Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರ ನಿರ್ಲಕ್ಷಿಸಿದರೂ  ನಾವು ರೈತರ  ಹಿತ ಕಾಯುತ್ತೇವೆ: ಸಚಿವ  ಚಲುವರಾಯಸ್ವಾಮಿ

by cklbkrish November 6, 2023
written by cklbkrish November 6, 2023 0 comments 2 minutes read
2FacebookTwitterPinterestEmail
69
ಕೇಂದ್ರ  ಸರ್ಕಾರದ ಬರ ಆಧ್ಯಯನ ತಂಡ ಬಂದು ಪರಿಶೀಲನೆ ನಡೆಸಿ ತೆರಳಿದರೂ ಅನುದಾನ ದೊರೆತಿಲ್ಲ

ರಾಯಚೂರು: ರಾಜ್ಯದ 216 ತಾಲ್ಲೂಕುಗಳಲ್ಲಿ ಬರವಿದ್ದರೂ  ಇನ್ನೂ ‌ಕೇಂದ್ರ ಸರ್ಕಾರದ ನೆರವು ಸಿಕ್ಕಿಲ್ಲ.  ಆದರೆ, ರಾಜ್ಯ ಸರ್ಕಾರ ರೈತರ ಹಿತ ಕಾಯುವುದನ್ನು ಮರೆಯುವುದಿಲ್ಲ  ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ  ತಿಳಿಸಿದರು.

ರಾಯಚೂರು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಕೇಂದ್ರ  ಸರ್ಕಾರದ ಬರ ಆಧ್ಯಯನ ತಂಡ ಬಂದು ಪರಿಶೀಲನೆ ನಡೆಸಿ ತೆರಳಿದೆ, ಆದರೂ ಈವರಗೆ ಅನುದಾನ ದೊರೆತಿಲ್ಲ. ಹಾಗಾಗಿ  ನ. 9 ರಂದು ನಡೆಯುವ ಸಂಪುಟ ಸಭೆಯಲ್ಲಿ ರೈತರ ನೆರವು ಕುರಿತು ಚರ್ಚಿಸಿಲಾಗುವುದು ಎಂದರು.

ಬರದ ಸಂದರ್ಭದಲ್ಲಿಯೂ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಕೂಲಿ ಹಣದ ಬಾಕಿ  3 ತಿಂಗಳಿಂದ ಬೆಡುಗಡೆ ಮಾಡಿರಲಿಲ್ಲ. ತಾವು ಸೇರಿದಂತೆ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ ಖರ್ಗೆ ಮತ್ತಿತರರು ‌ದೆಹಲಿಗೆ ತೆರಳಿ ಮನವಿ ಮಾಡಿದ ನಂತರ 720 ಕೋಟಿ‌ ರೂ.  ಬಿಡುಗಡೆ ಮಾಡಿದ್ದಾರೆ  ಎಂದು ಅವರು ಹೇಳಿದರು.

ರೈತರ ಅನುಕೂಲಕ್ಕಾಗಿ ಏಕೀಕೃತ ‌ಕರೆ ಕೇಂದ್ರ

ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಎಂದಿನಂತೆ ಇದ್ದರೂ ಬಳಕೆ ಹೆಚ್ಚಿರುವುದರಿಂದ  ಪಂಪ್ ಸೆಟ್ ಗಳಿಗೆ 5-7 ಗಂಟೆ  ಶಿಫ್ಟ್ ಆಧಾರದಲ್ಲಿ  ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ರಸಗೊಬ್ಬರ ಬಿತ್ತನೆ ಬೀಜದ ಪೂರೈಕೆ ಕೊರತೆ ಇಲ್ಲ. ರೈತರ ಅನುಕೂಲಕ್ಕಾಗಿ ಏಕೀಕೃತ ‌ಕರೆ ಕೇಂದ್ರ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಕೃಷಿ ನವೋದ್ಯಮ   ಪ್ರೋತ್ಸಾಹ, ಹೈಟೆಕ್ ಹಾರ್ವೆಸ್ಟ್ ಹಬ್ ಸ್ಥಾಪನೆ ಯೋಜನೆ ಜಾರಿಗೊಳಿಸಲಾಗುತ್ತಿದೆ.

 ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.ಜಲ‌ಸಂರಕ್ಷಣೆಗೆ ಆಧ್ಯತೆ ನೀಡಲಾಗುತ್ತಿದೆ ಎಂದರು.

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ  ಹಾಗೂ ಅಧಿಕಾರಿಗಳು ಹತ್ತಿ ಬೆಳೆ ಪರಿಶೀಲನೆ ನಡೆಸಿದರು.
ರಸಗೊಬ್ಬರ ನಿಯಮಿತ ‌ಬಳಕೆ ಬಗ್ಗೆ ಜಾಗೃತಿ‌ ಮೂಡಿಸಲು ಸೂಚನೆ

ರೈತರಿಗೆ ರಸಗೊಬ್ಬರ, ಕೀಟನಾಶಕಗಳ   ನಿಯಮಿತ ಬಳಕೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಭೂಮಿಯ ಸಾರ ಉಳಿಸಿ. ಜಿಲ್ಲೆಯಲ್ಲಿ ಈ ‌ಬಾರಿ ಬಿತ್ತನೆ  ಕಡಿಮೆಯಾದರೂ ರಸಗೊಬ್ಬರ ಬಳಕೆ ಹೆಚ್ಚಾಗಿದೆ. ಇದು ಮಣ್ಣಿನ ಫಲವತ್ತತೆ ಮೇಲೆ ಪ್ರತಿಕೂಲ ಪರಿಣಾಮ  ಬೀರಲಿದೆ ಹಾಗಾಗಿ  ಕೃಷಿಕರಿಗೆ ಅರಿವು ಮೂಡಿಸಿ ಎಂದರು.

ಕೃಷಿ ವಿಜ್ಞಾನಿಗಳು  ರೈತರಿಗೆ  ಲಾಭದಾಯಕ ಹಾಗೂ ಆರೋಗ್ಯ ಪೂರ್ಣ ಬೇಸಾಯ ಪದ್ದತಿ ಬಗ್ಗೆ ಅರಿವು ಮೂಡಿಸಬೇಕು. ಕೃಷಿ ಇಲಾಖೆ ಅಧಿಕಾರಿಗಳು ಇದನ್ನು ಸಮನ್ವಯ ಮಾಡಬೇಕಿದೆ ಎಂದು ಸಚಿವರು ನಿರ್ದೇಶನ ನೀಡಿದರು.

ರೈತರಿಗೆ ಬೆಳೆ ವಿಮೆ ಅನುಕೂಲಗಳ ಬಗ್ಗೆ ಅರಿವು ಮೂಡಿಸಬೇಕು.ಅಲ್ಲದೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸಬೇಕು. ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನದ ಬಗ್ಗೆ ಮನೆ ಮನೆ ಸಮೀಕ್ಷೆ ನಡೆಸಿ ಖಚಿತ ಪಡಿಸಿಕೊಳ್ಳಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ  ಬೆಳೆ ಸಮೀಕ್ಷೆ ಹಾಗೂ  ಕೆವೈಸಿ ಅಪ್ಡೇಟ್‌

ಜಿಲ್ಲೆಯಲ್ಲಿ  ಬೆಳೆ ಸಮೀಕ್ಷೆ ಹಾಗೂ  ಕೆವೈಸಿ ಅಪ್ಡೇಟ್‌ 100ರಷ್ಟು ಸಾಧನೆಯಾಗಬೇಕು.  ಜಿಲ್ಲೆಯಲ್ಲಿ ಜಾಗೃತ  ದಳ ಚುರುಕು ಮಾಡಿ  ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಸಂಪೂರ್ಣ ತಡೆದು ತಪ್ಪಿತಸ್ಥರ ವಿರುದ್ದ ಕ್ರಮ ವಹಿಸಿ ಎಂದು ಸಚಿವರು ನಿರ್ದೇಶನ ನೀಡಿದರು. ಜಲಾನಯನ ಅಭಿವೃದ್ಧಿ, ಜಲಸಂರಕ್ಷಣೆ ಬಗ್ಗೆ  ಹೆಚ್ಚಿನ ಗಮನ ಹರಿಸಿ.ಸಿರಿಧಾನ್ಯ ಬೆಳೆ  ಪ್ರದೇಶ ವಿಸ್ತರಣೆ ಪ್ರೋತ್ಸಾಹಿಸಿ ಎಂದು ಚಲುವರಾಯಸ್ವಾಮಿ ಹೇಳಿದರು.

ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೊಸ್ ರಾಜ್,  ಮಾನ್ವಿ ಶಾಸಕರಾದ ಹಂಪಯ್ಯ ನಾಯಕ್, ಜಿಲ್ಲಾಧಿಕಾರಿ  ಎಲ್. ಚಂದ್ರಶೇಖರ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಡ್ವೆ ರಾಹುಲ್ ತುಕಾರಾಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚಂದ್ರಶೇಖರ್ ನಾಯಕ್  ಅಪರ ಕೃಷಿ ನಿರ್ದೇಶಕರಾದ ವೆಂಕಟರಾಮ ರೆಡ್ಡಿ ಮತ್ತಿತರರು ಹಾಜರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
centralchaluvarayaswamycrop losskarnatakakmskmskannadarayachuru
2 FacebookTwitterPinterestEmail
cklbkrish

previous post
ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯಪಾಲರು
next post
ನೀರಾವರಿ ಪಂಪ್‍ಸೆಟ್‍ಗಳಿಗೆ  7 ಗಂಟೆಗಳ ವಿದ್ಯುತ್ ಸರಬರಾಜು: ಮುಖ್ಯಮಂತ್ರಿ ಸಿದ್ದರಾಮಯ್ಯ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ