Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿದ್ಯುತ್ ಕಳ್ಳತನ ಒಪ್ಪಿದ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್

by admin November 14, 2023
written by admin November 14, 2023 0 comments 2 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
2FacebookTwitterPinterestEmail
79

ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಕೇಳಲಿ

ಬೆಂಗಳೂರು: “ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒಪ್ಪಿಕೊಂಡು ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

“ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ” ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ ‘ಎಕ್ಸ್’ ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿ‌.ಕೆ.ಶಿವಕುಮಾರ್ ಅವರು ಮಂಗಳವಾರ ಈ ರೀತಿ ಉತ್ತರಿಸಿದರು.

“ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.

ಸರ್ಕಾರ ಮಧ್ಯೆ ಪ್ರವೇಶ ಮಾಡುವುದಿಲ್ಲ

ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ಕೇಳಿದಾಗ, “ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ.  ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ”  ಎಂದರು.

ಸತ್ಯವನ್ನು ಕುಮಾರಸ್ವಾಮಿ ಅವರು ಒಪ್ಪಿಕೊಂಡಿರುವುದಕ್ಕೆ ಶುಭವಾಗಲಿ, ಸತ್ಯಮೇವ ಜಯತೇ ಎನ್ನುವ ಮಾತಿನಂತೆ ಸತ್ಯವನ್ನ ಎತ್ತಿ ಹಿಡಿದಿರುವುದಕ್ಕೆ ಸಂತೋಷ ಎಂದು ಹೇಳಿದರು.

 ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ, “ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ. ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದರು.

“ಶಕ್ತಿ ಯೋಜನೆಯಿಂದ ಈವರೆಗೂ ರಾಜ್ಯದ ಮಹಿಳೆಯರು 100 ಕೋಟಿ ರೂಪಾಯಿ ಮೌಲ್ಯದ ಬಸ್ ಟ್ರಿಪ್ ಗಳಲ್ಲಿ ಉಚಿತವಾಗಿ ಓಡಾಡಿದ್ದಾರೆ‌. ಪ್ರತಿ ತಿಂಗಳು 1 ಕೋಟಿಗೂ ಹೆಚ್ಚಿನ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ತಲುಪುತ್ತಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣದ ಜನತೆ ಸೇರಿದಂತೆ ಅವರ ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ” ಎಂದು ಸವಾಲು ಹಾಕಿದರು.

ನನ್ನ ಆಡಳಿತಾವಧಿಯಲ್ಲಿ ನಾನು ಸಾಲಮನ್ನಾ ಮಾಡಿದ್ದೇನೆ. ಸರ್ಕಾರ ಈಗ ಸಾಲಮನ್ನಾ ಮಾಡಿ ತೋರಿಸಲಿ ಎಂಬ ಕುಮಾರಸ್ವಾಮಿ ಮಾತಿನ ಬಗ್ಗೆ ಕೇಳಿದಾಗ,  “ಅವರ ಸವಾಲನ್ನು ಅತ್ಯಂತ ಸಂತೋಷ, ಗೌರವದಿಂದ ಸ್ವೀಕರಿಸುತ್ತೇವೆ.

ಡಿ. 4 ನೇ ತಾರೀಖಿನ ನಂತರ ಅವರ ಎಲ್ಲಾ ಕಡತಗಳು, ಲೆಕ್ಕಾಚಾರಗಳು, ಗ್ಯಾರಂಟಿಗಳು, ಸವಾಲುಗಳನ್ನು ತೆಗೆದುಕೊಂಡು ವಿಧಾನಸಭೆ ಅಧಿವೇಶನಕ್ಕೆ ಬರಲಿ. ಅವರ ಭರವಸೆ, ಆಡಿದ ಮಾತುಗಳು, ಪಂಚರತ್ನಗಳು ಮತ್ತು ಈ ಹಿಂದೆ ಏನೇನೆಲ್ಲಾ ಹೇಳಿದ್ದರು ಅದನ್ನೆಲ್ಲಾ ತೆಗೆದುಕೊಂಡು ವಿಧಾನಸಭೆಗೆ ಬರಲಿ. ಅಲ್ಲಿ ಅವರ ನುಡಿಮುತ್ತುಗಳನ್ನು ಕೇಳೋಣ. ಅವರ ಸವಾಲು, ಪಂಚರತ್ನಗಳಿಗೆ ಕರ್ನಾಟಕ ಜನ ಈಗಾಗಲೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಅದೇ ರೀತಿ ನಮ್ಮ ಗ್ಯಾರಂಟಿಗಳಿಗೂ ಉತ್ತರ ಕೊಟ್ಟಿದ್ದಾರೆ” ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudk shivakumarkarnatakakmskannadakumaraswamypoliticspower
2 FacebookTwitterPinterestEmail
admin

previous post
ಬಹುತೇಕ ಬಿಜೆಪಿ ಸಂಸದರಿಗೆ ಕೊಕ್
next post
ದೆಹಲಿಯಲ್ಲಿ 50 ಮಳಿಗೆಯ ಶಾಪಿಂಗ್ ಕಟ್ಟಡ ಸಂಕೀರ್ಣ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ