Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ

by KM Shivaraju November 13, 2023
written by KM Shivaraju November 13, 2023 0 comments 2 minutes read
2FacebookTwitterPinterestEmail
70

ಡಿಸಿಎಂ ಡಿಕೆಶಿಗೆ ವಿರುದ್ಧ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಗ್ಯಾರಂಟಿಗಳಿಗೂ ಕುಮಾರಸ್ವಾಮಿಗೂ ಏನು ಸಂಬಂಧ ಎಂದಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತೀಕ್ಷ್ಣ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ʼಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಕಿಡಿಕಾರಿರುವ ಅವರು; ಜನರು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ಇವರ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ. ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಮಾರ್ಮಿಕವಾಗಿ ಚುಚ್ಚಿದ್ದಾರೆ.
ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಅವರು ಹೇಳಿದ್ದಾರೆ.

ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ.

ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ಎಂದು ಅವರು ಡಿಕೆಶಿಗೆ ಕುಟುಕಿದ್ದಾರೆ

ಚೀಫ್‌ ಗಿಮಿಕ್‌ ಎಂದಿದ್ದರು ಸಚಿವರು:

ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು.
ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ ಎಂದು ಡಿಕೆಶಿಗೆ ಟಾಂಗ್‌ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಶ್ವೇತಪತ್ರ ಹೊರಡಿಸಿ:

ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ ಎಂದು ಉಪ ಮುಖ್ಯಮಂತ್ರಿಗಳಿಗೆ ನೇರ ಸವಾಲು ಹಾಕಿದ್ದಾರೆ ಕುಮಾರಸ್ವಾಮಿ ಅವರು.
ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ:

ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ? ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ಈ ಸರ್ಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruchannapatnadk shivakumarhd kumaraswamykarnatakakmskmskannadapolitics
2 FacebookTwitterPinterestEmail
KM Shivaraju

previous post
ಐಶಾರಾಮಿ ಜೀವನ ನಡೆಸುವವರು ಸಮಾಜವಾದಿನಾ?
next post
ಎನ್ ಡಿಎ ಮೈತ್ರಿಕೂಟದ ನಾಯಕರ ಸಹಕಾರ ಕೋರಿದ ವಿಜಯೇಂದ್ರ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ