Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ ನಿಂದ ಸಿಎಂ ಇಬ್ರಾಹಿಂ ಅಮಾನತು

by KM Shivaraju November 17, 2023
written by KM Shivaraju November 17, 2023 0 comments 1 minutes read
2FacebookTwitterPinterestEmail
289
ಆದೇಶ ಹೊರಡಿಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್‌ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಸಸ್ಪಂಡ್‌ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಬಿಜೆಪಿ ಜತೆ ಮೈತ್ರಿ ವಿರೋಧಿಸಿದ್ದ ಇಬ್ರಾಹಿಂ

ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ. ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುತ್ತಾರೆ ಎಂದು ಅವರು ಹೇಳಿದ್ದಾರೆ.

ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು. ಮೈತ್ರಿಯ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲಾ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ.

ಅಕ್ಟೋಬರ್ ನಲ್ಲಿ ಜೆಡಿಎಸ್ ರಾಜ್ಯ ಘಟಕ ವಿಸರ್ಜನೆ

ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳದ ರಾಜ್ಯಾಧ್ಯಕ್ಷರನ್ನು ಒಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಪಕ್ಷದ ಸಂವಿಧಾನದ ಆರ್ಟಿಕಲ್‌ 10ರ ಅನ್ವಯ ಕಳೆದ ಅಕ್ಟೋಬರ್‌ 19ರಂದು ವಿಸರ್ಜನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಆದೇಶ ಹೊರಡಿಸಿದ್ದರು.

ಪಕ್ಷ ವಿರೋಧಿ ಹೇಳಿಕೆ ನೀಡಿದ, ಕೇರಳದಲ್ಲಿ ಪಕ್ಷ ವಿರೋಧಿ ಸಭೆ ನಡೆಸಿದ ಆರೋಪ

ನಂತರ ಇಬ್ರಾಹಿಂ ಅವರು ನವೆಂಬರ್‌ 7ರಂದು ʼಚಿಂತನ ಮಂಥನʼ ಎನ್ನುವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಮಾನಾಂತರ ಸಭೆ ಕರೆದು ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ಸುಳ್ಳು ಆರೋಪಗಳನ್ನು ಮಾಡಿದ್ದರು.

ನವೆಂಬರ್‌ 7ರಂದು ನೀಡಿದ ಹೇಳಿಕೆಯಲ್ಲಿ, ನಾನಿನ್ನೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.

ನವೆಂಬರ್‌ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಇವೆಲ್ಲಾ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Anti-party activitybengaluruc m ibrahimdevegowdahddjdskarnatakakmskmskannadanational president of jds partypoliticssuspended
2 FacebookTwitterPinterestEmail
KM Shivaraju

previous post
ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಅಶೋಕ್ ಆಯ್ಕೆ
next post
ಕಾಂಗ್ರೆಸ್ ಆಹ್ವಾನವನ್ನುನಯವಾಗಿ ತಳ್ಳಿಹಾಕಿದ ದೇವೇಗೌಡರು

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ