ಬೆಂಗಳೂರು: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 09,16, ಹಾಗೂ 23 ರಂದು ಬೆಳಗ್ಗೆ 11ರಿಂದ ಅಪರಾಹ್ನ 3 ರವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದಲ್ಲಿನ “ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರ ಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನ ಪ್ರತಿಗಳು ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ನೋಂದಣಿಯನ್ನು ಮಾಡಿಸಿಕೊಳ್ಳಬಹುದಾಗಿದೆ.
ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-09 ಅಥವಾ ದೂರವಾಣಿ ಸಂಖ್ಯೆ: 080-29560045, 9611128522 ಗೆ ಸಂಪರ್ಕಿಸಬಹುದು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.