Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿತ್ತೀಯ ಹೊಣೆ ಕಾಯ್ದೆ ಉಲ್ಲಂಘಿಸಿದ ಸಿದ್ದರಾಮಯ್ಯ: ಹೆಚ್.ಡಿ.ಕುಮಾರಸ್ವಾಮಿ ಆರೋಪ

by KM Shivaraju November 14, 2023
written by KM Shivaraju November 14, 2023 0 comments 3 minutes read
2FacebookTwitterPinterestEmail
60
ರೈತರ ಬಗ್ಗೆ ಕಾಳಜಿ ಇದ್ದರೆ ಕೃಷಿ ಸಾಲಮನ್ನಾ ಮಾಡಿ ಎಂದು ಸವಾಲು

ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ಹೊಟ್ಟೆಯುರಿ ಎಂದು ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಅವರನ್ನು ಐಶಾರಾಮಯ್ಯ ಎಂದು ಕುಟುಕಿದ್ದಾರೆ.

ಈ ಬಗ್ಗೆ ಎಕ್ಸ್‌ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್‌ ಮಾಡಿರುವ ಅವರು, ಸಿದ್ದರಾಮಯ್ಯ ಅವರು ಮಾಡಿದ್ದ ಪ್ರತಿ ಟೀಕೆಗೂ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ, ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ, ಒಳಗೆ ಐಶಾರಾಮಯ್ಯ!’ ಹೌದಲ್ಲವೇ?

ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು. 5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? ಎಂದು ಪ್ರಶ್ನಿಸಿದ್ದಾರೆ.

ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ? ಸತ್ಯ ಹೇಳಿ. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು ಹೇಳುವುದೇ ಕೆಲಸವೇ? ಹಿಂದೆ ನೀವು ಮಾಡಿದ್ದೂ ಇದೇನಾ? ನಿಮ್ಮ ‘ಸಮಾಜವಾದಿ ಆತ್ಮಸಾಕ್ಷಿ’ ಹೀಗಂತ ಹೇಳುತ್ತಿದೆಯಾ? ಗ್ಯಾರಂಟಿಗಳನ್ನು ಕಾಂಗ್ರೆಸ್ ಮತದಾರರಿಗಷ್ಟೇ ತಂದಿದ್ದೀರಿ ಎಂದು ನಾನು ಹೇಳಿದ್ದೇನೆಯೇ? ಬಹುಶಃ ನಿಮಗೆ ಅಂಥ ಮನಃಸ್ಥಿತಿ ಇದ್ದರೂ ಇದ್ದೀತು ಎಂದು ಅವರು ಕಾಲೆಳೆದಿದ್ದಾರೆ.

ಸಿದ್ದಾಂತರಾಳ ಹೀಗೆಂದು ಅಪ್ಪಣೆ ಕೊಟ್ಟಿದೆಯಾ?

ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನೆ. ಹಾಗಾದರೆ, ಮಾಧ್ಯಮಗಳಿಗೆ ಸತ್ಯ ತಿಳಿಸುವುದೇ ಅಪರಾಧವೇ? ನಿಮ್ಮ ದರ್ಬಾರಿನಲ್ಲಿ ಮಾಧ್ಯಮಗೋಷ್ಠಿಯೂ ಮಹಾಪಾಪವೇ? ನಿಮ್ಮ ‘ಸಿದ್ದಾಂತರಾಳ’ ಹೀಗೆಂದು ಅಪ್ಪಣೆ ಕೊಟ್ಟಿದೆಯಾ? ಹಳ್ಳಿಗಳಿಗೆ ಹೋಗಿದ್ದೇನೆ, ಫಲಾನುಭವಿಗಳನ್ನು ಮಾತನಾಡಿಸಿದ್ದೇನೆ. ಸತ್ಯ ಹೇಳಿದ್ದೇನೆ. ಬನ್ನಿ, ನಿಮಗೂ ಸತ್ಯದರ್ಶನ ಮಾಡಿಸುತ್ತೇನೆ ಎಂದು ಆಹ್ವಾನಿಸಿದ್ದಾರೆ ಕುಮಾರಸ್ವಾಮಿ.

ರೈತರ ಸಾಲಮನ್ನಾ ಮಾಡಲು ಆಗ್ರಹ

ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. #YstTax, #SstTax ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ. ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಇದೇ ನನ್ನ ಸವಾಲು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದ್ದಾರೆ.

ಇದ್ದಿದ್ದನ್ನು ಇದ್ದಂತೆ ಹೇಳಿದರೆ, ಅದನ್ನೇ ವಾಗ್ದಾಳಿ ಎಂದು ಅನುಕಂಪ ಗಿಟ್ಟಿಸಿಕೊಳ್ಳುವ ನಿಮ್ಮ ಬಗ್ಗೆ ಸಹಾನೂಭೂತಿ ಇದೆ. ಶಾಂತಿ, ದ್ವೇಷಾಸೂಯೆ, ಹತಾಶೆ ಬಗ್ಗೆ ದಯವಿಟ್ಟು ಮಾತನಾಡಬೇಡಿ. ನಿಮ್ಮ ಸಕಲಸದ್ಗುಣಗಳ ಬಗ್ಗೆ ನನಗಿಂತ ಮಲ್ಲಿಕಾರ್ಜುನ ಖರ್ಗೆ ಅವರೇ ಹೆಚ್ಚು ಬಲ್ಲರು. ಇನ್ನು, ಚುನಾವಣೆ ಸೋಲು ಎಂದಿದ್ದೀರಿ? ಇದು ನನಗೂ ಹೊಸದಲ್ಲ, ನಿಮಗೂ ಹೊಸದಲ್ಲ. ನಿಮ್ಮ ಹಳಹಳಿಕೆ ಅರ್ಥ ಮಾಡಿಕೊಳ್ಳಬಲ್ಲೆ. ವೈಫಲ್ಯಗಳನ್ನೇ ವಕ್ರೀಕರಿಸಿ ಅನುಕಂಪ ಗಿಟ್ಟಿಸುವ ಹಳೆಯ ಚಾಳಿ ಬಿಡಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸಾಸಿವೆ ಕಾಳಿನಷ್ಟು ಶಿಷ್ಟಾಚಾರ ಗೊತ್ತಿಲ್ಲ, ಸಾಲು ಸಾಲು ಸಮ್ಮಾನ ಬೇಕಂತೆ

ನನ್ನ ಹೆಸರು ಕೇಳಿದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಭಯ ಅನ್ನುತ್ತೀರಿ. ಪ್ರಧಾನಿ ಬಗ್ಗೆ ಮುಖ್ಯಮಂತ್ರಿ ಆಡುವ ಮಾತೇ ಇದು. ‘ಸಾಸಿವೆ ಕಾಳಿನಷ್ಟು ಶಿಷ್ಟಾಚಾರ ಗೊತ್ತಿಲ್ಲ. ಸಾಲು ಸಾಲು ಸಮ್ಮಾನ ಬೇಕು’ ಎಂದನಂತೆ ಒಬ್ಬ. ಹಾಗಿದೆ ನಿಮ್ಮ ಧಿಮಾಕು. ಧಮ್ಮು, ತಾಕತ್ತು, ಗೈರತ್ತಿನಿಂದ ಕೆಲಸ ಆಗಲ್ಲ ಮುಖ್ಯಮಂತ್ರಿಗಳೇ? ಐದು ವರ್ಷ ಸಿಎಂ ಆಗಿದ್ದ ನಿಮಗೆ ಇಷ್ಟು ಸಾಮಾನ್ಯ ಜ್ಞಾನವೂ ಇಲ್ಲವೇ? ಕಾವೇರಿ ವಿಷಯದಲ್ಲಿಯೇ ನಿಮ್ಮ ದಮ್ಮು, ತಾಕತ್ತು ಮೂರಾಬಟ್ಟೆ ಆಯಿತಲ್ಲ. ತಮಿಳುನಾಡಿಗೆ ಈಗಲೂ ನೀರು ಹರಿಯುತ್ತಿದೆಯಲ್ಲ. ಕಾಣುತ್ತಿಲ್ಲವೇ? ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ತಿರುಗೇಟು ನೀಡಿದ್ದಾರೆ.

“ಮಹಾದೇವಪ್ಪ ನಿಂಗೂ ಕತ್ತಲು ಫ್ರೀ! ನಂಗೂ ಕತ್ತಲು ಫ್ರೀ! ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ!” ಇದು ನಿಮ್ಮ ಗ್ಯಾರಂಟಿಗಳ ಸ್ಥಿತಿ. ಸುಳ್ಳೇಕೆ ಹೇಳುತ್ತೀರಿ? ಆ ಪದವಿಗಾದರೂ ಗೌರವ ಬೇಡವೇ? ಸೀಟಿನಲ್ಲಿ ಕೂತು ಸುಳ್ಳು ಹೇಳದಿರಿ. ಉಚಿತ, ಖಚಿತ ಎಂದವರು ನೀವು. ಇವು ಅಗ್ಗದ ಯೋಜನೆಗಳು ಎಂದು ನಾನು ಹೇಳಿದ್ದೂ ಹೌದು. ನಾನೇ ಏಕೆ, ನಿಮ್ಮ ಸಂಪುಟದ ಹಾಲಿ ಕ್ಯಾಬಿನೇಟ್ ಮಂತ್ರಿಯೊಬ್ಬರೇ, “ಎಲೆಕ್ಷನ್ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್ ಗಿಮಿಕ್, ಟ್ರಿಕ್ಸ್ ಮಾಡಲೇಬೇಕು” ಎಂದು ಹೇಳಿರಲಿಲ್ಲವೇ? ವೈರಲ್ ಆಗಿದ್ದ ಆ ವಿಡಿಯೋ ನಿಮ್ಮ ಮೊಬೈಲಿಗೂ ಬಂದಿರಬೇಕಲ್ಲವೇ?  ಎಂದು ಪ್ರಶ್ನಿಸಿದ್ದಾರೆ.

ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಕರ್ನಾಟಕವನ್ನು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ (1-6-2023) ನಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ. ಪ್ರತೀ ವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಸೋಲು, ಗೆಲುವು ಜನಾಧೀನ. ಆ ಸತ್ಯ ನನಗೂ ಗೊತ್ತು, ನಿಮಗೂ ಗೊತ್ತು. ಆದರೆ, ಅರೆಬರೆ ಗ್ಯಾರಂಟಿಗಳಿಂದ ಲೋಕಸಭೆ ಗೆಲ್ಲುತ್ತೇವೆ ಎಂದು ಹೊರಟಿದ್ದೀರಿ. ಬನ್ನಿ ಅಖಾಡಕ್ಕೆ. ನಮ್ಮ ಸತ್ಯಕ್ಕೆ ಸೋಲೋ, ನಿಮ್ಮ ಸುಳ್ಳಿಗೆ ಗೆಲುವೋ ಎಂದು ನೋಡೋಣ ಎಂದು ಸವಾಲು ಹಾಕಿದ್ದಾರೆ.

‘ಸಾಲದ ಶೂಲ’, ‘ಆರ್ಥಿಕ ದಿವಾಳಿತನ’, ‘ಆರ್ಥಿಕ ಅಸ್ಥಿರತೆ-ಅದಕ್ಷತೆ’, ‘ಪರಾಧೀನ ಬದುಕು’, ‘ಕಮೀಷನ್‌ ಕಾಂಡ’ – ಇವು ನಿಮ್ಮ ಸರ್ಕಾರ ರಾಜ್ಯಕ್ಕೆ ಕೊಟ್ಟಿರುವ 5 ಹೊಸ ಗ್ಯಾರಂಟಿಗಳು! ಇನ್ನು, ರಾಜ್ಯದ ಭವಿಷ್ಯ, ಪ್ರತಿಷ್ಠೆ ಎಲ್ಲವೂ ದೈವಾಧೀನ ಎಂದು ಸಿಎಂಗೆ ಟಾಂಗ್‌ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongresselectionhd kumaraswamyjdskarnatakakmskmskannadanewspoliticsSiddaramaiah
2 FacebookTwitterPinterestEmail
KM Shivaraju

previous post
ಶಿಕ್ಷಣ-ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ತಂತ್ರಜ್ಞಾನ ಅಭಿವೃದ್ಧಿ ನೆಹರು ಸಾಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
next post
ಕಂಬದಿಂದ ವಿದ್ಯುತ್ ಸಂಪರ್ಕ: ಅಚಾತುರ್ಯಕ್ಕೆ ವಿಷಾದವಿದೆ, ದಂಡ ಕಟ್ಟುವೆ ಎಂದ ಹೆಚ್.ಡಿ.ಕುಮಾರಸ್ವಾಮಿ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ