Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಂಚರಾಜ್ಯಗಳ ಜನರಿಗೆ ಸುಳ್ಳು ಗ್ಯಾರಂಟಿಗಳ ಮಂಕುಬೂದಿ: ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆ

by KM Shivaraju November 12, 2023
written by KM Shivaraju November 12, 2023 0 comments 4 minutes read
2FacebookTwitterPinterestEmail
77

ತೆಲಂಗಾಣದಲ್ಲಿ ಟೆಂಪರರಿ ಸಿಎಂ, ಡೂಪ್ಲಿಕೇಟ್‌ ಸಿಎಂ ಸುಳ್ಳು ಪ್ರಚಾರ; ಸಿಎಂ, ಡಿಸಿಎಂ ವಿರುದ್ಧ ಪ್ರಹಾರ

ಬೆಂಗಳೂರು: ಕರ್ನಾಟಕದಲ್ಲಿ ಜಾರಿ ಮಾಡಿರುವ ಸುಳ್ಳು-ಪೊಳ್ಳಿನ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸಿ ಜನರಿಗೆ ಮಂಕುಬೂದಿ ಎರಚಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ನೆರೆಯ ತೆಲಂಗಾಣ ಸೇರಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಐದೂ ರಾಜ್ಯಗಳ ಮತದಾರರು ಯಾವುದೇ ಕಾರಣಕ್ಕೂ ಕಾಂಗ್ರೆಸ್ನ ಸುಳ್ಳು ಭರವಸೆಗಳಿಗೆ ಮರುಳಾಗಬಾರದು ಎಂದು ನಾನು ಮನವಿ ಮಾಡುತ್ತೇನೆ. ಕರ್ನಾಟಕದಲ್ಲಿ ಈ ಗ್ಯಾರಂಟಿಗಳು ಸಂಪೂರ್ಣ ವಿಫಲಗೊಂಡು ಜನ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಅವರು ದಾಖಲೆಗಳ ಸಮೇತ ದೂರಿದ್ದಾರೆ.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ಅಬ್ಬರದ ಪ್ರಚಾರ ಮಾಡಿ ಜನತೆ ದಿಕ್ಕುತಪ್ಪಿಸಿ ಕರ್ನಾಟಕದಲ್ಲಿ ಜಾರಿ ಮಾಡಿರುವ ʼಗೃಹಜ್ಯೋತಿʼ, ʼಗೃಹಲಕ್ಷ್ಮೀʼ, ʼಶಕ್ತಿʼ, ʼಅನ್ನಭಾಗ್ಯʼ ಗ್ಯಾರಂಟಿ ಯೋಜನೆಗಳು ಗುರಿ ಮುಟ್ಟಿಲ್ಲ. ಇನ್ನೊಂದು ಗ್ಯಾರಂಟಿ ʼಯುವನಿಧಿʼ ಐದು ತಿಂಗಳಾದರೂ ಜಾರಿ ಆಗಿಲ್ಲ. ಕರ್ನಾಟಕದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂ ಮುಡಿಸುತ್ತಿದೆ ಕಾಂಗ್ರೆಸ್. ಈಗ ಐದು ರಾಜ್ಯಗಳ ಜನರ ಕಿವಿಗೆ ಹೂ ಮುಡಿಸಲು ಹೊರಟಿದ್ದಾರೆ. ಚುನಾವಣೆ ನಡೆಯುತ್ತಿರುವ ರಾಜ್ಯಗಳ ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಸಾಧಕ-ಬಾಧಕ ತಿಳಿಸುವುದು ನನ್ನ ಕರ್ತವ್ಯ ಎಂದು ಹೇಳಿದರು.

ಕಾಟಾಚಾರಕ್ಕೆ, ಚುನಾವಣೆ ಲಾಭಕ್ಕಾಗಿ ಮಾಡಿದ ಈ ಗ್ಯಾರಂಟಿಗಳು ಆರೇ ತಿಂಗಳಲ್ಲಿ ಹಳಿತಪ್ಪಿವೆ. ಈಗಾಗಲೇ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿಗೆ ಹಣ ಇಲ್ಲವೆಂದು ಆಡಳಿತ ಪಕ್ಷದ ಶಾಸಕರೇ ಗಲಾಟೆ ಮಾಡುತ್ತಿದ್ದಾರೆ. ಹಾಗಾದರೆ, ಉಳಿದ ನಾಲ್ಕೂವರೆ ವರ್ಷಗಳ ಪಾಡೇನು? ವಾಸ್ತವಸ್ಥಿತಿ ಹೀಗಿರುವಾಗ ಕಾಗ್ರೆಸ್ಸಿಗರು ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವೇ? ಇಂಥ ಸುಳ್ಳನ್ನು ನಂಬಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷವು ಕರ್ನಾಟಕದ ಟೆಂಪರರಿ ಸಿಎಂ (TCM), ಡೂಪ್ಲಿಕೇಟ್‌ ಸಿಎಂ (DCM) ಅವರನ್ನು ತೆಲಂಗಾಣಕ್ಕೆ ಕಳಿಸಿ ಜನರಿಗೆ ಸುಳ್ಳುಗಳನ್ನು ಹೇಳಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ನೇರವಾಗಿ ಆರೋಪಿಸಿದರು.

ಜೆಸಿಬಿಯಲ್ಲಿ ಶಾಲಾ ಮಕ್ಕಳ ಪ್ರಯಾಣ!

ʼಶಕ್ತಿʼ ಯೋಜನೆಯಡಿ ಬಸ್ಸುಗಳೇ ಇಲ್ಲ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಬಸ್ಸುಗಳಿಲ್ಲದೆ ಜೆಸಿಬಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಕ್ಯಾಬ್, ಆಟೋ ಚಾಲಕರು ಬೀದಿ ಪಾಲಾಗಿದ್ದಾರೆ. ಒಬ್ಬ ಆಟೋ ಚಾಲಕ ಮಕ್ಕಳಿಗೆ ಶಾಲಾ ಶುಲ್ಕ ಕಟ್ಟಿಲ್ಲ ಎಂದು ವಿಷ ಸೇವಿಸಿದ್ದಾನೆ. ಇಂತಹ ದುರಂತ ಸ್ಥಿತಿಯನ್ನು ಇಡೀ ದೇಶಕ್ಕೆ ವಿಸ್ತರಿಸಲು ಕಾಂಗ್ರೆಸ್ ಹೊರಟಿದೆ. ಅದಕ್ಕೆಂದೇ ತೆಲಂಗಾಣಕ್ಕೆ ಕರ್ನಾಟಕದ ನಾಯಕರನ್ನು ಕರೆಸಿಕೊಂಡು ಟೋಪಿ ಹಾಕಿಸುವ ಕೆಲಸ ಮಾಡುತ್ತಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಇಂದಿರಾ ಕ್ಯಾಂಟಿನ್ ನಲ್ಲೂ ಕಮಿಷನ್ ಹೊಡೆಯುವ ಇವರು ʼಇಂದಿರಮ್ಮ ಇಲ್ಲುʼ (ಇಂದಿರಾ ಮನೆ) ಹೇಗೆ ಕಟ್ಟುತ್ತಾರೆ? ಗ್ಯಾರಂಟಿ ಹೆಸರಲ್ಲಿ ತಮ್ಮ ಕಿಸೆಗಷ್ಟೇ ಕಮೀಷನ್ ಗ್ಯಾರಂಟಿ ಮಾಡಿಕೊಂಡಿದ್ದಾರೆ. ಐದು ರಾಜ್ಯಗಳ ಜನ ಕಾಂಗ್ರೆಸ್ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅವರಿಗೆ ಕರ್ನಾಟಕದ ದುಸ್ಥಿತಿ ಕಟ್ಟಿಟ್ಟ ಬುತ್ತಿ ಎಂದು ಕುಮಾರಸ್ವಾಮಿ ನೇರ ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಮಾಡಿದ ಸಾಲವೆಷ್ಟು?

ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಅವರು ಚಾಲೆಂಜ್ ಮಾಡಿದ್ದಾರೆ. ನನ್ನ ಹೆಸರು ಕೇಳಿದರೆ ಅವರಿಗೆ ಭಯ, ಸಾಲದಿಂದ ದೇಶ ದಿವಾಳಿಯಾಗಿದೆ ಎಂದಿದ್ದಾರೆ. ಆದರೆ, ಇವರ ಸರ್ಕಾರದಲ್ಲಿ ಏನಾಗಿದೆ? ಎಷ್ಟು ಸಾಲ ಮಾಡಿದ್ದಾರೆ? ಈಗ 85,815 ಕೋಟಿ ರೂ. ಸಾಲ ಮಾಡಲು ಹೊರಟಿದ್ದಾರೆ. ನನ್ನ 20 ತಿಂಗಳ ಆಡಳಿತದಲ್ಲಿ 3,500 ಕೋಟಿ ಸಾಲ ಮಾಡಲಾಗಿತ್ತು. ಕಳೆದ 12 ವರ್ಷದಲ್ಲಿ ಇದ್ದ ಸರ್ಕಾರಗಳು 1 ಲಕ್ಷ ಕೋಟಿ ಸಾಲ ಮಾಡಿವೆ. ಹಿಂದೆ 5 ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ 2,45,000 ಕೋಟಿ ರೂ. ಸಾಲ ಮಾಡಿದ್ದರು. ಸಾಲದ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ಅವರು ಟೀಕಿಸಿದರು.

ಈಗ ರಾಜ್ಯದ ಸಾಲ ಪ್ರಮಾಣ 5,71,600 ಕೋಟಿ ರೂ.ಗಳಷ್ಟಿದೆ. ಹೊಸದಾಗಿ ಇವರು ಬಜೆಟ್‌ʼನಲ್ಲಿ 85,815 ಕೋಟಿ ರೂ. ಸಾಲದ ಗುರಿ ಇಟ್ಟುಕೊಂಡಿದ್ದಾರೆ. ಪ್ರತೀ ವರ್ಷ 56,000 ಕೋಟಿ ರೂ. ಬಡ್ಡಿ ಕಟ್ಟಬೇಕು ಎಂದು ಸ್ವತಃ ಸಿಎಂ ಹೇಳಿದ್ದಾರೆ. ನಿಮ್ಮ ಸರ್ಕಾರದ ಅಧಿಕಾರಿಗಳೇ ರಾಜ್ಯದ ಆರ್ಥಿಕ ವ್ಯವಸ್ಥೆ ಅಸ್ತವ್ಯಸ್ತವಾಗಿದೆ ಎನ್ನುತ್ತಿದ್ದಾರೆ. ಇದನ್ನೇ ತೆಲಂಗಾಣಕ್ಕೆ, ಇನ್ನಿತರೆ ರಾಜ್ಯಗಳಿಗೆ ವಿಸ್ತರಿಸುತ್ತೀರಾ? ಎಂದು ಅವರು ಪ್ರಶ್ನಿಸಿದರು.

ಪರಿಸ್ಥಿತಿ ಇಷ್ಟು ಹದಗೆಟ್ಟಿದ್ದರೂ ಕಪ್ಪುಹಣಕ್ಕೆ ಕೊರತೆ ಇಲ್ಲ, ಕಲೆಕ್ಷನ್ನಿಗೂ ಸಮಸ್ಯೆ ಇಲ್ಲ. ಖಜಾನೆಯಲ್ಲಿ ದುಡ್ಡಿಲ್ಲ, ಅದರೆ ಆಯ್ದ ವ್ಯಕ್ತಿಗಳ ಮನೆಯಲ್ಲಿ ದುಡ್ಡಿದೆ. ಮೊನ್ನೆಯ ಐಟಿ ದಾಳಿಯಲ್ಲಿ ಯಾರ ಯಾರ ಮನೆಯಲ್ಲಿ ಎಷ್ಟೆಷ್ಟು ಕೋಟಿ ಹಣ ಸಿಕ್ಕಿತು ಎನ್ನುವುದನ್ನು ಜನ ನೋಡಿದ್ದಾರೆ. ಕರ್ನಾಟಕದ ದುಡ್ಡಿನಲ್ಲಿ ಕಾಂಗ್ರೆಸ್‌ ಪಕ್ಷ ಐದು ರಾಜ್ಯಗಳ ಚುನಾವಣೆ ನಡೆಸುತ್ತಿದೆ. ಇದು ಸತ್ಯ ಎಂದು ಅವರು ಹೇಳಿದರು.

ಶಕ್ತಿ: ಬಸ್ಸುಗಳಿಲ್ಲ, ಜೆಸಿಬಿಗಳಲ್ಲಿ ಶಾಲಾ ಮಕ್ಕಳ ಪ್ರಯಾಣ ಗೃಹಜ್ಯೋತಿ: ಮಹಾದೇವಪ್ಪ ನಿಂಗೂ‌ ಕತ್ತಲು ಫ್ರೀ! ನಂಗೂ ಕತ್ತಲು ಫ್ರೀ!! ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ!! ಗೃಹಲಕ್ಷ್ಮೀಗೆ ಸರ್ವರ್‌ ಸಮಸ್ಯೆ! ಅಕ್ಕಿಭಾಗ್ಯಕ್ಕೆ ನೂರೆಂಟು ನೆಪ

ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚು ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಯಾರು ಕೊಡುವುದಿಲ್ಲವೋ ಅವರು ಮಂತ್ರಿಗಳಾಗಿರೋದಿಲ್ಲ. ಹಣ ಕೊಟ್ಟವರಿಗೆ ಅಧಿಕಾರ ಇರುತ್ತದೆ. ಇಲ್ಲಿ ಅಧಿಕಾರ ಹಂಚಿಕೆ ಎನ್ನುವುದು ಇಲ್ಲವೇ ಇಲ್ಲ. ಹಣ ಕೊಟ್ಟವರಿಗೆ ಅಧಿಕಾರ ಅಷ್ಟೇ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಆರೋಪಿದರು.

ಒಂದು ಕರ್ನಾಟಕ, ಐದು ರಾಜ್ಯಗಳ ಚುನಾವಣೆ

ಕರ್ನಾಟಕ ರಾಜ್ಯದ ಸಂಪತ್ತು ಬೇರೆ ರಾಜ್ಯಗಳ ಚುನಾವಣೆಗೆ ವೆಚ್ಚವಾಗುತ್ತಿದೆ. ಗ್ಯಾರಂಟಿಗಳ ಮೂಲಕ ಎಲ್ಲಾ ರಾಜ್ಯದ ಚುನಾವಣೆ ಮಾಡಲು‌ ಹೊರಟಿದ್ದಾರೆ ಇವರು. ಒಂದು ಕರ್ನಾಟಕ, ಐದು ರಾಜ್ಯಗಳ ಚುನಾವಣೆ ಎನ್ನುವಂತಾಗಿದೆ ಎಂದು ಕುಮಾರಸ್ವಾಮಿ ದೂರಿದರು.

ಡುಪ್ಲಿಕೇಟ್ ಸಿಎಂ (ಡಿಸಿಎಂ) ತೆಲಂಗಾಣದಲ್ಲಿ ವೀರಾವೇಶದ ಭಾಷಣ ಮಾಡಿದ್ದಾರೆ. ಆದರೆ, ನಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಅವರಿಗೆ ವ್ಯವಧಾನವೇ ಇಲ್ಲ. ಅಲ್ಲಿ ಅವರು ರೈತರ ಪ್ರೋತ್ಸಾಹ ಧನದ ಬಗ್ಗೆ ಭಾಷಣ ಮಾಡಿದ್ದಾರೆ. ಆದರೆ, ಕಳೆದ ಹತ್ತು ವರ್ಷಗಳಿಂದ ಕೆಸಿಆರ್‌ ಅವರು ಅಲ್ಲಿ ರೈತಬಂಧು ಕಾರ್ಯಕ್ರಮ ಕೊಡುತ್ತಿದ್ದಾರೆ. ನಿಮ್ಮ ಐದು ವರ್ಷದ ಸರ್ಕಾರದ ಕಾಲದಲ್ಲಿ ಎರಡೂ ಮುಕ್ಕಾಲು ಲಕ್ಷ ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡದೆ ಖಾಲಿ ಇಟ್ಟುಕೊಂಡಿದ್ದಿರಿ. ಮೊದಲು ಆ ಖಾಲಿ ಹುದ್ದೆ ಭರ್ತಿ ಮಾಡಿ, ಆಮೇಲೆ ತೆಲಂಗಾಣದಲ್ಲಿ ಭಾಷಣ ಮಾಡಿ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಇವರದ್ದು 5 ಗಂಟೆ, ಅವರದ್ದು 24 ಗಂಟೆ ವಿದ್ಯುತ್

ನಮ್ಮ ಡೂಪ್ಲಿಕೇಟ್‌ ಸಿಎಂ (ಡಿಸಿಎಂ) ತೆಲಂಗಾಣದಲ್ಲಿ ದಿನಕ್ಕೆ 5 ಗಂಟೆ ಉಚಿತ ವಿದ್ಯುತ್‌ ಕೊಡುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಗೊತ್ತಿಲ್ಲದ ವಿಷಯ ಎಂದರೆ, ಕೆಸಿಆರ್‌ ಅವರು ಈಗಾಗಲೇ ಅಲ್ಲಿ ದಿನಕ್ಕೆ 24 ಗಂಟೆಯೂ ಉಚಿತ ವಿದ್ಯುತ್‌ ಕೊಡುತ್ತಿದ್ದಾರೆ. 5 ಗಂಟೆ ವಿದ್ಯುತ್‌ ಕೊಡುವವರಿಗೆ ವೋಟು ಹಾಕಬೇಕಾ? ಅಥವಾ 24 ಗಂಟೆ ವಿದ್ಯುತ್‌ ಕೊಡುವವರಿಗೆ ವೋಟು ಹಾಕಬೇಕಾ? ಎನ್ನುವುದನ್ನು ತೆಲಂಗಾಣದ ಜನರೇ ತೀರ್ಮಾನ ಮಾಡುತ್ತಾರೆ ಎಂದು ಅವರು ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ನೀಡಿದರು.

ರಾಜ್ಯದ ನಾಯಕರು ತೆಲಂಗಾಣದಲ್ಲಿ 200 ಯುನಿಟ್ ಬಗ್ಗೆ ಭಾಷಣ ಬಿಗಿಯುತ್ತಿದ್ದಾರೆ. ಆದರೆ, ಕರ್ನಾಟಕದ ಪರಿಸ್ಥಿತಿ ಏನಿದೆ ಎನ್ನುವುದು ಐದೂ ರಾಜ್ಯಗಳ ಜನರಿಗೆ ಹೇಳಬೇಕಿದೆ. ಕರ್ನಾಟಕ ಈಗ ಕಗ್ಗತ್ತಲ ಕರ್ನಾಟಕ ಆಗಿದೆ. ಫ್ರೀ ವಿದ್ಯುತ್‌ ಎಂದು ಹೇಳಿ ಏಕಾಏಕಿ ದರ ಏರಿಕೆ ಮಾಡಿದರು. ಕಳೆ ಐದು ತಿಂಗಳಲ್ಲಿ ರಾಜ್ಯ ಕಗ್ಗತ್ತಲಲ್ಲಿದೆ.

ಅಧಿಕಾರಿಗಳು, ಸಚಿವರು ಮೊಬೈಲ್ ಲೈಟ್ ಹಾಕಿಕೊಂಡು ಸಭೆ ನಡೆಸಿದ್ದಾರೆ ಎಂದು ಟೀಕಿಸಿದ ಅವರು, ಮೊದಲು “ಮಹಾದೇವಪ್ಪ ನಿಂಗೂ‌ ಫ್ರೀ, ನಂಗೂ ಫ್ರೀ, ಕಾಕಾ ಪಾಟೀಲ್ ನಿಂಗೂ ಫ್ರೀ” ಎಂದು ಇವರು ಭಾಷಣ ಮಾಡಿದ್ದರು. ಈಗ ನೋಡಿದರೆ “ಮಹಾದೇವಪ್ಪ ನಿಂಗೂ‌ ಕತ್ತಲು ಫ್ರೀ, ನಂಗೂ ಕತ್ತಲು ಫ್ರೀ, ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ” ಎನ್ನುವಂಥ ದುಸ್ಥಿತಿ ಸೃಷ್ಟಿ ಆಗಿದೆ ಎಂದು ತರಾಟೆಗೆ ತೆಗೆದುಕೊಂಡರು.

ಇಂಥ ಸ್ಥಿತಿಯನ್ನೇ ಕರ್ನಾಟಕದಲ್ಲಿ ಇಟ್ಟುಕೊಂಡು 24 ಗಂಟೆ ಉಚಿತ ಕರೆಂಟ್‌ ಪಡೆಯುವ ತೆಲಂಗಾಣದ ಜನರಿಗೆ 5 ಗಂಟೆ ವಿದ್ಯುತ್‌ ಕೊಡುತ್ತೇವೆ ಎಂದು ನಮ್ಮ ಡುಪ್ಲಿಕೇಟ್ ಸಿಎಂ ಹೇಳಿದ್ದಾರೆ. ಈಗ ತೆಲಂಗಾಣದ ಜನರು, “ನಮಗೆ ಫ್ರೀ ಕರೆಂಟ್ ಬೇಕಾ? ಅಥವಾ ಕಾಂಗ್ರೆಸ್‌ ಬೇಕಾ?” ಎಂಬುದನ್ನು ನಿರ್ಧಾರ ಮಾಡಬೇಕು. ಅವರು ಕರೆಂಟ್‌ ಕೊಡುವ ಪಕ್ಷಕ್ಕೆ ಮತ ಹಾಕುತ್ತಾರೆ ಎನ್ನುವುದು ನನಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಕುಟುಕಿದರು.

ಮಾಜಿ ಶಾಸಕ ಹಾಗೂ ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಪಕ್ಷದ ಹಿರಿಯ ಮುಖಂಡ ಮುನೇಗೌಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdcmenergyfive state electiongarantygaranty PromisekarnatakakmskmskannadakumaraswamyKumaraswamy allegationmoneypowertargettcmtelangana
2 FacebookTwitterPinterestEmail
KM Shivaraju

previous post
ಕ್ಯೂರ್‌ ಕೋಡ್‌ ಇರುವ ಗಿಫ್ಟ್ ಕೂಪನ್ ಹಂಚುವ ಆರೋಪ
next post
ಐಶಾರಾಮಿ ಜೀವನ ನಡೆಸುವವರು ಸಮಾಜವಾದಿನಾ?

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ