Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬರಕ್ಕಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ನಿಮಗೆ ದೊಡ್ಡ ಸಂಕಷ್ಟವಾಯಿತೇ!

by KM Shivaraju November 6, 2023
written by KM Shivaraju November 6, 2023 0 comments 3 minutes read
2FacebookTwitterPinterestEmail
60

ರೈತ ಸಾಂತ್ವನ ಯಾತ್ರೆಗೆ ಮುಖ್ಯಮಂತ್ರಿ ಟೀಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ಬೆಂಗಳೂರು:ತಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ಕೊಟ್ಟಿದ್ದಾರೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಕಾಲೆಳೆದಿದ್ದಾರೆ.

ಅಲ್ಲದೆ; ವಿಶ್ವ ವಿಖ್ಯಾತ ವಿತ್ತ ತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ.

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ.

‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ, ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ.

ಬರದ ಜತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧರು ನಾವಲ್ಲ ಎಂದು ಸಿಎಂಗೆ ಖಾರವಾಗಿ ಪ್ರಶ್ನಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡ ಹಾಗೂ ಅವರ ಕುಟುಂಬದೊಂದೊಗೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ.

ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ, ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು, ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ, ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ, ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಕೆಲಸ ಮಾಡಬಾರದು ಎಂಬುದು ನನ್ನ ವಿನಮ್ರ ಪ್ರಶ್ನೆ ಎಂದಿದ್ದಾರೆ ಕುಮಾಸ್ವಾಮಿ.

ರಾಜ್ಯದ ೨೩೬ ತಾಲೂಕುಗಳ ಪೈಕಿ ೨೧೬ ಬರಪೀಡಿತ ಎಂಬ ಲೆಕ್ಕ ಕೊಟ್ಟಿದ್ದೀರಿ. ೩೩,೭೧೦ ಕೋಟಿ ರೂ. ಮೌಲ್ಯದ ಬೆಳೆ ಹಾನಿ ಆಗಿದ್ದು, ಕೇಂದ್ರಕ್ಕೆ ೧೭,೯೦೧ ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಜೊತೆಗೆ; ೩೪೩ ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ವಿಶ್ವ ವಿಖ್ಯಾತ ವಿತ್ತತಜ್ಞ!!

ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿ ವಿಶ್ವವಿಖ್ಯಾತ ವಿತ್ತ ತಜ್ಞರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತ ಖಾತೆಯನ್ನು ತಮ್ಮಲ್ಲಿಯೇ ’ಜೋಪಾನ’ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ನೀವು ಈ ರಾಜ್ಯದ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ನಿಮಗೆ ಪ್ರತಿಷ್ಠೆ.

ಪ್ರಧಾನಿ ಅವರನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವಿಲ್ಲ, ರಾಜ್ಯದಲ್ಲಿನ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್ ಹಸ್ತ, ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗ್‌ಗಳಲ್ಲಿಯೇ ಭಾರೀ ಬ್ಯುಸಿ ಆಗಿರುವ ನಿಮಗೆ ಜನರ ಅಹವಾಲನ್ನು ದೆಹಲಿಗೆ ಕೊಂಡೊಯ್ಯಲು ಸಮಯವಾದರೂ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ, ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿ ಹಾಗೂ ಯಾವ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ, ಎಷ್ಟು ಅರ್ಜಿ ಕೊಟ್ಟಿದ್ದೀರಿ ಎಂಬ ವಿವದ ನೀಡಿ.

ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸುತ್ತಿಲ್ಲವೇ.

ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಟಿಂಗ್‌ಗಳಲ್ಲಿ ಆಪರೇಷನ್ ಹಸ್ತದ ಚರ್ಚೆ!

ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಆಪರೇಷನ್ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಳಲು ತೋಡಿಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಹಣ ಹೊಂಚಲು ಕರ್ನಾಟಕವನ್ನು ಹೇಗೆ ದೋಚುವುದೆಂದು ರಹಸ್ಯ ಪಾಠ ಮಾಡುತ್ತಿದ್ದೀರಿ.

ಜೆಡಿಎಸ್, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್ ಮಾಡಲು ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ತರಾಟೆಗೆ ಆರೋಪಿಸಿದದಾರೆ.

ಗ್ಯಾರಂಟಿ ಬೋರ್ಡ್ ಹಾಕಿಕೊಂಡು ಹಾದಿ-ಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ತಮ್ಮ ಸರ್ಕಾರದ ಭದ್ರತೆಯ ಗ್ಯಾರಂಟಿ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ.

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿ ಸನ್ಮಾನ್ಯ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruindiakarnatakakmskmskannadapolitics
2 FacebookTwitterPinterestEmail
KM Shivaraju

previous post
ದೀಪಾವಳಿಗೆ ಕೆಸ್ಆರ್ʼಟಿಸಿಯಿಂದ 2000 ಹೆಚ್ಚುವರಿ ಬಸ್
next post
ಸಿರಿಧಾನ್ಯ ದಿನನಿತ್ಯದ ಆಹಾರ ಭಾಗವನ್ನಾಗಿಸಿಕೊಳ್ಳಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ