Saturday, October 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, October 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೀವರಾಶಿಯೂ ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು

by KM Shivaraju November 4, 2023
written by KM Shivaraju November 4, 2023 0 comments 1 minutes read
2FacebookTwitterPinterestEmail
96

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುತ್ತಲೇ ಅಭಿವೃದ್ಧಿ ಸಾಧಿಸುವುದೇ ಸುಸ್ಥಿರ ಅಭಿವೃದ್ಧಿಯಾಗಿದ್ದು, ಜೀವರಾಶಿಯೂ ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ,
ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಬೆಂಗಳೂರು ಘೋಷಣೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರಕೃತಿ ಮತ್ತು ಪರಿಸರ, ಅರಣ್ಯ ಉಳಿದಾಗ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಹೀಗಾಗಿ ನಾವು ನೀವೆಲ್ಲರೂ ಭೂಗ್ರಹದ ರಕ್ಷಕರಾಗಬೇಕು ಎಂದು ಕರೆ ನೀಡಿದರು.
ಭಾರತದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾದ ಬೆಂಗಳೂರು, ತಾಂತ್ರಿಕ ನಾವೀನ್ಯತೆಯ ಕೇಂದ್ರ ಮಾತ್ರವಲ್ಲ, ಸುಸ್ಥಿರ ಅಭಿವೃದ್ಧಿಯ ಅನ್ವೇಷಣೆಯಲ್ಲಿಯೂ ಮುಂಚೂಣಿಯಲ್ಲಿದೆ. ಜಗತ್ತು ಇಂದು ಎದುರಿಸುತ್ತಿರುವ ಸವಾಲುಗಳಿಗೆ ಕರ್ನಾಟಕ ಅದರಲ್ಲೂ ಬೆಂಗಳೂರಿನ ಉದ್ಯಮಿಗಳು ಪರಿಹಾರ ಸಂಶೋಧಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಶೃಂಗಸಭೆ ಸಕಲ ಜೀವರಾಶಿಗಳೂ ಬದುಕಲು ಇರುವ ಏಕೈಕ ಭೂಗ್ರಹ ಮತ್ತು ಅದರ ಎಲ್ಲಾ ನಿವಾಸಿಗಳಿಗೆ ಸುಸ್ಥಿರ ಭವಿಷ್ಯದ ಭರವಸೆಗಳನ್ನು ಖಾತ್ರಿಪಡಿಸಬೇಕು. ನಗರೀಕರಣ, ಸಂಚಾರ ದಟ್ಟಣೆ, ಮಾಲಿನ್ಯದಿಂದಾಗಿ ಇಂದು ಶುದ್ಧ ಗಾಳಿ, ಶುದ್ಧ ನೀರಿನ ಲಭ್ಯತೆಯ ಸಮಸ್ಯೆಗಳು ಎದುರಾಗಿವೆ. ಈ ಶೃಂಗಸಭೆಯ ವಸ್ತು ವಿಷಯ, ” ಸುಸ್ಥಿರ ಅಭಿವೃದ್ಧಿ ನಾಯಕತ್ವ,” ಎಂಬುದಾಗಿದ್ದು, ದೂರದೃಷ್ಟಿಯ ನಾಯಕತ್ವದ ಅಗತ್ಯವನ್ನು ಪ್ರತಿಪಾದಿಸಬೇಕು ಎಂದರು.
ಸುಸ್ಥಿರ ಅಭಿವೃದ್ಧಿ ಎಂಬುದು ಕೇವಲ ಒಂದು ಪರಿಕಲ್ಪನೆಯಲ್ಲ; ಇದು ನೈತಿಕತೆಯಾಗಬೇಕು. ಬದ್ಧತೆಯಾಗಬೇಕು. ಇಂದು ನಾವು ಕೈಗೊಳ್ಳುವ ನಿರ್ಧಾರ, ಕ್ರಮಗಳಿಂದ ಭವಿಷ್ಯದ ಕ್ಷೇಮದೊಂದಿಗೆ ರಾಜೀ ಮಾಡಿಕೊಳ್ಳದಂತಿರಬೇಕು. ಭವಿಷ್ಯದ ಪೀಳಿಗೆಗೆ ಸಮೃದ್ಧ ಭೂಮಿಯನ್ನು
ಸುಸ್ಥಿರ ಅಭಿವೃದ್ಧಿಯ ಪ್ರಯೋಜನಗಳು ಕಟ್ಟಕಡೆಯ ವ್ಯಕ್ತಿಗೂ ಲಭ್ಯವಾಗಬೇಕು, ನಾವು ಅಂತರ್ಗತ ಬೆಳವಣಿಗೆಗೆ ಆದ್ಯತೆ ನೀಡಬೇಕು, ಸಾಮಾಜಿಕ ನ್ಯಾಯ, ಅಸಮಾನತೆಯನ್ನು ನಿವಾರಣೆಗೆ ಒತ್ತು ನೀಡಬೇಕು ಎಂದುರ.
ಇಂಗಾಲದ ಹೊರಸೂಸುವಿಕೆ ತಗ್ಗಿಸಲು ಶುದ್ಧ ಇಂಧನಕ್ಕೆ ಹೆಚ್ಚು ಒತ್ತು ನೀಡಬೇಕು. ಸುಸ್ಥಿರ ಅಭಿವೃದ್ಧಿಗೆ ನಾವೀನ್ಯಪೂರ್ಣ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು. ಕೃಷಿ, ಇಂಧನ ಮತ್ತು ಆರೋಗ್ಯ ಆರೈಕೆ ಕ್ಷೇತ್ರದಲ್ಲೂ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣದ ಹಂತದ್ಲೇ ಸುಸ್ಥಿರ ಅಭಿವೃದ್ಧಿಯ ಪರಿಕಲ್ಪನೆಯನ್ನು ಮೂಡಿಸಬೇಕು ಎಂದು ಹೇಳಿದರು.
ಸುಸ್ಥಿರ ಅಭಿವೃದ್ಧಿಗೆ ದೀರ್ಘಕಾಲೀನ ದೃಷ್ಟಿಕೋನದ ಅಗತ್ಯವಿದೆ ಎಂದು ಪ್ರತಿಪಾದಿಸಿದ ಈಶ್ವರ ಖಂಡ್ರೆ, ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನದ ಪರಿಣಾಮವನ್ನು ತಗ್ಗಿಸುವ ಮತ್ತು ನಮ್ಮ ಪರಿಸರವನ್ನು ರಕ್ಷಿಸುವ ಕಾರ್ಯತಂತ್ರಗಳು ಈ ಶೃಂಗಸಭೆಯಲ್ಲಿ ಹೊರಹೊಮ್ಮಲಿ ಎಂದು ಆಶಿಸಿದರು.
ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಹೇಳಿದ ಅವರು,
ಜೀವವೈವಿಧ್ಯತೆಯನ್ನು ರಕ್ಷಿಸುವ ಮತ್ತು ಪುನಃಸ್ಥಾಪಿಸುವ ತಕ್ಷಣದ ಅಗತ್ಯವನ್ನು ಚರ್ಚಿಸುವತ್ತ ಈ ಶೃಂಗಸಭೆ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.
ಶೃಂಗದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಿವೃತ್ತ ಮುಖ್ಯಕಾರ್ಯದರ್ಶಿ ಎ. ರವೀಂದ್ರ ಮತ್ತಿತರರು ಪಾಲ್ಗೊಂಡಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakmskmskannada
2 FacebookTwitterPinterestEmail
KM Shivaraju

previous post
ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ಆಯೋಜನೆ
next post
ಸಂಗೀತ ತರಬೇತಿ ಕೇಂದ್ರಕ್ಕೆ ಸವಿತಾ ಸಮಾಜದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

You may also like

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (595)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,088)
  • ರಾಜ್ಯ (2,403)
  • ರಾಷ್ಟ್ರ (2,367)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

    October 23, 2026
  • ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

    October 22, 2026
  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026

KMS Special

  • ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

    October 23, 2026
  • ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

    October 22, 2026
  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ