Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

by cklbkrish November 6, 2023
written by cklbkrish November 6, 2023 0 comments 1 minutes read
2FacebookTwitterPinterestEmail
57
ಪ್ರಶಸ್ತಿ ಪ್ರದಾನ ಮಾಡಿದ ನ್ಯಾ.ಎಂ.ಎನ್. ವೆಂಕಟಾಚಲಯ್ಯ ಅವರು; ನಾಡೋಜ ಮಹೇಶ್ ಜೋಶಿ ಉಪಸ್ಥಿತಿ

ಬೆಂಗಳೂರು: ದೇಶ ಕಂಡ ಏಕೈಕ ಕನ್ನಡಿಗ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿಯನ್ನು ಇಂದಿಲ್ಲಿ ಪ್ರದಾನ ಮಾಡಲಾಯಿತು.

ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಅವರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾಜಿ ಪ್ರಧಾನಿಗಳಿಗೆ ಶುಭ ಕೋರಿದ ಎಂ.ಎನ್.ವೆಂಕಟಾಚಲಯ್ಯ ಅವರು ಮಾತನಾಡಿ, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ನುಡಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ನಾಡಿಗೆ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರು ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
awardbengaluruhd devegowdahddhousekarnatakakasapakmskmskannadanews
2 FacebookTwitterPinterestEmail
cklbkrish

previous post
ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ
next post
ಬಿಬಿಎಂಪಿ ವಾರ್‌ ರೂಂಗೆ ಡಿಕೆಶಿ ಭೇಟಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ