Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ – ಹೈಮ್

by cklbkrish November 9, 2023
written by cklbkrish November 9, 2023 0 comments 2 minutes read
3FacebookTwitterPinterestEmail
296
ಹಮಾಸ್ ವಿರುದ್ಧದ ಹೋರಾಟದ ಬಗ್ಗೆ ಕುಮಾರಸ್ವಾಮಿ ಅವರಿಗೆ ವಿವರಣೆ ನೀಡಿದ ಇಸ್ರೇಲ್ ಕಾನ್ಸುಲೇಟ್ ಜನರಲ್

ಬೆಂಗಳೂರು: ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ – ಹೈಮ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಹೈಮ್ ಅವರು, ಬಹು ಮುಖ್ಯವಾಗಿ ಕರ್ನಾಟಕ ಮತ್ತು ಇಸ್ರೇಲ್ ನಡುವಿನ ಬಾಂಧವ್ಯದ ಬಗ್ಗೆ ಚರ್ಚಿಸಿದರು.

ಅಲ್ಲದೆ,  ಹಮಾಸ್ ವಿರುದ್ಧ ನಡೆಸಲಾಗುತ್ತಿರುವ ನಿರ್ಣಾಯಕ ಹೋರಾಟದ ಬಗ್ಗೆಯೂ  ಅವರು ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದರು. ಯುದ್ಧ ಮುಗಿದು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಮೇಲೆ ಕೃಷಿ, ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ, ತಂತ್ರಜ್ಞಾನ ವಿನಿಮಯ,  ಸಾಂಸ್ಕೃತಿಕ ಸಂಬಂಧಗಳು ಸೇರಿದಂತೆ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಕೆಲಸ ಮಾಡಲು ಉತ್ಸುಕವಾಗಿರುವುದಾಗಿ ತಿಳಿಸಿದರು.

ಕರ್ನಾಟಕ – ಇಸ್ರೇಲ್ ಬಾಂಧವ್ಯ ಸೇರಿ ಯುದ್ಧದ ಬಗ್ಗೆಯೂ ಚರ್ಚೆ

ಮಾತುಕತೆ ವೇಳೆ ಹಮಾಸ್ ಉಗ್ರರು ಇಸ್ರೇಲ್, ಅಮೆರಿಕ ಸೇರಿ ವಿವಿಧ ದೇಶಗಳ ಮಕ್ಕಳು, ವೃದ್ಧರು, ಮಹಿಳೆಯರನ್ನು ಅಪರಣ ಮಾಡಿರುವ ಅಂಶವನ್ನು ಪ್ರಸ್ತಾಪಿಸಿ ಗದ್ಗದಿತರಾದರು. ಇಂಥ ಸಂಕಷ್ಟ ಸಮಯದಲ್ಲಿ ಭಾರತವು ಇಸ್ರೇಲ್ ಪರವಾಗಿ ನಿಂತಿರುವುದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು. ಹಾಗೂ ಕಾಣದ ಕೆಲ ಶಕ್ತಿಗಳು ಹಮಾಸ್ ಗೆ ಆರ್ಥಿಕ, ಶಸ್ತ್ರಾಸ್ತ್ರ ನೆರವು ನೀಡುತ್ತಿರುವ ಬಗ್ಗೆ ಅತೀವ ಕಳವಳ ವ್ಯಕ್ತಪಡಿಸಿದರು.

2018ರಲ್ಲಿ ಅಂದಿನ ರಾಜ್ಯದ ಮುಖ್ಯಮಂತ್ರಿಗಳಾಗಿ ಕುಮಾರಸ್ವಾಮಿ ಅವರು ಇಸ್ರೇಲ್ ದೇಶಕ್ಕೆ ಕೈಗೊಂಡಿದ್ದ ಅಧ್ಯಯನ ಪ್ರವಾಸವನ್ನು ವಿಶೇಷವಾಗಿ ನೆನಪು ಮಾಡಿಕೊಂಡ ಟಾಮಿ ಬೆನ್ – ಹೈಮ್ ಅವರು, ಕರ್ನಾಟಕ ಮತ್ತು ಇಸ್ರೇಲ್ ಸಂಬಂಧಗಳ ವೃದ್ಧಿಯಲ್ಲಿ ಬಹಳಷ್ಟು ಕೆಲಸ ಮಾಡುವ ಬಗ್ಗೆ ಮಾಜಿ ಮುಖ್ಯಮಂತ್ರಿಗಳಿಗೆ ವಿವರಗಳನ್ನು ನೀಡಿದರು ಹಾಗೂ ಮಾಜಿ ಮುಖ್ಯಮಂತ್ರಿ ಅವರ ಸಹಕಾರವನ್ನು ಕೋರಿದರು.

ಕರ್ನಾಟಕ ಹಾಗೂ ಇಸ್ರೇಲ್ ನಡುವೆ ಅಭಿವೃದ್ಧಿಯ ಪರಿಕಲ್ಪನೆಗಳ ವಿನಿಮಯ

ಭಾರತದಲ್ಲಿರುವ ಇಸ್ರೇಲ್ ದೇಶದ ಕಾನ್ಸುಲೇಟ್ ಜನರಲ್ (ದಕ್ಷಿಣ ಭಾರತ) ಟಾಮಿ ಬೆನ್ – ಹೈಮ್ ಅವರು ಇಂದು ಮಾಜಿ ಮುಖ್ಯ ಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸೌಹಾರ್ಧ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಕರ್ನಾಟಕ ಹಾಗೂ ಇಸ್ರೇಲ್ ನಡುವೆ ಅಭಿವೃದ್ಧಿಯ ಪರಿಕಲ್ಪನೆಗಳ ವಿನಿಮಯ ಹಾಗೂ ಸೌಹಾರ್ಧ ಸಂಬಂಧವನ್ನು ವೃದ್ಧಿಸುವ ನಿಟ್ಟಿನಲ್ಲಿ ಅವರು  ಮಾತುಕತೆ ನಡೆಸಿದರು.

ಸಮಾನ ಆಸಕ್ತಿ, ದೃಷ್ಟಿಕೋನದಿಂದ ಬೆಳೆಯುತ್ತಿರುವ ಕರ್ನಾಟಕ, ಇಸ್ರೇಲ್ ನಡುವೆ ಸಮಾನ ಹಿತಾಸಕ್ತಿಗಳು ಕೂಡ ಇದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ದೀರ್ಘಕಾಲೀನ ದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಟಾಮಿ ಬೆನ್ – ಹೈಮ್ ಅವರು ಮನವಿ ಮಾಡಿದರು.

ಇಸ್ರೇಲ್ ಮತ್ತು ಕರ್ನಾಟಕ ಸಂಬಂಧಗಳನ್ನು ದೀರ್ಘಕಾಲೀನವಾಗಿ, ಬಲವಾಗಿ ಸ್ಥಿರಗೊಳಿಸುವುದು ಹಾಗೂ ಈ ಸಂಬಂಧಗಳನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶ ಹೊಂದಿರುವುದಾಗಿ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದರು.

ಒತ್ತೆಯಾಳುಗಳು ಸುರಕ್ಷಿತವಾಗಿ ಬಿಡುಗಡೆಯಾಗಿ ಬರಲಿ

ಯುದ್ಧಪೀಡಿತ ದೇಶದಲ್ಲಿ ಆದಷ್ಟು ಬೇಗ ಶಾಂತಿ ನೆಲೆಸುವಂತೆ ಆಗಲಿ ಎಂದು ಈ ಸಂದರ್ಭದಲ್ಲಿ ಹಾರೈಸಿದ ಮಾಜಿ ಮುಖ್ಯಮಂತ್ರಿಗಳು;  ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳು ಸುರಕ್ಷಿತವಾಗಿ ಬಿಡುಗಡೆಯಾಗಿ ಬರಲಿ ಎಂದು ಹಾರೈಸಿದರು.

ಅಲ್ಲದೆ, ಕೃಷಿ, ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಇಸ್ರೇಲ್ ಒಟ್ಟಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

ತಮ್ಮ ತೋಟಕ್ಕೆ ಆಗಮಿಸಿದ ಟಾಮಿ ಬೆನ್ – ಹೈಮ್ ಅವರನ್ನು ಕುಮಾರಸ್ವಾಮಿ ಅವರು ಅತ್ಯಂತ ಆತ್ಮೀಯವಾಗಿ ಬರ ಮಾಡಿಕೊಂಡು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಆವರು ಟಾಮಿ ಬೆನ್ – ಹೈಮ್ ಅವರಿಗೆ ತಮ್ಮ ಇಡೀ ತೋಟವನ್ನು ತೋರಿಸಿ, ಬಾಳೆಗೊನೆಯನ್ನು ನೀಡಿ ಸತ್ಕರಿಸಿದರು. ತೋಟದಲ್ಲಿ ಬೆಳೆಯಲಾಗಿರುವ ಅಡಿಕೆ, ಬಾಳೆ, ತೆಂಗು ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದರು. ಹಾಗೂ ಜಲ ಮರುಪೂರಣದ ಬಗ್ಗೆ ವಿಶೇಷವಾಗಿ ಹೈಮ್ ಅವರು  ಮೆಚ್ಚುಗೆ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubidadiDISCUSSIONhdkumaraswamykarnatakakmskmskannadanewsTommy Ben - Haim
3 FacebookTwitterPinterestEmail
cklbkrish

previous post
6 ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ವಿಜಯಪುರ ಸೂಕ್ತ
next post
ಕೃಷಿ ಪಂಪ್ ಸೆಟ್ ಗೆ  ಹೊಸ ವಿದ್ಯುತ್ ಸಂಪರ್ಕಕ್ಕೆ ಸಬ್ಸಿಡಿ ಕಡಿತ ಆದೇಶ ವಾಪಸ್ಸಿಗೆ ಹೆಚ್ ಡಿಕೆ ಆಗ್ರಹ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ