Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಿಕ್ಷಣ-ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ತಂತ್ರಜ್ಞಾನ ಅಭಿವೃದ್ಧಿ ನೆಹರು ಸಾಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

by KM Shivaraju November 14, 2023
written by KM Shivaraju November 14, 2023 0 comments 1 minutes read
2FacebookTwitterPinterestEmail
74
ಸ್ವಾತಂತ್ರ್ಯ ಹೋರಾಟಗಾರರಾಗಿ 9 ವರ್ಷ ಜೈಲುವಾಸ ಅನುಭವಿಸಿದ್ದ ನೆಹರು

ಬೆಂಗಳೂರು: ಶಿಕ್ಷಣ ಸಂಸ್ಥೆಗಳು, ವಿಜ್ಞಾನ-ಸಂಶೋಧನಾ ಸಂಸ್ಥೆಗಳು, ತಂತ್ರಜ್ಞಾನ, ವಿಶ್ವ ವಿದ್ಯಾಲಯಗಳ ಸ್ಥಾಪನೆ ಮಾಡಿದ್ದು, ಕೃಷಿ ಅಭಿವೃದ್ಧಿ  ನೆಹರೂ ಅವರ ದೂರದೃಷ್ಟಿಯ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಇಲ್ಲಿ ಏನೇನೂ ಇರಲಿಲ್ಲ. ಶಿಕ್ಷಣ ಸಂಸ್ಥೆಗಳು ಇರಲಿಲ್ಲ. ನೀರಾವರಿ ವ್ಯವಸ್ಥೆ ಇರಲಿಲ್ಲ. ಆದರೆ ದೇಶದ ಮೊದಲ ಪ್ರಧಾನಿಯಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ, ಪ್ರಜಾಪ್ರಭುತ್ವವಾದಿ ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.

ಶಿಕ್ಷಣ ಸಂಸ್ಥೆಗಳು, ವಿಜ್ಞಾನ, ಸಂಶೋಧನಾ ಸಂಸ್ಥೆಗಳು, ತಾಂತ್ರಿಕ ಕಾಲೇಜುಗಳು, ವೈದ್ಯಕೀಯ ಅಧ್ಯಯನ ಸಂಸ್ಥೆಗಳು, ಅಣೆಕಟ್ಟುಗಳು, ಆಸ್ಪತ್ರೆಗಳು ಸೇರಿ ಆಧುನಿಕ ಭಾರತದ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ಕ್ಷೇತ್ರಗಳನ್ನೂ ವಿಶ್ವ ಮಟ್ಟದ ಗುಣಮಟ್ಟದಲ್ಲಿ ಆಗಿನ ಕಾಲಕ್ಕೇ ಸ್ಥಾಪಿಸಿದ್ದರು ಎಂದು ಅವರು ಸ್ಮರಿಸಿದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು ಅಷ್ಟೆ. ಇವರ್ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿ ತಪ್ಪಿಯೂ ಹೋರಾಡಿದವರಲ್ಲ. ಒಬ್ಬೇ ಒಬ್ಬ ಬಿಜೆಪಿ ಪರಿವಾರದ ಸದಸ್ಯ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲು ಸೇರಿಲ್ಲ ಎಂದು ವ್ಯಂಗ್ಯವಾಡಿದರು.

ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಎನ್ನುವ ಕೀಳರಿಮೆ ಮತ್ತು ಅಳುಕಿನಿಂದ ಸ್ವಾತಂತ್ರ್ಯ ಹೋರಾಟಗಾರರಾಗಿ 9 ವರ್ಷ ಜೈಲುವಾಸ ಅನುಭವಿಸಿ 17 ವರ್ಷ ದೇಶದ ಪ್ರಧಾನಿ ಆಗಿದ್ದ ನೆಹರು ಅವರನ್ನು ಆಡಿಕೊಳ್ಳುವುದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

17 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದ ನೆಹರು

ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ನೆಹರು ಅವರಿಗೆ ಅಪಾರ ನಂಬಿಕೆ ಇತ್ತು‌. 17 ವರ್ಷಗಳ ಕಾಲ ಪ್ರಧಾನಿ ಆಗಿದ್ದ ಅವರು ಚರ್ಚೆ, ಸಂವಾದದಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶ್ರಮಿಸುವವರ ಕಟು ಟೀಕೆಗಳನ್ನೂ ಅತ್ಯಂತ ಸಹನೆಯಿಂದ ಸ್ವೀಕರಿಸುತ್ತಿದ್ದರು. ಅಷ್ಟು ದೊಡ್ಡ ವ್ಯಕ್ತಿತ್ವ ಅವರದ್ದಾಗಿತ್ತು. ವಿಶ್ವ ಮಟ್ಟದಲ್ಲಿ ಭಾರತ ತಲೆ ಎತ್ತಿ ನಿಲ್ಲಲು ಅವರು ಭಾರತ ದೇಶಕ್ಕೆ ಹಾಕಿದ ಭದ್ರ ಬುನಾದಿ ಕಾರಣ ಎಂದು ಮುಖ್ಯಮಂತ್ರಿ ಮೆಚ್ಚುಗೆ ಸೂಚಿಸಿದರು.

ನೆಹರು ಈ ದೇಶದ ಅತ್ಯಂತ ಹೃದಯವಂತಿಕೆ ಇದ್ದ ಅಗ್ರಗಣ್ಯ ನಾಯಕ ಎಂದು ಬಣ್ಣಿಸಿ ಇದಕ್ಕೆ ಹಲವು ಪ್ರಸಂಗಗಳನ್ನು ಉದಾಹರಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಿಡಬ್ಲ್ಯುಸಿ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucongressdk shivakumarkarnatakakmskmskannadaneharupoliticsSiddaramaiah
2 FacebookTwitterPinterestEmail
KM Shivaraju

previous post
ದೆಹಲಿಯಲ್ಲಿ 50 ಮಳಿಗೆಯ ಶಾಪಿಂಗ್ ಕಟ್ಟಡ ಸಂಕೀರ್ಣ
next post
ವಿತ್ತೀಯ ಹೊಣೆ ಕಾಯ್ದೆ ಉಲ್ಲಂಘಿಸಿದ ಸಿದ್ದರಾಮಯ್ಯ: ಹೆಚ್.ಡಿ.ಕುಮಾರಸ್ವಾಮಿ ಆರೋಪ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ