Saturday, May 24, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 24, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಅನಗತ್ಯ ಹೇಳಿಕೆ ಭವಿಷ್ಯ ಹಾಳಾದೀತು: ಡಿಕೆಶಿ

by cklbkrish November 4, 2023
written by cklbkrish November 4, 2023 0 comments 2 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
Share 4FacebookTwitterPinterestEmail
36

ಲೋಕಸಭೆ ಚುನಾವಣೆಗೆ ಸಂಭವನೀಯ ಮೂವರು ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡಬೇಕು.

ಬೆಂಗಳೂರು: ಕೆಲವು ಸಚಿವರು, ಶಾಸಕರು ಅನಗತ್ಯ ಹೇಳಿಕೆ ನೀಡಿ ಪಕ್ಷದ ಮತ್ತು ಅವರ ಭವಿಷ್ಯ ಹಾಳು ಮಾಡಿಕೊಳ್ಳುತ್ತಾರೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ಉಪಹಾರ ಕೂಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯೇ ನಮಗೆ ಮುಂದಿನ ಗುರಿ. ವರಿಷ್ಠರು ನೀಡಿರುವ ೨೦ರ ಮ್ಯಾಜಿಕ್ ಸಂಖ್ಯೆ ನಾವು ಮುಟ್ಟಬೇಕಿದೆ.

ಇಂದಿನ ಸಭೆಯಲ್ಲಿ ಚುನಾವಣೆ ಸೇರಿದಂತೆ ಅಭಿವೃದ್ಧಿ ಮತ್ತು ಇತರ ವಿಷಯಗಳ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಚಿವರುಗಳಿಗೆ ಉಸ್ತುವಾರಿ ವಹಿಸಲಾಗಿದೆ.

ಉಸ್ತುವಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಜತೆಗೂಡಿ ಸಂಭವನೀಯ ಮೂವರು ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡಬೇಕು. ಅದರಲ್ಲಿ ಕೆಲವರು ಮಾಡಿದ್ದಾರೆ. ಉಳಿದವರ ಕೆಲಸ ಪ್ರಗತಿಯಲ್ಲಿದೆ ಎಂದರು.

ಬರದ ಬಗ್ಗೆ ನಾವು ಈಗಾಗಲೇ ಸರ್ಕಾರಕ್ಕೆ ವರದಿ ನೀಡಿದ್ದೇವೆ. ಬಿಜೆಪಿಯವರು ರಾಜಕೀಯವಾಗಿ ಈಗ ಜನರ ಬಳಿಗೆ ಹೋಗುತ್ತಿದ್ದಾರೆ. ಅದರ ಬದಲು ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬರ ಪರಿಹಾರ ಕೊಡಿಸಲು ಎಂದು ಹೇಳಿದರು.

 ಇನ್ನು ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರವಾಗಿ ಅನಗತ್ಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿಗಳು ನೇರವಾಗಿ ತಿಳಿಸಿದ್ದಾರೆ. ನಾನು ಸೇರಿದಂತೆ ಯಾರೊಬ್ಬರೂ ಈ ವಿಚಾರವಾಗಿ ಮಾತನಾಡುವುದು ಬೇಡ.

ಮಾಧ್ಯಮಗಳು ಪ್ರಶ್ನೆ ಕೇಳುತ್ತಾರೆ, ಆದರೂ ಪ್ರತಿಕ್ರಿಯೆ ನೀಡಬೇಡಿ. ಮಾಧ್ಯಮಗಳ ರಾಜಕೀಯ ಬಲೆಗೆ ಬೀಳಬೇಡಿ ಎಂದು ಸೂಚಿಸಿದ್ದೇವೆ. ರಾಜ್ಯದ ಜನ ಐದು ವರ್ಷ ಅಧಿಕಾರ ಮಾಡಲು ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಈ ಅವಧಿಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಅನಗತ್ಯ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿ ಹಾಗೂ ಅವುಗಳನ್ನು ಜನರಿಗೆ ತಲುಪಿಸುವುದರ ಬಗ್ಗೆ ಪರಿಶೀಲನಾ ಸಭೆ ಮಾಡುವಂತೆ ಸೂಚಿಸಲಾಗಿದೆ. ಇಂದು ಕೇವಲ ೧೫ ಸಚಿವರ ಜತೆ ಚರ್ಚೆ ಮಾಡಲಾಗಿದ್ದು, ಉಳಿದವರ ಜತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಲೋಕಸಭೆ ಚುನಾವಣೆ, ಗ್ಯಾರಂಟಿ ಯೋಜನೆ ಜಾರಿ ನಮ್ಮ ಪ್ರಮುಖ ಆದ್ಯತೆ ಎಂದು ಹೇಳಿದರು.”

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಆಯಾ ಸಚಿವರಿಗೆ ಆ ಜಿಲ್ಲೆ ಜವಾಬ್ದಾರಿ ನೀಡಿಲ್ಲ. ಭೈರತಿ ಸುರೇಶ್ ಅವರು ಕೋಲಾರ ಉಸ್ತುವಾರಿಗಳು, ಆದರೆ ಅಭ್ಯರ್ಥಿ ಆಯ್ಕೆ ಸಂಬಂಧ ಅವರಿಗೆ ಮಂಡ್ಯ ಹಾಗೂ ಮೈಸೂರು ಜಿಲ್ಲೆ ನೀಡಲಾಗಿದೆ.

ಹಾಸನ ಉಸ್ತುವಾರಿ ರಾಜಣ್ಣ ಅವರಿಗಿದ್ದರೂ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಚೆಲುವರಾಯಸ್ವಾಮಿ ಅವರಿಗೆ ನೀಡಿದ್ದೇವೆ. ರಾಮನಗರ ಉಸ್ತುವಾರಿ ರಾಮಲಿಂಗಾರೆಡ್ಡಿ ಅವರಿದ್ದರೂ ವೆಂಕಟೇಶ್ ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಜಾರ್ಜ್ ಅವರು ಕೇಂದ್ರ ಚುನಾವಣಾ ಸಮಿತಿಯಲ್ಲಿರುವ ಕಾರಣ ಅವರಿಗೆ ಈ ಜವಾಬ್ದಾರಿ ನೀಡಿಲ್ಲ ಎಂದು ತಿಳಿಸಿದರು.

ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ ವರದಿ ನೀಡುವಂತೆ ಸಚಿವರಿಗೆ ತಿಳಿಸಿದ್ದೇವೆ. ಪ್ರತಿ ಲೋಕಸಭೆ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳ ಬಗ್ಗೆ ಸಮೀಕ್ಷೆ ಮಾಡಿಸುತ್ತೇವೆ. ಜನವರಿಗೂ ಮುನ್ನ ಅಭ್ಯರ್ಥಿ ಪಟ್ಟಿ ಪ್ರಕಟಿಸಿ ಕ್ಷೇತ್ರದಲ್ಲಿ ಓಡಾಡುವಂತೆ ತಿಳಿಸುತ್ತೇವೆ.

ಹಣ ಬೇಡ ಅಕ್ಕಿ ಕೊಡಿ ಎನ್ನುತ್ತಿದ್ದಾರೆ

ಕೆಲವರು ಹಣ ಬೇಡ ಅಕ್ಕಿ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಅದನ್ನು ಪೂರೈಸಲು ಅಗತ್ಯವಾಗಿರುವ ಟೆಂಡರ್ ಕರೆಯುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ನಮ್ಮ ಸರ್ಕಾರ ಮಾಡುತ್ತಿರುವುದು ಸಾಮಾಜಿಕ ಆರ್ಥಿಕ ಸಮೀಕ್ಷೆ. ಈ ವರದಿ ಬಗ್ಗೆ ಕೆಲವು ಸಮುದಾಯದವರಿಗೆ ಅನುಮಾನಗಳಿದ್ದು, ಸರ್ಕಾರ ಅವುಗಳನ್ನು ಬಗೆಹರಿಸುತ್ತದೆ. ಈವರೆಗೂ ವರದಿ ಬಗ್ಗೆ ಸರಿಯಾದ ತೀರ್ಮಾನಗಳಾಗಿಲ್ಲ. ವರದಿ ಇನ್ನು ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರಿಗೆ ಐಟಿ, ಇಡಿ ನೋಟೀಸ್ ಕಿರುಕುಳ ಆರಂಭವಾಗಿದೆಯಾ ಎಂದು ಕೇಳಿದಾಗ, ಈಗ ಆ ವಿಚಾರ ಬೇಡ. ಯಾರು ನೋಟಿಸ್ ನಿಡುತ್ತಾರೋ, ಏನು ಮಾಡುತ್ತಾರೋ ಮಾಡಲಿ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಿಸಿರಬಹುದು. ನನ್ನ ಎಲ್ಲಾ ದಾಖಲೆಗಳು ಸಾರ್ವಜನಿಕವಾಗಿವೆ.

ನಾನು ಹಾಗೂ ನನ್ನ ಹೆಂಡತಿ ಇಬ್ಬರೂ ತೆರಿಗೆ ಪಾವತಿದಾರರು. ಒಂದೇ ಕುಟುಂಬವಾದರೂ ನನ್ನದು ಬೇರೆ, ಆಕೆಯದ್ದು ಬೇರೆ. ನಾನು ಹೆಚ್ಚಿಗೆ ಆಸ್ತಿ ಗಳಿಕೆ ಮಾಡಿದ್ದೇನಾ ಇಲ್ಲವೇ ಎಂದು ನೀವೇ ಲೆಕ್ಕ ಹಾಕಬಹುದು.

ಇದು ಸಿಬಿಐಗೆ ನೀಡುವ ಪ್ರಕರಣವಲ್ಲ ಎಂದು ಅಡ್ವಕೇಟ್ ಜೆನರಲ್ ಹೇಳಿದ್ದರೂ ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಈ ಪ್ರಕರಣವನ್ನು ಸಿಬಿಐಗೆ ನೀಡಿದ್ದಾರೆ. ನೋಟೀಸ್ ಕೊಡುವುದಾದರೆ ಕೊಡಲಿ. ನಾನು ಅದಕ್ಕೆ ಉತ್ತರ ನೀಡುತ್ತೇನೆ. ಬಿ ರಿಪೋರ್ಟ್ ಬರೆಯುವ ಕಾಲ ಬರುತ್ತದೆ ಎಂದು ತಿಳಿಸಿದರು.

Share this:

  • WhatsApp
  • Post
  • Tweet
  • Print
  • Email
bengalurudk shivakumarkarnatakakmskmskannadanewspolitics
Share 4 FacebookTwitterPinterestEmail
cklbkrish

previous post
ಅನಗತ್ಯ ವೆಚ್ಚಗಳಿಗೆ ಕಡಿವಾಣಕ್ಕೆ ಸರ್ಕಾರ ಸೂಚನೆ
next post
ವರಿಷ್ಠರ ಎಚ್ಚರಿಕೆ ಕಡೆಗಣಿಸಿದರೆ ಮುಳುವಾಗಬಹುದು

You may also like

ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ

May 24, 2025

ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

May 23, 2025

ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

May 23, 2025

ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

May 22, 2025

ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್: ಕುಮಾರಸ್ವಾಮಿ

May 22, 2025

ಕಪ್ಪು ಹಣ: ಡಾ.ಪರಮೇಶ್ವರ್‌ಗೆ ಮತ್ತೆ ಇ.ಡಿ. ಸಂಕಟ

May 22, 2025

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025

Categories

  • Special Story (181)
  • ಅಂಕಣ (102)
  • ಉದ್ಯೋಗ (241)
  • ದಿನ ಭವಿಷ್ಯ (110)
  • ರಾಜಕೀಯ (1,588)
  • ರಾಜ್ಯ (1,878)
  • ರಾಷ್ಟ್ರ (1,850)
  • ವಿಶ್ಲೇಷಣೆ (184)
  • ಶಿಕ್ಷಣ (320)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ

    May 24, 2025
  • ಸಿ.ಡಿ.ಫ್ಯಾಕ್ಟರಿ ಮಾಲಿಕರಿಂದ ಡಾ.ಪರಮೇಶ್ವರ್‌ಗೆ ಸಂಕಷ್ಟ

    May 23, 2025
  • ರೂಪದರ್ಶಿ ತಮನ್ನಾ ಪರ ಎಂ.ಬಿ.ಪಾಟೀಲ್ ಬ್ಯಾಟಿಂಗ್

    May 23, 2025

KMS Special

  • ಜಾತಿಗಣತಿ: ಮರು ಸಮೀಕ್ಷೆಗೆ ಪಟ್ಟು

    May 22, 2025
  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರವಾಸಿಗರಿಗೆ ಜೂನ್ 1ರಿಂದ ಶಕ್ತಿಸೌಧ ವೀಕ್ಷಣೆ ಅವಕಾಶ

May 24, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ