Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತಂದೆಯ ಜವಾಬ್ದಾರಿ ಪುತ್ರ ನೋಡಿಕೊಳ್ಳುತ್ತಿದ್ದಾರೆ

by KM Shivaraju November 16, 2023
written by KM Shivaraju November 16, 2023 0 comments 1 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
2FacebookTwitterPinterestEmail
93
ಯತೀಂದ್ರ ಕಾರ್ಯಕ್ಕೆ ಶಿವಕುಮಾರ್ ಸಮರ್ಥನೆ

ಬೆಂಗಳೂರು:ಯತೀಂದ್ರ ಅವರು ಯಾವ ಅಧಿಕಾರಿ ಹೆಸರು, ಯಾವ ಹುದ್ದೆ, ಎಷ್ಟು ಲಂಚ ಎಂದು ಎಲ್ಲಿ ಹೇಳಿದ್ದಾರೆ. ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗ (ಯತೀಂದ್ರ) ನನ್ನು ನಾಯಕನನ್ನಾಗಿ ಬೆಳೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಶಾಸಕ ತಂದೆಯ ಜವಾಬ್ದಾರಿ ತೆಗೆದುಕೊಂಡು ತಮ್ಮ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ನಾನು ಬೆಳಿಗ್ಗೆಯೇ ಆ ವಿಡಿಯೋ ನೋಡಿದೆ. ವರ್ಗಾವಣೆ ದಂಧೆ ಎನ್ನಲು ಅವರು ಯಾವ ಅಧಿಕಾರಿ, ಯಾವ ಹುದ್ದೆ ಎಂದು ಉಲ್ಲೇಖವನ್ನೇ ಮಾಡಿಲ್ಲವಲ್ಲ ಎಂದರು.

ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡರೆ ತಪ್ಪೇನಿದೆ

ಮಾಜಿ ಶಾಸಕರಾಗಿ ಯತೀಂದ್ರ ಅವರು ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಬೇಕಾದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡರೆ ಅದರಲ್ಲಿ ತಪ್ಪೇನಿದೆ.

ಯಾರೋ ಒಂದಷ್ಟು ಶಾಲೆಗಳ ಹೆಸರನ್ನು ಬದಲಾಯಿಸಿದ ಕಾರಣ, ಸ್ಥಳೀಯರು ದೂರು ನೀಡಿದ್ದರು. ಅದಕ್ಕೆ ಯತೀಂದ್ರ ಅವರು ಇಂತಿಷ್ಟು ಹಳ್ಳಿಗಳ ಶಾಲೆಗಳಿಗೆ ಸೌಲಭ್ಯ ನೀಡುತ್ತೇವೆ ಎಂದು ಮಾತುಕೊಟ್ಟಿದ್ದು, ಅದರಂತೆ ಜನ ಸಂಪರ್ಕ ಸಭೆಯಲ್ಲಿಯೇ ಕರೆ ಮಾಡಿ ಮಾತನಾಡಿದ್ದಾರೆ. ಆಶ್ರಯ ಸಮಿತಿ ಅಧ್ಯಕ್ಷರಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಅಧಿಕಾರವಿರುತ್ತದೆ.

ನನ್ನ ಕೆಲಸಗಳನ್ನು ನನ್ನ ಸಹೋದರ, ಸಂಸದ ಸುರೇಶ್ ನೋಡಿಕೊಳ್ಳುತ್ತಾರೆ

ನಾನು ಅನೇಕ ಕೆಲಸಗಳನ್ನು ನನ್ನ ಕ್ಷೇತ್ರಗಳಲ್ಲಿ ಮಾಡಲು ಆಗುವುದಿಲ್ಲ, ಅವುಗಳನ್ನು ನನ್ನ ಸಹೋದರ, ಸಂಸದ ಸುರೇಶ್ ನೋಡಿಕೊಳ್ಳುತ್ತಾರೆ. ನಮ್ಮ ಕ್ಷೇತ್ರದ ಜನ ಮನೆ, ಹಸು, ಕುರಿ ಬೇಕು ಎಂದು ಮನವಿ ಸಲ್ಲಿಸಿರುತ್ತಾರೆ. ಆ ಅರ್ಜಿಗಳನ್ನು ನೋಡಿ ಸಹಿ ಹಾಕಿ ಕಳಿಸುತ್ತೇನೆ. ಕ್ಷೇತ್ರಗಳ ಕೆಲಸಗಳನ್ನು ಹೀಗೆಯೇ ಮಾಡುವುದು.

ಬಗರ್ ಹುಕುಂ ಸಮಿತಿಗೆ ನಾನು ಅಧ್ಯಕ್ಷನಾಗಲು ಆಗುವುದಿಲ್ಲ, ಅದರ ಬದಲು ಸ್ಥಳೀಯ ನಾಯಕರಿಗೆ ಜವಾಬ್ದಾರಿ ನೀಡುತ್ತೇವೆ.
ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ನಮ್ಮ ಕಾರ್ಯಕರ್ತರಿಗೆ ಹೇಳಿದ್ದೇನೆ, ಯಾರೋ ಗುತ್ತಿಗೆದಾರನಿಗೆ ಅಲಂಕಾರ ಮಾಡು ಎಂದು ಹೇಳಿರುತ್ತಾರೆ, ಅವರು ಮಾಡಿರುವ ಕೆಲಸ ಇದಾಗಿರಬಹುದು. ಕುಮಾರಸ್ವಾಮಿ ಅವರು ಬಹಳ ದೊಡ್ಡತನದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjpcongressdk shivakumarjdskarnatakakmskmskannadapolitics
2 FacebookTwitterPinterestEmail
KM Shivaraju

previous post
ಅಧಿಕಾರದಲ್ಲಿದ್ದಾಗ ಲಂಚದಲ್ಲೇ ಮುಳುಗೇಳುತ್ತಿದ್ದ ಕುಮಾರಸ್ವಾಮಿ
next post
‌‌ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಆಹ್ವಾನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ