Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಆಡಳಿತಾರೂಡ ಬಿಆರ್‌ಎಸ್ ಪಕ್ಷದ ವಿರುದ್ದ ವಾಗ್ದಾಳಿ

by KM Shivaraju November 11, 2023
written by KM Shivaraju November 11, 2023 0 comments 2 minutes read
ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಹೋದರ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕದ ಏಕನಾಥ್ಸಿಂಧೆ ಯಾರು ಎಂದು ಬಹಿರಂಗಪಡಿಸದಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಆಗುವುದಾಗಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಔತಣಕೂಟದ ಸಭೆಗಳನ್ನು ನಡೆಸಿದ ಬೆನ್ನಲ್ಲೇ ರಮೇಶ್ ಇಂತಹ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ತುರ್ತು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರ ಪತನದ ಮಾಹಿತಿ ನೀಡಿದ್ದಲ್ಲದೆ, ನ್ಯಾವ್ಯಾರೂ ಈ ಸರ್ಕಾರವನ್ನು ಬೀಳಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಆಗುತ್ತದೆ. ಬಿಜೆಪಿ ಆಪರೇಷನ್ ಕಮಲದಿಂದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನವಾಗಲಿಲ್ಲ. ಶಿವಕುಮಾರ್ ಅವರ ದುರಂಹಕಾರದ ವರ್ತನೆ ಪ್ರತಿಭಟಿಸಿ ಹೊರಬಂದ ಕಾರಣ ಅಂದು ಸರ್ಕಾರ ಪತನಗೊಂಡಿತು. ಬೆಳಗಾವಿ ರಾಜಕೀಯವೇ ಸರ್ಕಾರಕ್ಕೆ ಕಂಟಕ ಬೆಳಗಾವಿ ರಾಜಕೀಯವೇ ಇಂದಿನ ಸರ್ಕಾರದ ಪತನಕ್ಕೂ ಮೂಲ ಕಾರಣವಾಗುತ್ತದೆ ಎಂದ ರಮೇಶ್, ಯಾವಾಗ, ಏನಾಗಲಿದೆ ಎಂಬುದನ್ನು ಮಾತ್ರ ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ ಅವರ ಆತ್ಮೀಯನಾಗಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ನಿತ್ಯ ಡಿಕೆಶಿ ನಾಟಕ ಮಂಡಳಿ ಆಪರೇಷನ್ ಕಮಲ ಮಾಡುತ್ತಿರುವ ಬಗ್ಗೆ ಮಾತನಾಡುತ್ತಿದೆ. ಮೈತ್ರಿ ಸರಕಾರ ಬಿದ್ದಾಗ ಬಿಜೆಪಿಯೇನೂ ನಮ್ಮನ್ನು ಆಪರೇಷನ್ ಮಾಡಿರಲಿಲ್ಲ. ನಾವೇ ಮೈತ್ರಿ ಸರಕಾರ ತೆಗೆದು ಬಿಜೆಪಿಗೆ ಸೇರಿದೆವು. ಈಗ ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ಹೆಣಗಾಡುತ್ತಿದೆ. ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು. ಸುಳ್ಳು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಎಲ್ಲ ರಂಗದಲ್ಲೂ ಫೇಲ್ ಆಗಿದೆ. ಸರಕಾರ ಪತನ ಆಗುವುದು ಬೇಡ, ಮುಂದುವರೆಯಲಿ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಡಿಕೆಶಿ ಇರುವ ಸರಕಾರ ಯಾವಾಗಲೂ ಡೇಂಜರ್. ಡಿಕೆಶಿ ಅಧಿಕಾರ ಇದ್ದಾಗ ಒಂದು ರೀತಿ ಇರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಇನ್ನೊಂದು ರೀತಿ ಇರುತ್ತಾರೆ. ಡಿಕೆಶಿಯೇ ಸಿಡಿ ಮಾಸ್ಟರ್, ಅದೇ ಅವರ ಶಕ್ತಿ. ಸಿಡಿ ಇಟ್ಟುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು. ಸಿಡಿ ಇಟ್ಟುಕೊಂಡು ನೆಲಮಂಗಲ ಮಾಜಿ ಶಾಸಕ ನಾಗರಾಜ್ಗೆ ಡಿಕೆಶಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.ನಿನ್ನ ಹಾಗೂ ರಮೇಶ್ ಜಾರಕಿಹೊಳಿದು ಬಹಳಷ್ಟಾಗಿದೆ. ಎಸ್ಐಟಿ ಕ್ಯಾನ್ಸಲ್ ಮಾಡಿ ಮರು ತನಿಖೆಗೆ ಆದೇಶಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಎಷ್ಟೇ ಸಿಡಿ ಬಂದರೂ ನಾನು ಹೆದರಲ್ಲ. ಮರು ತನಿಖೆ ಆದರೆ ಸಿಬಿಐನಿಂದ ಆಗಲಿ ಎಂದು ನಾನು ಕೋರ್ಟ್ ಮೊರೆ ಹೋಗುವೆ ಎಂದು ಅವರು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು. ವಿನಾಕಾರಣ ನನ್ನ ಮೇಲೆ ಡಿಕೆಶಿ ಹಗೆತನ ಸಾಧಿಸುತ್ತಿದ್ದಾರೆ. ಹೆಚ್ಡಿಕೆ ಜತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ. ಒಂದೇ ರಾತ್ರಿಯಲ್ಲಿ ಬೆಳವಣಿಗೆ ಆಗಿ ಸರಕಾರ ಪತನವಾಗಲಿದೆ ಎಂದರು. ರಮೇಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ ಎಂದಷ್ಟೇ ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಆಸಕ್ತಿ ತೋರಲಿಲ್ಲ.
3FacebookTwitterPinterestEmail
105

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಉದ್ಯೋಗಗಳು ಭರ್ತಿ: ಡಿ.ಕೆ. ಶಿವಕುಮಾರ್

ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
DK Shivakumar

ಕೋದಾಡ (ತೆಲಂಗಾಣ): “ಎಲ್ಲರಿಗೂ ನಮಸ್ಕಾರ, ನನ್ನ ಪಕ್ಕದ ರಾಜ್ಯದ ಸಹೋದರ, ಸಹೋದರಿಯರನ್ನು ನೋಡಲು ಬಹಳ ಸಂತೋಷದಿಂದ ಬಂದಿದ್ದೇನೆ” ಎಂದು ತೆಲುಗಿನಲ್ಲಿ ಡಿ.ಕೆ.ಶಿವಕುಮಾರ್ ಅವರು ಭಾಷಣ ಆರಂಭಿಸಿದರು.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ2ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುತ್ತದೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ತೆಲಂಗಾಣದ ಕೋದಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಅವರ ಪರ ಶುಕ್ರವಾರ ಚುನಾವಣಾ ಪ್ರಚಾರ ಭಾಷಣ ಮಾಡಿದರು. “ಕೆಸಿಆರ್ ಅವರು ಎರಡು ರೂಮುಗಳಿರುವ ಮನೆ ನೀಡುತ್ತೇನೆ, ಉದ್ಯೋಗ ನೀಡುತ್ತೇನೆ ಎಂದು ಕೊಟ್ಟ ಮಾತು ತಪ್ಪಿದ್ದಾರೆ” ಎಂದು ತೆಲಂಗಾಣದ ಆಡಳಿತಾರೂಡ ಬಿಆರ್‌ಎಸ್ ಪಕ್ಷದ ವಿರುದ್ದ ವಾಗ್ದಾಳಿ ನಡೆಸಿದರು.


ಉದ್ಯೋಗದ ಕನಸನ್ನು ನನಸು ಮಾಡುತ್ತೇವೆ

ನಾವು ತೆಲಂಗಾಣದ ಯುವಕರ ಕನಸುಗಳಿಗೆ ದಾರಿಯಾಗುತ್ತೇವೆ. ಜಾಬ್ ಫಾರ್ ಎವೆರಿವನ್ ಎನ್ನುವ ಘೋಷವಾಕ್ಯದೊಂದಿಗೆ, ಉದ್ಯೋಗದ ಕನಸನ್ನು ನನಸು ಮಾಡುತ್ತೇವೆ. ಖಾಲಿ ಇರುವ ಶಿಕ್ಷಕರು, ಉಪನ್ಯಾಸಕರ ಹುದ್ದೆ ಸೇರಿದಂತೆ ತಕ್ಷಣಕ್ಕೆ ಅಗತ್ಯವಿರುವ ಎಲ್ಲಾ ಹುದ್ದೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಪಾರದರ್ಶಕವಾಗಿ ಭರ್ತಿ ಮಾಡಲಾಗುವುದು ಎಂದರು.
ನಾನು ನಿಮ್ಮ ಪಕ್ಕದ ರಾಜ್ಯವಾದ ಕರ್ನಾಟಕದಿಂದ ಬಂದವನು. ನಮ್ಮ ರಾಜ್ಯದ ಜನ ಬಿಜೆಪಿಯನ್ನು ಮನೆಗೆ ಓಡಿಸಿ, ಗ್ಯಾರಂಟಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದು ಹೊಸ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ತಿಳಿಸಿದರು.
ಅಧಿಕಾರಕ್ಕೆ ಬಂದ ನಂತರ, ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕವಾಗಿ ಒಪ್ಪಿಗೆ ನೀಡಿದೆವು. ಮಹಿಳೆಯರಿಗೆ ಉಚಿತ ಬಸ್, ತಿಂಗಳಿಗೆ ಎರಡು ಸಾವಿರ, ಕುಟುಂಬದ ಪ್ರತಿ ವ್ಯಕ್ತಿಗೆ ೧೦ ಕೆ.ಜಿ ಅಕ್ಕಿ, ೨೦೦ ಯುನಿಟ್ ವಿದ್ಯುತ್ ಯೋಜನೆ ಜಾರಿಗೆ ತಂದಿದ್ದು, ನಿರುದ್ಯೋಗ ಯುವಕ-ಯುವತಿಯರಿಗೆ ಯುವನಿಧಿ ಯೋಜನೆ ಜಾರಿಗೆ ತರಲಿದ್ದೇವೆ ಎಂದು ಹೇಳಿದರು.

ತೆಲಂಗಾಣದಲ್ಲೂ ೨೦೦ ಯುನಿಟ್ ವಿದ್ಯುತ್ ಉಚಿತ ಭರವಸೆ

ಕರ್ನಾಟಕ ಮಾದರಿಯಲ್ಲೇ ತೆಲಂಗಾಣದಲ್ಲಿ ಕೂಡ ೨೦೦ ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ನಮ್ಮ ಕರ್ನಾಟಕದಲ್ಲಿ ಮಹಿಳಾ ಯಜಮಾನಿಗೆ ೨ ಸಾವಿರ ಕೊಡುತ್ತಿದ್ದೇವೆ, ಆದರೆ ಇಲ್ಲಿ ೨,೫೦೦ ಕೊಡುತ್ತೇವೆ ಎಂದು ಗ್ಯಾರಂಟಿ ನೀಡಲಾಗಿದೆ. ಗ್ಯಾಸ್ ಸಿಲಿಂಡರ್‌ಗೆ ೫೦೦ ರೂಪಾಯಿ, ಹಿರಿಯ ನಾಗರಿಕರಿಗೆ ತಿಂಗಳಿಗೆ ೪,೦೦೦ ರೂಪಾಯಿ, ಪ್ರತಿ ರೈತರಿಗೆ ೧೫ ಸಾವಿರ ಪ್ರೋತ್ಸಾಹಧನ – ಹೀಗೆ ಗ್ಯಾರಂಟಿ ಅಭಿವೃದ್ಧಿಯ ಪರ್ವ ತೆಲಂಗಾಣವನ್ನು ಬದಲಾಯಿಸಲಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ತೆಲಂಗಾಣವನ್ನು ಭ್ರಷ್ಟಾಚಾರದ ರಾಜಧಾನಿ ಎಂದು ಅವಮಾನ ಮಾಡಿದ್ದಾರೆ. ಆ ಮೂಲಕ ಮೋದಿಯವರು ತಮ್ಮ ಬಿ ಟೀಮ್ ಆದ ಬಿಆರ್‌ಎಸ್ ಪಕ್ಷದ ದುರಾಡಳಿತದ ಬಗ್ಗೆ ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕೆಸಿಆರ್ ಅವರನ್ನು ಶಾಶ್ವತವಾಗಿ ಅವರ ತೋಟದ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹರಸೋಣ. ಅವರು ಸುದೀರ್ಘ ೧೦ ವರ್ಷಗಳ ಕಾಲ ತೆಲಂಗಾಣವನ್ನು ಹಳ್ಳ ಹಿಡಿಸಿದ್ದಾರೆ ಎಂದರು.
ಕಳೆದ ಚುನಾವಣೆಯಲ್ಲಿ ನನ್ನ ಸಹೋದರಿ ಪದ್ಮಾವತಿ ಅವರು ಕಡಿಮೆ ಅಂತರದಲ್ಲಿ ಸೋತಿದ್ದರು. ಆದರೆ ಈ ಬಾರಿ ಕನಿಷ್ಠ ೨೫ ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದರು.
ಇಡೀ ತೆಲಂಗಾಣವೇ ಬಿಆರ್‌ಎಸ್ ಪಕ್ಷ ಅಧಿಕಾರದಿಂದ ಕೆಳಗೆ ಇಳಿಯಬೇಕು ಎಂದು ಬಯಸುತ್ತಿದೆ. ಭಾರತ್ ಜೋಡೋ ಯಾತ್ರೆ ತೆಲಂಗಾಣದ ಮೇಲೆ ಹಾದು ಹೋದಾಗ ನನಗೆ ಅಂದೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಭರವಸೆ ಮೂಡಿತ್ತು ಎಂದು ಹೇಳಿದರು.

ಕೊಟ್ಟ ಮಾತು ತಪ್ಪುವುದಿಲ್ಲ; ಕರ್ನಾಟಕವೇ ಉದಾಹರಣೆ
ಕಾಂಗ್ರೆಸ್ ಪಕ್ಷ ನೀಡಿದ ನಾಗಾರ್ಜುನ ಸಾಗರ ಯೋಜನೆಯಿಂದ ಲಕ್ಷಾಂತರ ರೈತರು ಇಂದು ಸಹ ದೇಶದ ಹಸಿವು ನೀಗಿಸುತ್ತಿದ್ದಾರೆ. ಭೂರಹಿತ ಕೃಷಿ ಕಾರ್ಮಿಕರಿಗೆ ಹಣ ಸೇರಿದಂತೆ, ಭತ್ತಕ್ಕೆ ಬೆಂಬಲ ಬೆಲೆ ಹೀಗೆ ನಾವು ಕೊಟ್ಟ ಮಾತು ತಪ್ಪುವುದಿಲ್ಲ, ಇದಕ್ಕೆ ಕರ್ನಾಟಕವೇ ಉದಾಹರಣೆ ಎಂದರು.

ಡಿಸೆಂಬರ್ ೯ ನೇ ತಾರೀಕು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಪ್ರಮಾಣ ವಚನ ತೆಗೆದುಕೊಳ್ಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congressdk shivakumarelection rallypoliticstelanganatour
3 FacebookTwitterPinterestEmail
KM Shivaraju

previous post
ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್, ಆಟೋ ನಿಷೇಧ
next post
545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ