Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

by KM Shivaraju November 12, 2023
written by KM Shivaraju November 12, 2023 0 comments 1 minutes read
2FacebookTwitterPinterestEmail
82
ಗ್ಯಾರಂಟಿ ಜಾರಿ ಬಗ್ಗೆ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಬೇಕಂತೆ!

ಬೆಂಗಳೂರು:”ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಅವರ ತವರು ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ” ಎಂದೂ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಈ ರೀತಿ ಅವರು ತಿರುಗೇಟು ನೀಡಿದ್ದಾರೆ.

“ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರಾಗಿ ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ; ಅದರ ಬಗ್ಗೆ ಅವರಿಗೆ ಚಿಂತೆನೆಯೇ ಇಲ್ಲ. ಪಾಪ ಅವರಿಗೆ ಅವರು ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರಿಗೆ ಕೇಳಿ ತಿಳಿದುಕೊಳ್ಳಬೇಕು ಎಂದು ಟೀಕಿಸಿದರು.

ಚನ್ನಪಟ್ಟಣದ 25ಕ್ಕೂ ಹೆಚ್ಚು ಮತದಾರರ ಬಳಿ ನಾನೇ ಖುದ್ದಾಗಿ ಮಾತನಾಡಿದ್ದೇನೆ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಮತದಾರರ ಬಳಿ ಹೋಗಿ ಕೇಳಲಿ. ಉಚಿತ ವಿದ್ಯುತ್, ಶಕ್ತಿ, ಅನ್ನ ಭಾಗ್ಯ, ಗೃಹಲಕ್ಷ್ಮೀ ಯೋಜನೆಗಳು ಅವರಿಗೆ ತಲುಪಿದೆಯೆ? ಇಲ್ಲವೇ? ಎಂದು ಪರೀಕ್ಷೆ ಮಾಡಲಿ.

ಶೇ 5 ರಷ್ಟು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಲ್ಲ

ಒಂದಷ್ಟು ತಾಂತ್ರಿಕ ದೋಷ ಹಾಗೂ ಇತರೇ ಕಾರಣಗಳಿಂದ ಶೇ 5 ರಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈಗ ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಿ ತಲುಪಿಸಲಾಗುತ್ತಿದೆ.

ನಾನು ತೆಲಂಗಾಣದ 5 ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದೆ. ಆ ಐದೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಡಿ. 9  ರಂದು ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಸರ್ಕಾರ ರಚಿಸಲಿದ್ದು, ಕರ್ನಾಟಕದ ಮಾದರಿಯಂತೆ 6 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.”

ಕರ್ನಾಟಕದ ಸಚಿವರಿಗೆ ಪಂಚರಾಜ್ಯ ಚುನಾವಣೆ ಸಲುವಾಗಿ ಕಮಿಷನ್ ಟಾರ್ಗೆಟ್ ಕೊಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, “ಕುಮಾರಸ್ವಾಮಿ ಅವರು ಟಾರ್ಗೆಟ್ ಕೊಟ್ಟಿರಬೇಕು. ನಮ್ಮ ಸಚಿವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಹೋಗಿ ಬರುತ್ತಿದ್ದಾರೆ. ತಾಳ್ಮೆಯಿಂದ ಇರಲು ಕುಮಾರಸ್ವಾಮಿ ಅವರಿಗೆ ಆಗುತ್ತಿಲ್ಲ. ಅವರಿಗೂ ವಿಜಯೇಂದ್ರ ಇಬ್ಬರಿಗೂ ಒಳ್ಳೆಯದಾಗಲಿ” ಎಂದರು.

ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಕೊಟ್ಟಿರುವ ನೋಟಿಸ್ ಪೀರಿಯಡ್‌ನಲ್ಲಿ ಇದ್ದಾರೆಯೇ ಎಂದು ಕೇಳಿದಾಗ “ಕುಮಾರಸ್ವಾಮಿ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಾವೆಲ್ಲ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಬೇರೆ ಚರ್ಚೆಯೇ ಇಲ್ಲ” ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruchannapatnadcmdksdkshivakumargarantygaranty planskarnatakakmskmskannada
2 FacebookTwitterPinterestEmail
KM Shivaraju

previous post
ಕಾಡಂಚಿನ ಗ್ರಾಮಗಳಿಗೆ ಹಗಲು 3 ಫೇಸ್ ವಿದ್ಯುತ್
next post
ಕ್ಯೂರ್‌ ಕೋಡ್‌ ಇರುವ ಗಿಫ್ಟ್ ಕೂಪನ್ ಹಂಚುವ ಆರೋಪ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ