Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

545 ಪಿಎಸ್ ಐ ನೇಮಕಾತಿಗೆ ಮರು ಪರೀಕ್ಷೆ

by cklbkrish November 10, 2023
written by cklbkrish November 10, 2023 0 comments 1 minutes read
4FacebookTwitterPinterestEmail
165

ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಸರ್ಕಾರ ಹೊರಡಿಸಿದ್ದ ಸೂಚನೆಯನ್ನು ರಾಜ್ಯ ಹೈಕೋರ್ಟ್ ಇಂದಿಲ್ಲಿ ಎತ್ತಿಹಿಡಿದಿದೆ.
ಕಳೆದ ಒಂದೂವರೆ ವರ್ಷಗಳಿಂದ ಪಿಎಸ್‌ಐ ನೇಮಕಾತಿ ಗೊಂದಲಕ್ಕೆ ತೆರೆ ಎಳೆದಿರುವ ಹೈಕೋರ್ಟ್ 545 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆ ಮತ್ತು ಬಳಿಕ ಪ್ರಕಟಿಸಿದ ನೇಮಕಾತಿ ಪಟ್ಟಿ ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ.

ನೇಮಕಾತಿಯ ಆಯ್ಕೆ ಪಟ್ಟಿ ರದ್ದು

ಹಿಂದಿನ ಬಸವರಾಜ ಬೊಮ್ಮಾಯಿ ಆಡಳಿತದಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಭಾರೀ ಹಗರಣ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದ ಅಂದಿನ ಸರ್ಕಾರ, ಆಯ್ಕೆ ಪಟ್ಟಿಯನ್ನೇ ರದ್ದು ಮಾಡಿ ಮರು ಪರೀಕ್ಷೆಗೆ ಆದೇಶಿಸಿತ್ತು.
ಸರ್ಕಾರದ ಈ ಆದೇಶ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ವಾದ-ಪ್ರತಿವಾದ ಆಲಿಸಿ ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ದಿನೇಶ್ ಕುಮಾರ್ ಹಾಗೂ ಪಿ.ಜಿ. ಶಿವಶಂಕರೇಗೌಡ ಅವರನ್ನೊಳಗೊಂಡ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿಹಿಡಿದು ಮರುಪರೀಕ್ಷೆ ನಡೆಸಲು ಅನುವು ಮಾಡಿಕೊಟ್ಟಿದೆ.

ಮರು ಪರೀಕ್ಷೆ ಬೇಡ ಎಂಬ ಮನವಿ ತಿರಸ್ಕೃತ

ಮರು ಪರೀಕ್ಷೆ ಬೇಡ, ಕಳಂಕಿತರನ್ನು ಹೊರತುಪಡಿಸಿ ನೇಮಕಾತಿ ಪಟ್ಟಿ ಪ್ರಕಟಿಸಲು ಸರ್ಕಾರಕ್ಕೆ ಆದೇಶ ನೀಡುವಂತೆ ಮಾಡಿಕೊಂಡಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ 800 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನ ಕೈಗೊಂಡಿತ್ತು. ಆದರೆ, ಹಳೆಯ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯ ತೀರ್ಪು ನೀಡದ ಕಾರಣ ಹೊಸ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರಲಿಲ್ಲ.
ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿರುವುದರಿಂದ 545 ರ ಜೊತೆಗೆ 800 ಹುದ್ದೆಗಳಿಗೂ ಏಕಕಾಲದಲ್ಲಿ ಪರೀಕ್ಷೆ ನಡೆಸಲಿದೆಯೇ ಎಂದು ಕಾದು ನೋಡಬೇಕು.
ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಲು ಉದ್ದೇಶಿಸಿದ್ದ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯೆ ಪ್ರವೇಶ ಮಾಡಲಾಗದು ಎಂದು ವಿಭಾಗೀಯ ಪೀಠ ಈ ಹಿಂದೆಯೇ ಮೌಖಿಕವಾಗಿ ತಿಳಿಸಿತ್ತು.
545 ಹುದ್ದೆಗೆ 2021ರ ಅಕ್ಟೋಬರ್ 3ರಂದು ಲಿಖಿತ ಪರೀಕ್ಷೆ ನಡೆಸಿದ್ದು, ಈ ಪರೀಕ್ಷೆಗೆ 54,289 ಅಭ್ಯರ್ಥಿಗಳು ಹಾಜರಾಗಿದ್ದರು.

ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಅಕ್ರಮ ಎಸಗಿದ ಆರೋಪ

ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಅಕ್ರಮ ಎಸಗಿದ ಕಾರಣದಿಂದಾಗಿ ಆಯ್ಕೆಗೊಂಡಿದ್ದ ಇತರೆ ಅಭ್ಯರ್ಥಿಗಳಿಗೆ ತೀರ್ಪು ನಿರಾಸೆ ತಂದಿದೆ.
ಒಟ್ಟಾರೆ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಸೇರಿದಂತೆ 110 ಜನರನ್ನು ಬಂಧಿಸಲಾಗಿತ್ತು.
ಇತ್ತೀಚೆಗಷ್ಟೆ ಅಮೃತ್‌ಪಾಲ್ ಅವರಿಗೆ ಜಾಮೀನು ದೊರೆತು ಹೊರಬಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಎಡಿಜಿಪಿ ಮಟ್ಟದ ಅಧಿಕಾರಿಯೊಬ್ಬರು ಹಗರಣದಲ್ಲಿ ಸಿಲುಕಿ ಬಂಧನಕ್ಕೊಳಗಾಗಿದ್ದು ಇದೇ ಮೊದಲು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakmskmskannadapsi recutmentreexamination
4 FacebookTwitterPinterestEmail
cklbkrish

previous post
ನ.24ಕ್ಕೆ ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಕೆ
next post
ಹದಿನೈದು ದಿನದಲ್ಲಿ ಬಗರ್ ಹುಕುಂ ಸಮಿತಿ ರಚನೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ