Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲಿಂಗಾಯಿತ-ಒಕ್ಕಲಿಗ ಸಮುದಾಯದ ಓಲೈಕೆ ತಂತ್ರ

by cklbkrish November 11, 2023
written by cklbkrish November 11, 2023 0 comments 1 minutes read
2FacebookTwitterPinterestEmail
192
ಲೋಕಸಭೆ ಚುನಾವಣೆ: ಗೆದ್ದಿರುವ ಕ್ಷೇತ್ರಗಳ ಉಳಿಸಿಕೊಳ್ಳುವ ಸವಾಲು ಬಿಜೆಪಿಗೆ

ಬೆಂಗಳೂರು:ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯವನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆ ಎದುರಿಸುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನು ಬಿಜೆಪಿ ವರಿಷ್ಠರು ನೀಡಿದ್ದಾರೆ.

ಒಕ್ಕಲಿಗ ಸಮುದಾಯದ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎನ್‌ಡಿಎ ಕೂಟ ಸೇರಿರುವುದರಿಂದ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಜಂಟಿಯಾಗಿ ಪ್ರಚಾರ ಮಾಡಿದಲ್ಲಿ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ.

ಪಕ್ಷದಲ್ಲಿ ಒಂದು ವರ್ಗ ಎಷ್ಟೇ ವಿರೋಧ ಮಾಡಿದರೂ ತಮ್ಮಲ್ಲಿರುವ ಅಸಮಾಧಾನವನ್ನು ಬದಿಗಿಟ್ಟು ಸಂಖ್ಯಾಬಲ ದೃಷ್ಟಿಯಿಂದ ಯಡಿಯೂರಪ್ಪ ಅವರ ಪುತ್ರರಿಗೆ ಈ ಸ್ಥಾನ ಕಲ್ಪಿಸಿದ್ದಾರೆ.

bjp logo

ಹಿಂದುಳಿದ ವರ್ಗಗಳ ಆಯೋಗದ ವರದಿಯೇ ಪ್ರಮುಖ ಅಸ್ತ್ರ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಹಿಂದ ಓಲೈಕೆಗೆ ಹೆಚ್ಚು ಒತ್ತು ನೀಡಿದ್ದಲ್ಲದೆ, ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸ್ವೀಕರಿಸುವುದಾಗಿ ನೀಡಿರುವ ಹೇಳಿಕೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ಕೆಂಗಣ್ಣಿಗೆ ಗುರಿಯಾಗಿದೆ.

ಆಯೋಗದ ವರದಿಯನ್ನೇ ಕರ್ನಾಟಕದ ಮಟ್ಟಿಗೆ ಲೋಕಸಭಾ ಚುನಾವಣಾ ಅಸ್ತ್ರವಾಗಿ ಬಳಸಲು ನಿರ್ಧರಿಸಿರುವ ಬಿಜೆಪಿ ವರಿಷ್ಠರು, ಇದೇ ಸಂದರ್ಭದಲ್ಲಿ ಮುಂದುವರೆದ ಎರಡು ಸಮುದಾಯಗಳನ್ನು ಒಂದೇ ವೇದಿಕೆಗೆ ತರುವ ಉದ್ದೇಶದಿಂದ ವಿಜಯೇಂದ್ರ ಅವರನ್ನು ಸಾರಥಿಯನ್ನಾಗಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆಯ ನಂತರ ಯಡಿಯೂರಪ್ಪ ಬಣದವರು ಕಾಂಗ್ರೆಸ್ ಕಡೆಗೆ ವಾಲುತ್ತಿದ್ದರು. ಅಷ್ಟೇ ಅಲ್ಲ, ಕೆಲವರು ವರಿಷ್ಠರು ಹಾಗೂ ಪಕ್ಷವನ್ನು ಟೀಕಿಸುವ ಹಂತಕ್ಕೂ ಹೋಗಿದ್ದರು.

ಇದರ ಲಾಭ ಪಡೆದ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ಮಾಡಿ, ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಶಾಸಕರ ರಾಜೀನಾಮೆ ಕೊಡಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ವಿಧಾನಸಭೆಯಲ್ಲಿ ತಮ್ಮ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಮುಂದಾಗಿತ್ತು.

ಯಡಿಯೂರಪ್ಪ ವರ್ಚಸ್ಸಿಗೇ ವರಿಷ್ಠರ ಮಣೆ

ಯಡಿಯೂರಪ್ಪ ಅವರ ಕುಟುಂಬಕ್ಕೆ ಅಧ್ಯಕ್ಷ ಸ್ಥಾನ ನೀಡಿದರೆ, ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಬಹುದು ಹಾಗೂ ಯಡಿಯೂರಪ್ಪ ವರ್ಚಸ್ಸಿಗೇ ರಾಜ್ಯದಲ್ಲಿ ಶೇ.5ರಷ್ಟು ಮತ ಪ್ರಮಾಣವಿರುವುದು ವರಿಷ್ಠರಿಗೆ ಮನವರಿಕೆಯಾಗಿದ್ದು, ಈ ಮತಗಳನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಬಹುದು ಎಂಬ ಕಾರಣಕ್ಕಾಗಿ ತಾವು ವಿರೋಧ ಮಾಡುತ್ತಿದ್ದವರಿಗೆ ಪಟ್ಟ ಕಟ್ಟಿದ್ದಾರೆ.

ದಕ್ಷಿಣ ಭಾರತದಲ್ಲಿ ಕರ್ನಾಟಕ, ತೆಲಂಗಾಣ ಹೊರತುಪಡಿಸಿದರೆ, ಬಿಜೆಪಿಗೆ ಎಲ್ಲಿಯೂ ಅವಕಾಶವಿಲ್ಲ. ಉತ್ತರ ಭಾರತದಲ್ಲಿ ಕಳೆದ ಬಾರಿ ಗಳಿಸಿದ್ದ ಸ್ಥಾನಗಳು ಮುಂದಿನ ಚುನಾವಣೆಯಲ್ಲಿ ಕಡಿಮೆಯಾಗಬಹುದು ಎಂಬ ಮಾಹಿತಿ ಇದೆ.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಕರ್ನಾಟಕದಲ್ಲಿ ಕಳೆದ ಬಾರಿ ಗಳಿಸಿದ್ದ ಸ್ಥಾನಗಳನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಒಕ್ಕಲಿಗ-ಲಿಂಗಾಯತ ಅಸ್ತ್ರ ಪ್ರಯೋಗ ಮಾಡಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪುತ್ರಗೆ ರಾಜ್ಯದ ಸಾರಥ್ಯ ಕ್ರಿಯಾಶೀಲರಾದ ಯಡಿಯೂರಪ್ಪ

ಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಯಡಿಯೂರಪ್ಪ ತುಂಬಾ ಕ್ರಿಯಾಶೀಲರಾಗಿದ್ದಾರೆ. ತಮ್ಮ ವಿರೋಧಿ ಬಣದ ಪ್ರಮುಖರಾದ ಮಾಜಿ ಸಚಿವರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಂಪರ್ಕಿಸಿ ವಿಜಯೇಂದ್ರ ಅವರಿಗೆ ಸಹಕಾರ ಕೊಡಿ. ಎಲ್ಲರೂ ಒಟ್ಟಾಗಿ ಹೋಗೋಣ ಎಂಬ ಮಾತುಗಳನ್ನಾಡಿದ್ದಾರೆ.

ಒಟ್ಟಾರೆ, ಅನಿರೀಕ್ಷಿತವಾಗಿ ವಿಜಯೇಂದ್ರ ಅವರ ನೇಮಕಾತಿ ಆಗುತ್ತಿದ್ದಂತೆ ಪಕ್ಷದಲ್ಲಿ ಭಿನ್ನ ಸ್ವರಗಳು ಕೇಳಿ ಬಂದರೂ ಯಾರು ಬಹಿರಂಗ ಹೇಳಿಕೆ ನೀಡುವ ಧೈರ್ಯ ತೋರುತ್ತಿಲ್ಲ.  ಜತೆಗೆ ಅಭಿನಂದನೆಗಳ ಸುರಿಮಳೆಗೈದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjpbjp karnatakabsykarnatakakmskmskannadalingayathaparliament electionstate presidentVijayendravokkaligayadiyurappa
2 FacebookTwitterPinterestEmail
cklbkrish

previous post
ಪುತ್ರನಿಗಾಗಿ ನಾನೇನು ದಂಡಯಾತ್ರೆ ಮಾಡಿರಲಿಲ್ಲ: ಯಡಿಯೂರಪ್ಪ
next post
ದೇವೇಗೌಡರ ತವರು ಕ್ಷೇತ್ರ ಹಾಸನದಿಂದ ಸ್ಪರ್ಧೆಗಿಳಿಸಲು ಕುಮಾರಸ್ವಾಮಿ ಕಸರತ್ತು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ