತವಾಗಿ ಆರಂಭಗೊಂಡಿತು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು. ಮೊದಲಿಗೆ ನಾಗಚಂದ್ರಿಕಾ ಕೆ. ಎಸ್. ಮತ್ತು ತಂಡದವರು ” ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’… ‘ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು’… ಡಾ. ದ. ರಾ ಬೆಂದ್ರೆ ಅವರ ರಚನೆಯ “ಒಂದೇ ಒಂದೇ ಕರ್ನಾಟಕ ಒಂದೇ ” ಗೀತ ಗಾಯನದ ಪ್ರಸ್ತುತಿಯ ಜೊತೆ ಜೊತೆಗೆ ನೆರದಿದ್ದ ಪ್ರೇಕ್ಷಕರು ಕೈ ಕರತಾಳ ತಟ್ಟುವ ಮೂಲಕ ಸಂಗೀತವನ್ನು ಆಸ್ವಾದಿಸಿದರು.

ನಂತರ ಬೆಂಗಳೂರಿನ ರಂಗ ಚಾರಕ ಟ್ರಸ್ಟ್ ವತಿಯ ಹಿದಾಯುತ್ ಅಹಮದ್ ಅವರ ತಂಡದಿಂದ ಸಂಪ್ರದಾಯದ ಡೊಳ್ಳು ಕುಣಿತ ರಂಜಿಸಿತು.

ಧರಣಿ ಟಿ.ಕಶ್ಯಪ್ ಮತ್ತು ತಂಡದವರಿಂದ ಕುವೆಂಪು ಅವರ ಬಾಗಿಲೋಳು ಕೈ ಮುಗಿದು ಒಳಗೆ ಬಾ ಯಾತ್ರಿಕನೇ… ಕುಚುಪುಡಿ ಶೈಲಿಯ ನೃತ್ಯ ಪ್ರದರ್ಶನ ಹಾಗೂ ತೊಡೆಯ ಮಂಗಳಂ ಮತ್ತು ಅಂಬಾ ಜಗದ್ ಜನನಿ –  ಭರತನಾಟ್ಯ ಮನ ಸೂರೆಗೊಂಡಿತು.

ಶ್ರೀನಿವಾಸ ಅಸ್ಥನಾ ಮತ್ತು ತಂಡದವರು ಯಕ್ಷಗಾನದಲ್ಲಿ ಪ್ರಸ್ತುತ ಪಡಿಸಿದ ‘ಮಹಿಷ ವಧೆ’ ಪ್ರಸಂಗದ ಮೂಲಕ ತಾಯಿ ದೇವಿಯ ಮಹಾತ್ಮೆ ಬಹಳ ಸುಂದರವಾಗಿ ಮೂಡಿಬಂತು.

ರಾಜಭವನದ ವಿಶೇಷ ಕಾರ್ಯದರ್ಶಿಗಳಾದ ಆರ್ ಪ್ರಭುಶಂಕರ್ ಅವರು ಸ್ವಾಗತ ಭಾಷಣ ಮಾಡಿದರು. ಇನ್ನು ಕಾರ್ಯಕ್ರಮದ ಸಂಪೂರ್ಣ ನಿರೂಪಣೆ ಹಾಗೂ ಕನ್ನಾಟಕ ರಾಜ್ಯ ಸೇರಿದಂತೆ ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ಕೇರಳ, ತಮಿಳುನಾಡು, ಹರಿಯಾಣ, ಪಂಜಾಬ್ ಮತ್ತು ಅಂಡಮಾನ್ ನಿಕೋಬಾರ್, ಚಂಡೀಗಢ, ದೆಹಲಿ, ಲಕ್ಷದ್ವೀಪ ಮತ್ತು ಪುದುಚೇರಿಗಳ ರಾಜ್ಯಗಳ ಸಂಸ್ಥಾಪನಾ ದಿನಗಳ ಅಂಗವಾಗಿ ರಾಜ್ಯಗಳ ಕುರಿತ ಮಾಹಿತಿಯನ್ನು ವಿಸ್ತಾರವಾಗಿ ವಿವರಣೆ ನೀಡಿದ ಚೈತ್ರಾ ಅವರು ರಾಜ್ಯಪಾಲರ ಅಭಿನಂದನೆಗೆ ಭಾಜನರಾದರು. ನಂತರ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ತೆರೆ ಬಿದ್ದಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurugovernorkannadakarnatakakarnataka rajyotsavakmskmskannadarajabhavan
2 FacebookTwitterPinterestEmail
cklbkrish

previous post
ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ 102 ಕೋಟಿ ಹಣ
next post
68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ