Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸರ್ಕಾರ ಪತನ ತಂತ್ರಕ್ಕೆ ಆಪರೇಷನ್ ಹಸ್ತಾ ಪ್ರತಿ ತಂತ್ರ

ಸಿಎಂ-ಡಿಸಿಎಂಗೆ ಮುನ್ನೆಚ್ಚರಿಕೆ ವಹಿಸಲು ಹೈಕಮಾಂಡ್ ಸೂಚನೆ

by cklbkrish November 1, 2023
written by cklbkrish November 1, 2023 0 comments 2 minutes read
2FacebookTwitterPinterestEmail
96

ಸಿಎಂ-ಡಿಸಿಎಂಗೆ ಮುನ್ನೆಚ್ಚರಿಕೆ ವಹಿಸಲು ಹೈಕಮಾಂಡ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ಥಿತರಗೊಳಿಸಲು ನಡೆಸುತ್ತಿರುವ ತಂತ್ರಕ್ಕೆ ಆಪರೇಷನ್ ಹಸ್ತ ಮಾಡಲು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ.

ಅಧಿಕಾರ ಹಂಚಿಕೆಯ ಬಿಕ್ಕಟ್ಟು, ಸರ್ಕಾರವನ್ನುಉಳಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಇಂದು ದಿಢೀರನೆ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗೌಪ್ಯ ಮಾತುಕತೆ ನಡೆಸಿದರು.

ಸರ್ಕಾರ ಪತನಗೊಳಿಸಲು ಬಿಜೆಪಿ ಭಾರಿ ಸಂಚು ನಡೆಸುತ್ತಿದ್ದು,  ಈ ಬಗ್ಗೆ ಮುನ್ನೆಚ್ಚರಿಕೆಯ ಕ್ರಮ ವಹಿಸಲು ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ,.

ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ್ ಸಭೆ ನಡೆಸಿದರು.

ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಅಲ್ಲದೆ, ಪಕ್ಷದ ಕೆಲವು ಮುಖಂಡರ ಚಲನವಲನದ ಬಗ್ಗೆ ಗಮನ ಹರಿಸುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಸೂಚಿಸಿದ್ದಾರೆ.

ಗೌಪ್ಯ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ,“ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ.

 ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು”ಎಂದು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು.

 ಪಕ್ಷದ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ನೀತಿಗಳ ಬಗ್ಗೆ ಯೋಚಿಸಿ, ಸಲಹೆ ನೀಡುವತ್ತ ಗಮನಹರಿಸಬೇಕು.

ಸಚಿವರು ತಮ್ಮ ಇಲಾಖೆ ಹಾಗೂ ಉಸ್ತುವಾರಿ ಜಿಲ್ಲೆಗಳ ಬಗ್ಗೆ ಗಮನಹರಿಸಬೇಕು. ಅಧಿಕಾರ ಹಂಚಿಕೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಆ ರೀತಿ ಮಾತಾಡುವುದು ಪಕ್ಷದ ಶಿಸ್ತು ಉಲ್ಲಂಘಿಸಿದಂತಾಗುತ್ತದೆ.

ಅಶಿಸ್ತಿನ ಹೆಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾರೇ ಮಾಡಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ವಿಪ್ ಜಾರಿ ಮಾಡಬೇಕಾಗುತ್ತದೆ.

ನಿಮ್ಮ ಧ್ವನಿಗೆ ಪಕ್ಷದಲ್ಲಿ ಅವಕಾಶವಿದೆ. ನೀವು ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಅಥವಾ ನನ್ನ ಬಳಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ಹೊರತು ಸಾರ್ವಜನಿಕವಾಗಿ ಅಲ್ಲ.

ಇಂದು ನಡೆದ ಸುದೀರ್ಘ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತು ಚರ್ಚೆ ಮಾಡಲಾಯಿತು. ಕರ್ನಾಟಕ ರಾಜ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯ ಕೇಂದ್ರವಾಗಿದೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 20ಕ್ಕೂ ಹೆಚ್ಚು ಸಂಸದರನ್ನು ಆಯ್ಕೆ ಮಾಡುವ ವಿಶ್ವಾಸ ನಮಗಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ನಮಗೆ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಜನರು ಸಂತೋಷವಾಗಿದ್ದಾರೆ. ಇದರಿಂದ ಲೋಕಸಭೆ ಚುನಾವಣೆಯಲ್ಲಿ ನಮಗೆ ಗೆಲವು ನಿಶ್ಛಿತವಾಗಿದೆ.

 ಇಂದು ಕರ್ನಾಟಕ ರಾಜ್ಯೋತ್ಸವ ದಿನವಾಗಿದ್ದು, ಈ ಪವಿತ್ರ ದಿನ ಎಲ್ಲಾ ಕನ್ನಡಿಗರಿಗೂ ಶುಭಕೊರುತ್ತೇನೆ. ಈ ರಾಜ್ಯವನ್ನು ನಾವೆಲ್ಲ ಒಟ್ಟಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯೋಣ.

ಮುಂದಿನ 15 ದಿನಗಳಲ್ಲಿ ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲು ತಿಳಿಸಿದ್ದೇವೆ ಎಂದರು.

ಕಾಂಗ್ರೆಸ್ ಗ್ಯಾರಂಟಿಯನ್ನು ತಳಮಟ್ಟದಲ್ಲಿ ಪರಿಣಾಮಕಾರಿ ಜಾರಿ ಮಾಡಿ ಜನರಿಗೆ ತಲುಪಿಸಲು ನಿರಂತರವಾಗಿ ಗ್ಯಾರಂಟಿ ಯೋಜನೆಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಈ ಯೋಜನೆಗಳ ಜಾರಿಗೆ ಎಲ್ಲೇ ತೊಂದರೆಯಾದರೂ ಅದಕ್ಕೆ ಸಂಬಂಧಿಸಿದ ಸಚಿವರು ಸಮಸ್ಯೆ ಬಗೆಹರಿಸಲಿದ್ದಾರೆ.

ಇನ್ನು ನಿಗಮ ಮಂಡಳಿಗಳ ನೇಮಕ ಬಗ್ಗೆ ಇಂದು ಚರ್ಚೆ ಮಾಡಲಾಯಿತು. ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ.

ನಿಗಮ-ಮಂಡಳಿಗೆ ಇನ್ನೂ ಎರಡು ವಾರ ನೇಮಕವಿಲ್ಲ

ಸದ್ಯ ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿದ್ದು, ಇದೇ ತಿಂಗಳು 17ರಂದು ಚುನಾವಣೆ ಪೂರ್ಣಗೊಂಡ ತಕ್ಷಣವೇ ನಾನು ಕರ್ನಾಟಕಕ್ಕೆ ಆಗಮಿಸಿ ನಿಗಮಮಂಡಳಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ.”

ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, “ಈ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರುಗಳಾಗಿದ್ದಾರೆ.

ಅವರಿಗೆ ಸಂಘಟನಾ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdk shivakumarkarnatakakc venugopalkmskmskannadaSiddaramaiahstrategysurjevala
2 FacebookTwitterPinterestEmail
cklbkrish

previous post
ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಘೋಷಣೆ
next post
ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಸಮೂಹ ವಾದ್ಯಮೇಳ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ