28
೬೮ ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಧಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಇತರೆ ಗಣ್ಯರಿಗೆ ಸಂತೋಷ ಕೂಟವನ್ನು ಆಯೋಜಿಸಿದ್ದರು.
ಈ ಸಂತೋಷ ಕೂಟದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದರು.