ದೇವನಹಳ್ಳಿಯಲ್ಲಿರುವ ಸಂಗೀತ ಕೇಂದ್ರ
ಬೆಂಗಳೂರು: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ದೇವನಹಳ್ಳಿ ಟೌನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ ಕೇಂದ್ರಕ್ಕೆ ೨೦೨೩-೨೪ನೇ ಸಾಲಿಗೆ (ಡೋಲು-೧೦ ಮತ್ತು ನಾದಸ್ವರ-೦೪ ಖಾಲಿ ಸ್ಥಾನಗಳು) ಖಾಲಿ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-೨(ಎ)ರಡಿ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವೆಂಬರ್ ೧೩ ರ ಸಂಜೆ ೫.೦೦ ಗಂಟೆ.
ಅರ್ಜಿ ಪಡೆಯಲು ಹಾಗೂ ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಮಿನಿ ವಿಧಾನಸೌಧದ ಹಿಂಭಾಗ, ಡಿವಿಎಂ ಕಾಲೋನಿ, ದೇವನಹಳ್ಳಿ ಟೌನ್ ಇಲ್ಲಿ ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಅರ್ಹತೆಗಳು
ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-೨(ಎ)ರಡಿ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು.
ಕನಿಷ್ಠ ವಯೋಮಿತಿ ೧೦ ವರ್ಷ ಹಾಗೂ ಗರಿಷ್ಠ ವಯೋಮಿತಿ ೧೫ ವರ್ಷ. ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. ೨ ಲಕ್ಷ.
ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ ೮೦೨೭೬೮೨೦೫೯ (ಸಮಯ ಬೆಳಿಗ್ಗೆ ೧೦.೦೦ ರಿಂದ ಸಂಜೆ ೫.೩೦ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.