Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಹುತೇಕ ಬಿಜೆಪಿ ಸಂಸದರಿಗೆ ಕೊಕ್

by KM Shivaraju November 14, 2023
written by KM Shivaraju November 14, 2023 0 comments 2 minutes read
2FacebookTwitterPinterestEmail
159
2024ರ ಲೋಕಸಭಾ ಚುನಾವಣೆಗೆ ರಾಜ್ಯದ15 ಕ್ಷೇತ್ರಗಳಲ್ಲಿ ಹೊಸಮುಖ
mangal suresh angadi
ramesh jigaginagi

ಬೆಂಗಳೂರು: ಕೇಂದ್ರದ ಮಾಜಿ ಸಚಿವರಾದ ಡಿ.ವಿ.ಸದಾನಂದ ಗೌಡ, ವಿ.ಶ್ರೀನಿವಾಸ ಪ್ರಸಾದ್ ಅನಂತ್ ಕುಮಾರ್ ಹೆಗಡೆ ಸೇರಿದಂತೆ ರಾಜ್ಯದ 15 ಹಾಲಿ ಸಂಸದರ ಕ್ಷೇತ್ರಗಳಿಗೆ ಹೊಸ ಮುಖಗಳ ಪರಿಚಯಕ್ಕೆ ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ.
ವಯೋಕಾರಣ, ಕೆಲವರು ನಿವೃತ್ತಿ ಘೋಷಣೆ ಹಾಗೂ ಕ್ಷೇತ್ರಗಳಲ್ಲಿ ವರ್ಚಸ್ಸು ಕುಂದಿರುವ ಸದಸ್ಯರನ್ನು ಕೈಬಿಟ್ಟು ಹೊಸ‌ ಮತ್ತು ಯುವ ಮುಖಗಳಿಗೆ ಅವಕಾಶ ಮಾಡಿಕೊಡಲು ಹೈಕಮಾಂಡ್ ನಿರ್ಧರಿಸಿದೆ.
ಜೆಡಿಎಸ್ ಎನ್ ಡಿಎ ಮೈತ್ರಿಕೂಟ ಸೇರಿದ ನಂತರ ಕರ್ನಾಟಕದ ಮಟ್ಟಿಗೆ ಎರಡೂ ಪಕ್ಷಗಳಿಗೆ ಬಲ ಬಂದಿದೆ. ಚುನಾವಣಾ ಮೈತ್ರಿ ಹಾಗೂ ಅಭ್ಯರ್ಥಿಗಳ ಆಯ್ಕೆಗೆ ನಡೆದಿರುವ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಾಥಮಿಕ ವರದಿ ಆಧರಿಸಿ ಪಕ್ಷ 15 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳ ಅನ್ವೇಷಣೆ ಆರಂಭಿಸಿದೆ.

.

gmsiddesh
vsrinivash prasad

ಸಂಸದರಾದ ಶ್ರೀನಿವಾಸ ಪ್ರಸಾದ್( ಚಾಮರಾಜನಗರ) ಡಿ.ವಿ.ಸದಾನಂದಗೌಡ ( ಬೆಂಗಳೂರು ಉತ್ತರ), ಶಿವಕುಮಾರ್ ಉದಾಸಿ(ಹಾವೇರಿ), ಬಿ.ಎನ್.ಬಚ್ಚೇಗೌಡ (ಚಿಕ್ಕಬಳ್ಳಾಪುರ) ಅವರು ಈಗಾಗಲೇ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ.
ವಿವಿಧ ಕಾರಣಗಳಿಗಾಗಿ ಜಿ.ಎಸ್.ಬಸರಾಜು (ತುಮಕೂರು), ಮಂಗಳ ಸುರೇಶ್ ಅಂಗಡಿ ( ಬೆಳಗಾವಿ), ಪಿ.ಸಿ.ಗದ್ದೀಗೌಡರ್ (ಬಾಗಲಕೋಟೆ), ರಮೇಶ್ ಜಿಗಜಿಣಗಿ (ವಿಜಾಪುರ), ರಾಜಾ ಅಮರೇಶ್ ನಾಯಕ್ (ರಾಯಚೂರು), ದೇವೇಂದ್ರಪ್ಪ( ಬಳ್ಳಾರಿ), ಜಿ.ಎಂ. ಸಿದ್ದೇಶ್ವರ್ (ದಾವಣಗೆರೆ), ಅನಂತ್ ಕುಮಾರ್ ಹೆಗಡೆ (ಉತ್ತರ ಕನ್ನಡ) ಅವರ ಕ್ಷೇತ್ರಗಳಿಗೆ ಹೊಸಬರಿಗೆ ಅವಕಾಶ ನೀಡಲು ಅನ್ವೇಷಣೆ ನಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ನಳಿನ್ ಕುಮಾರ್ ಕಟೀಲ್ (ದಕ್ಷಿಣ ಕನ್ನಡ), ಪ್ರತಾಪಸಿಂಹ(ಮೈಸೂರು), ಎಸ್.ಮುನಿಸ್ವಾಮಿ (ಕೋಲಾರ) ಇವರು ಕಾರ್ಯಕರ್ತರ ಮತ್ತು ಸಾರ್ವಜನಿಕರ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂಬ ವರದಿ ಇದೆ. ಇವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುತ್ತಾರೆ ಅಥವಾ ಇಲ್ಲವೋ ಎಂಬುದು ನಿಗೂಢವಾಗಿದೆ.

ಲೋಕಸಭೆ ಚುನಾವಣೆಯಲ್ಲೂ ವಿಧಾನಸಭೆ ಮಾದರಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ 75 ಹೊಸ ಮುಖಗಳನ್ನು ಕಣಕ್ಕಿಳಿಸಿ ನಡೆಸಿದ ಪ್ರಯೋಗ ವಿಫಲವಾಗಿದ್ದರೂ ಬಿಜೆಪಿ ಮತ್ತೆ ಅದೇ ಪ್ರಯೋಗವನ್ನು ಲೋಕಸಭಾ ಚುನಾವಣೆಯಲ್ಲೂ ಮಾಡಲು ಮುಂದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು, ಹಿಂದುತ್ವವಾದ ಮತ್ತು ಜೆಡಿಎಸ್ ಮೈತ್ರಿ ಹಾಗೂ ವೀರಶೈವ ಸಮುದಾಯಕ್ಕೆ ಸೇರಿರುವ ಪ್ರಭಾವಿ‌ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದರಿಂದ ಈ ಪ್ರಯೋಗ ಯಶಸ್ವಿಯಾಗಲಿದೆ ಎಂಬ ಲೆಕ್ಕಾಚಾರವಿದೆ.

ಕಳೆದ ಬಾರಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿದ್ದು, 2024 ರ ಲೋಕಸಭಾ ಚುನಾವಣೆಯಲ್ಲೂ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲೇ ಬೇಕು ಎಂದು ಪಣ ತೊಟ್ಟಿದೆ. ಅದಕ್ಕಾಗಿ ಹೊಸ ಪ್ರಯೋಗವೂ ನಡೆಸಲಿದೆ.
ಕಾಂಗ್ರೆಸ್ ಕೂಡಾ ಇದೇ ರೀತಿ 20 ಕ್ಷೇತ್ರಗಳ ಗೆಲುವಿನ‌ ಗುರಿ ಇಟ್ಟುಕೊಂಡು ಹೋರಾಟ ನಡೆಸಿದೆ. ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲೂ ಬಿಜೆಪಿ ಎರಡು ಅಂಕಿಗಿಂತ ಕಡಿಮೆ ಸ್ಥಾನ ಗಳಿಸಿರಲಿಲ್ಲ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದರೂ ಮೋದಿ ಅವರ ವರ್ಚಸ್ಸು ಹಾಗೂ ವಿವಿಧ ಕಾರಣಗಳಿಗೆ ರಾಜ್ಯದಲ್ಲಿ ಜನರು ಬಿಜೆಪಿ ಬೆಂಬಲಿಸಲಿದ್ದಾರೆ ಎಂಬ ನಂಬಿಕೆ ವರಿಷ್ಠರಿಗೆ ಇದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2023bjpindiakarnatakakmskmskanndanewsparliament electionpolitics
2 FacebookTwitterPinterestEmail
KM Shivaraju

previous post
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ 33% ಮಹಿಳೆಯರಿಗೆ ಟಿಕೆಟ್
next post
ವಿದ್ಯುತ್ ಕಳ್ಳತನ ಒಪ್ಪಿದ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ