Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ 102 ಕೋಟಿ ಹಣ

ಸರ್ಕಾರದಲ್ಲಿ ಭುಗಿಲೆದ್ದ ಆಂತರಿಕ ಕಲಹ

by cklbkrish November 1, 2023
written by cklbkrish November 1, 2023 0 comments 2 minutes read
2FacebookTwitterPinterestEmail
84

ಸಿಎಂ, ಡಿಸಿಎಂ ರಾಜೀನಾಮೆಗೆ ಎನ್.ರವಿಕುಮಾರ್ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಬಳಿ ಇತ್ತೀಚೆಗೆ ಸಿಕ್ಕಿದ 102 ಕೋಟಿ ಹಣಕ್ಕೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು. ಈ ಹಣ ಯಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಬಂದಿದ್ದಾರೆ. ಇವರಿಬ್ಬರು ಬಂದ ತಕ್ಷಣ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ ಗುರಿ ನಿಶ್ಚಯ ಮಾಡಲು ಅವರು ಬಂದಿದ್ದಾರೆಂದು ಮಾತನಾಡುತ್ತಾರೆ.

ಪಂಚ ರಾಜ್ಯಗಳಿಗೆ ಚುನಾವಣೆ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಗುರಿ ನಿಗದಿಪಡಿಸಲು ಬಂದಿದ್ದಾರೆ ಎಂದು ಜನರು ಮಾತನಾಡುತ್ತಿದ್ದು, ಇದಕ್ಕೆ ಕಾಂಗ್ರೆಸ್ಸಿಗರು ಉತ್ತರ ಕೊಡಬೇಕೆಂದು ಆಗ್ರಹಿಸಿದರು.

ಅವರು ಬಂದು ಹೋಗಿ ಕೆಲವೇ ದಿನಗಳಲ್ಲಿ ಇಬ್ಬರು ಗುತ್ತಿಗೆದಾರರ ಮನೆಗಳಲ್ಲಿ 102 ಕೋಟಿ ರೂ. ಹಣ ಸಿಕ್ಕಿತ್ತು. ಅದು ಕಾಂಗ್ರೆಸ್ಸಿನದೇ ಹಣ, ಸಿಎಂ, ಡಿಸಿಎಂ ಅವರೇ ಸಂಗ್ರಹಿಸಿದ ಹಣ, ಅದನ್ನು ಪಂಚರಾಜ್ಯಗಳ ಚುನಾವಣೆಗೆ ಸಂಗ್ರಹಿಸಿ ಕಳಿಸಲು ಇಡಲಾಗಿತ್ತು ಎಂಬುದು ಜಗಜ್ಜಾಹೀರಾಗಿದೆ ಎಂದು ಆರೋಪಿಸಿದರು.

ಇವರು ಕನ್ನಡದ ಸಂಪತ್ತನ್ನು ರಕ್ಷಿಸುವುದಿಲ್ಲ; ಕನ್ನಡದ ಜಲ, ನೆಲ, ಭಾಷೆಯನ್ನು ರಕ್ಷಿಸುವುದಿಲ್ಲ. ಅದರ ಬಗ್ಗೆ ಮಾತನಾಡುವ ನೈತಿಕ ಸ್ಥೈರ್ಯ ಈ ಸರಕಾರಕ್ಕೆ ಇಲ್ಲ ಎಂದು ಟೀಕಿಸಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಈಗ 2600 ಕ್ಯೂಸೆಕ್ಸ್ ನೀರನ್ನು ಪ್ರತಿದಿನ ಬಿಡಲಾಗುತ್ತಿದೆ. ಸುಪ್ರೀಂ ಕೋರ್ಟ್, ಪ್ರಾಧಿಕಾರದ ಮುಂದೆ ಯಾಕೆ ನೀರು ಬಿಡಲು ಅಸಾಧ್ಯ ಎಂದು ಸಮರ್ಪಕ ವಾದ ಮಂಡಿಸಲು ಇವರಿಂದ ಆಗುತ್ತಿಲ್ಲ. ತಮಿಳುನಾಡಿಗೆ ಸೋಲುವುದೇ ಇವರ ಕೆಲಸ ಎಂದು ಆಕ್ಷೇಪಿಸಿದರು.

ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಪಾದಯಾತ್ರೆ ಮಾಡಿದರು. ಮೇಕೆದಾಟು ವಿಚಾರ ಈಗ ಮಾತನಾಡುತ್ತಿಲ್ಲ ಯಾಕೆ? ತಮಿಳುನಾಡು ಒಪ್ಪಿಗೆ ಕೊಡಬೇಕೆಂಬ ಯೋಚನೆಯಿಂದ ಈಗ ಸಿಎಂ, ಡಿಸಿಎಂ ತೆಪ್ಪಗೆ ಇದ್ದಾರೆ. ಇದರ ಬಗ್ಗೆ ಮಾತನಾಡಿ ಎಂದು ಆಗ್ರಹಿಸಿದರು.

ಈಗ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಬಂದಿದ್ದಾರೆ. ಸಚಿವ ಸ್ಥಾನ ಸಿಗದೆ ಬೇಸರ ವ್ಯಕ್ತಪಡಿಸುವವರನ್ನು ಸಮಾಧಾನ ಪಡಿಸಲು ನಿಗಮ, ಮಂಡಳಿ ಅಧ್ಯಕ್ಷತೆಗೆ ಶಾಸಕರನ್ನು ನೇಮಿಸಲು ಇವರು ಬಂದಿದ್ದಾರೆ. ಬಹುಶಃ ನಿಗಮಗಳಿಗೆ ಇಷ್ಟು ಎಂದು ಗುರಿ ನಿರ್ಧರಿಸಲು ಬಂದಿರಬೇಕು. ಇದನ್ನು ಸ್ಪಷ್ಟಪಡಿಸಿ ಎಂದು ಸವಾಲೆಸೆದರು.

ಸರ್ಕಾರದಲ್ಲಿ ಭುಗಿಲೆದ್ದ ಆಂತರಿಕ ಕಲಹ

ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಇದನ್ನು ಶಮನ ಮಾಡಲು ಡಿ.ಕೆ.ಶಿವಕುಮಾರವರು ಬೆಳಗಾವಿಗೆ ಹೋಗುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಪರಮೇಶ್ವರರ ಮನೆಗೆ ಹೋಗುತ್ತಾರೆ. ಬೆಳಗಾವಿಗೆ ಹೋದ ಸಂದರ್ಭದಲ್ಲಿ ಒಬ್ಬ ಶಾಸಕರೂ ಡಿ.ಕೆ.ಶಿವಕುಮಾರವರ ಸ್ವಾಗತಕ್ಕೆ ಬಂದಿಲ್ಲ. ಸಿದ್ದರಾಮಯ್ಯ ಅವರು ಗೃಹ ಸಚಿವ ಪರಮೇಶ್ವರರ ಮನೆಗೆ ಹೋದಾಗ ಡಿ.ಕೆ.ಶಿವಕುಮಾರವರು ಬೆಂಗಳೂರಿನಲ್ಲೇ ಇದ್ದರೂ ಅವರನ್ನು ಊಟಕ್ಕೆ ಕರೆದಿಲ್ಲ. ಹೀಗೆ ಆಂತರಿಕ ಕಲಹ, ಗುದ್ದಾಟ ಮುಗಿಲು ಮುಟ್ಟಿದೆ ಎಂದು ಆರೋಪಿಸಿದರು.

ನಮ್ಮ ರಮೇಶ ಜಾರಕಿಹೊಳಿ ಅವರು ಹೇಳಿದ್ದು ಸತ್ಯವಾಗಿದೆ. ಈ ಸರ್ಕಾರ ಏನು ಬೇಕಾದರೂ ಆಗಬಹುದೆಂದು ಸರಿಯಾಗಿಯೇ ಹೇಳಿದ್ದಾರೆ. ಸಿ.ಡಿ.ಪ್ರಕರಣದ ಸಂಬಂಧ ತನಿಖೆ ನಡೆಸಲಿ. ರಮೇಶ್ ಜಾರಕಿಹೊಳಿ ಅವರು ಹೇಳಿದ್ದರಲ್ಲಿ ಸತ್ಯವಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಬೆಳಗಾವಿ, ಚಿಕ್ಕೋಡಿ ಕರ್ನಾಟಕದ ಅವಿಭಾಜ್ಯ ಅಂಗ. ಕರ್ನಾಟಕವನ್ನು ಭಾಗ ಮಾಡುವ ಪ್ರಶ್ನೆಯೇ ಇಲ್ಲ. ಇದು ದಶಕಗಳ ಹಿಂದೆಯೇ ನಿರ್ಧಾರವಾದ ವಿಚಾರ. ಮಹಾರಾಷ್ಟ್ರದವರ ಲಾಭಕ್ಕಾಗಿ ಆಗಿಂದಾಗ್ಗೆ ಗಲಾಟೆ ಮಾಡುತ್ತಾರೆ; ಬಸ್ ಸುಟ್ಟು ಹಾಕುತ್ತಾರೆ.

ಗಡಿ ಮೀರಿ ನಮ್ಮ ರಾಜ್ಯದ ಒಳಗಡೆ ಪ್ರವೇಶಿಸುತ್ತಾರೆ. ಪೊಲೀಸರ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಕರ್ನಾಟಕ ಅಖಂಡವಾಗಿ ಇರಬೇಕೆಂಬುದು ಬಿಜೆಪಿ ನಿರ್ಧಾರ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjpcongressdemandkannadakarnatakakmsravikumar
2 FacebookTwitterPinterestEmail
cklbkrish

previous post
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಂತೋಷ ಕೂಟ
next post
ರಾಜಭವನದಲ್ಲಿ ಪಸರಿಸಿದ ಕನ್ನಡದ ಕಂಪು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ