Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

6 ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ವಿಜಯಪುರ ಸೂಕ್ತ

by cklbkrish November 9, 2023
written by cklbkrish November 9, 2023 0 comments 1 minutes read
0FacebookTwitterPinterestEmail
211
ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಿಗೆ ಪ್ರಾಥಮಿಕ ವರದಿ ಸಲ್ಲಿಸಿದ ಉನ್ನತ ಸಮಿತಿ

ಬೆಂಗಳೂರು: ವಿಜಯಪುರ ಜಿಲ್ಲೆಯನ್ನು ಇಂಧನ ಕ್ಷೇತ್ರದ ಸಾಧನಗಳು, ಮಶಿನರಿ ಮತ್ತು ಎಕ್ವಿಪ್ಮೆಂಟ್, ನಾನ್-ಮೆಟಲಿಕ್ ಖನಿಜೋತ್ಪನ್ನಗಳು, ಕೃಷಿ ಮತ್ತು ಕೃಷಿ ಆಧಾರಿತ ಉತ್ಪನ್ನಗಳು, ನ್ಯೂಟ್ರಾಸ್ಯುಟಿಕಲ್ಸ್, ಮೆಡಿಸಿನಲ್ ಮತ್ತು ಬೊಟಾನಿಕಲ್ ಉತ್ಪನ್ನಗಳು ಮತ್ತು ವಿಶೇಷ ಅಲಾಯ್ ಹಾಗೂ ಲೋಹೋತ್ಪನ್ನಗಳ ತಯಾರಿಕೆ ಹೀಗೆ ಒಟ್ಟು ಆರು ಕೈಗಾರಿಕಾ ವಲಯಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಅತ್ಯುತ್ತಮ ಅವಕಾಶಗಳಿವೆ ಎಂದು ಉನ್ನತ ಮಟ್ಟದ ಸಮಿತಿಯೊಂದು ಹೇಳಿದೆ.

ಈ ಸಂಬಂಧದ ಪ್ರಾಥಮಿಕ ವರದಿಯನ್ನು ಅದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಗೆ ಸಲ್ಲಿಸಿದೆ. ಏಕಸ್ ಎಸ್ಇಜೆಡ್ ಮತ್ತು ದೆಹಲಿಯ ಸಿಬಿಆರ್ ಇ ಸಂಸ್ಥೆಯ ಪ್ರತಿನಿಧಿಗಳು ಈ ವರದಿಯನ್ನು ಸಿದ್ಧಪಡಿಸಿದ್ದಾರೆ. ಪಾಟೀಲ ಅವರು ನೂತನ ಸರ್ಕಾರದಲ್ಲಿ ಕೈಗಾರಿಕಾ ಇಲಾಖೆಯ ಸಚಿವ ಹುದ್ದೆ ಸ್ವೀಕರಿಸಿದ ಕೆಲದಿನಗಳಲ್ಲೇ ತಮ್ಮ ತವರು ಜಿಲ್ಲೆಯನ್ನು ಕೈಗಾರಿಕಾ ದೃಷ್ಟಿಯಿಂದಲೂ ಮುಂಚೂಣಿಗೆ ತರುವ ಉದ್ದೇಶದಿಂದ ಸಿಬಿಆರ್ ಇ ಸಂಸ್ಥೆಗೆ ವರದಿ ನೀಡುವಂತೆ ಕೋರಿದ್ದನ್ನು ಇಲ್ಲಿ ಸ್ಮರಿಸಬಹುದು.

ವರದಿ ಸ್ವೀಕರಿಸಿ ಮಾತನಾಡಿದ ಸಚಿವರು, ‘ನಮ್ಮಲ್ಲಿ ಎಲ್ಲ ಉದ್ಯಮಗಳೂ ಬೆಂಗಳೂರಿನಲ್ಲಿ ಕೇಂದ್ರೀಕೃತಗೊಂಡಿವೆ. ಆದರೆ ಬಿಯಾಂಡ್ ಬೆಂಗಳೂರು ಉಪಕ್ರಮದಡಿ ರಾಜಧಾನಿಯ ಆಚೆಗೂ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ಸ್ಥಾಪನೆಗೆ ಹೇರಳ ಅವಕಾಶಗಳಿವೆ. ವಿಜಯಪುರ ಜಿಲ್ಲೆಯಲ್ಲಂತೂ ನೀರು, ವಿದ್ಯುತ್ ಮತ್ತು ಜಮೀನಿನ ಲಭ್ಯತೆಗೆ ಸಮಸ್ಯೆ ಇಲ್ಲ. ಇದರ ಹಿಂದೆ ಪ್ರಾದೇಶಿಕ ಅಸಮತೋಲನ ನಿವಾರಣೆಯ ಗುರಿಯೂ ಇದೆ’ ಎಂದರು.

ವಿಜಯಪುರ ರಾಜ್ಯದ ಪ್ರಮುಖ ಕೈಗಾರಿಕಾ ತಾಣ

 ವರದಿಯಲ್ಲಿ ಗುರುತಿಸಿರುವ ಆರು ವಲಯಗಳಲ್ಲಿ ಮುಂಚೂಣಿಯಲ್ಲಿರುವ ಕಂಪನಿಗಳನ್ನೂ ಹೇಳಲಾಗಿದೆ. ಇವರನ್ನೆಲ್ಲ ಕರೆಸಿ, ಮುಂದಿನ ಹೆಜ್ಜೆಗಳನ್ನು ಇಡಲಾಗುವುದು. ಒಟ್ಟಿನಲ್ಲಿ ವಿಜಯಪುರವನ್ನು ರಾಜ್ಯದ ಪ್ರಮುಖ ಕೈಗಾರಿಕಾ ತಾಣವನ್ನಾಗಿ ಮಾಡಲಾಗುವುದು. ಈ ಅಧ್ಯಯನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸಿದ್ದರು ಎಂದು ಅವರು ವಿವರಿಸಿದರು.

ಇಂಧನ ಕ್ಷೇತ್ರದ ಸಾಧನ-ಸಲಕರಣೆಗಳ ತಯಾರಿಕೆಯಲ್ಲಿ ವಿಕ್ರಂ ಸೋಲಾರ್, ವೋಲ್ಟಾಸ್, ಶ್ನೀಡರ್ ಎಲೆಕ್ಟ್ರಿಕ್, ಸಾಲಾಸರ್ ಟೆಕ್ನೋ ಎಂಜಿನಿಯರಿಂಗ್ ಲಿಮಿಟೆಡ್ ಕಂಪನಿಗಳನ್ನು ಗುರುತಿಸಲಾಗಿದೆ. ಹಾಗೆಯೇ ಲೋಹೋತ್ಪನ್ನಗಳ ವಲಯದಲ್ಲಿ ಟಾಟಾ ಸ್ಟೀಲ್, ಜಿಂದಾಲ್, ಮಶಿನರಿಯಲ್ಲಿ ಎಬಿಬಿ, ಮುಕುಂದ್ ಬಜಾಜ್ ಮತ್ತು ಸೀಮನ್ಸ್, ನ್ಯೂಟ್ರಾಸ್ಯುಟಿಕಲ್ಸ್ ಕ್ಷೇತ್ರದಲ್ಲಿ ಇಮಾಮಿ, ಹಿಮಾಲಯ ವೆಲ್ನೆಸ್, ನೋವಸ್ ಲೈಫ್ ಸೈನ್ಸಸ್ ಮತ್ತು ಝೋಯಿಕ್ ಫಾರ್ಮಸುಟಿಕಲ್ಸ್ ಕಂಪನಿಗಳನ್ನು ಪರಿಗಣಿಸಲಾಗಿದೆ ಎಂದು ಅವರು ನುಡಿದರು.

ಈ ಕಂಪನಿಗಳು ಉತ್ತಮ ರಸ್ತೆ, ನೀರು, ವಿದ್ಯುತ್, ಕೌಶಲ ಕೇಂದ್ರಗಳು, ತ್ಯಾಜ್ಯ ನಿರ್ವಹಣೆ ವ್ಯವಸ್ಥೆ, ಬಂದರುಗಳ ಲಭ್ಯತೆ ಮುಂತಾದ ಮೂಲಸೌಕರ್ಯಗಳನ್ನು ನಮ್ಮಿಂದ ಕೋರಿವೆ. ಇವುಗಳನ್ನು ಒದಗಿಸಲು ಸರಕಾರವು ತ್ವರಿತ ಗತಿಯಲ್ಲಿ ಕೆಲಸ ಮಾಡಲಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಬಂಡವಾಳ ಹರಿವು ಮತ್ತು ಉದ್ಯೋಗ ಸೃಷ್ಟಿ ಹೆಚ್ಚಳ ಸಾಧ್ಯವಾಗಲಿದೆ ಎಂದು ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ಏಕಸ್ ಇನ್ಫ್ರಾದ ವ್ಯವಸ್ಥಾಪಕ ನಿರ್ದೇಶಕ ವಿಕ್ರಮ್ ಎಸ್ ಅಣ್ಣಪ್ಪ, ಸಿಬಿಆರ್.ಇ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಸೌರವ್ ಹಾಜ್ರಾ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruDevelopmentIndustrial sectorIndustrykarnatakakmskmskannadamb patilvijayapura
0 FacebookTwitterPinterestEmail
cklbkrish

previous post
ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ತಿದ್ದುಪಡಿಗೆ ಒಪ್ಪಿಗೆ
next post
ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ – ಹೈಮ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ