Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೋಸ್ಟರ್ ವಾರ್‌ಗೆ ಜೆಡಿಎಸ್ ಕೆಂಡಾಮಂಡಲ

by KM Shivaraju November 21, 2023
written by KM Shivaraju November 21, 2023 0 comments 2 minutes read
2FacebookTwitterPinterestEmail
83

ಗೃಹ ಇಲಾಖೆ ತಕ್ಷಣ ಕ್ರಮಕೈಗೊಳ್ಳಬೇಕು

ಬೆಂಗಳೂರು:ಕಾಂಗ್ರೆಸ್ ಪೋಸ್ಟರ್ ಚಾಳಿ ಬಿಡದಿದ್ದರೆ ಕಾನೂನು ಸುವ್ಯವಸ್ಥೆ ಹದಗೆಟ್ಟು ರಕ್ತಪಾತವಾದರೆ ಸರ್ಕಾರವೇ ಹೊಣೆ ಎಂದು ಜೆಡಿಎಸ್ ಇಂದಿಲ್ಲಿ ಎಚ್ಚರಿಕೆ ನೀಡಿದೆ.

ಪೋಸ್ಟರ್ ಚಾಳಿಗೆ ಪೊಲೀಸರು ಕಡಿವಾಣ ಹಾಕದಿದ್ದರೆ ಹಾದಿ-ಬಿದಿಯಲ್ಲಿ ಮಾರಾಮಾರಿ ಆಗುತ್ತದೆ, ಗೃಹ ಇಲಾಖೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ನಾವೂ ಪೊಸ್ಟರ್ ರಾಜಕೀಯ ಮಾಡುತ್ತೇವೆ ಎಂದಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಶಾಸಕರಾದ ಎ.ಮಂಜುನಾಥ್, ಅಶ್ವಿನ್‌ಕುಮಾರ್ ಹಾಗೂ ಎಚ್.ಎಂ. ರಮೇಶ್ ಗೌಡ, ನಮ್ಮ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಪೊಲಿಟಿಕ್ಸ್ ಮಾಡಲಾಗುತ್ತಿದೆ ಎಂದರು.

ಗೃಹ ಸಚಿವರು ತಕ್ಷಣ ಮಧ್ಯೆ ಪ್ರವೇಶ ಮಾಡಿ ಇದನ್ನು ತಡೆಯಬೇಕು, ಕಾಂಗ್ರೆಸ್ ತಮ್ಮ ಪಕ್ಷದ ನಾಯಕರ ಮೇಲೆ ಬರುತ್ತಿರುವ ಆರೋಪಗಳನ್ನು ಸಹಿಸಲಾಗದೆ ಇಂತಹ ಅನಿಷ್ಟ ಪದ್ಧತಿಗೆ ಇಳಿದಿದೆ.

ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರ್ಕಾರದ ಸಮಯದಲ್ಲಿ ಪೇ-ಸಿಎಂ ಪೋಸ್ಟರ್‌ಗಳನ್ನು ರಾತ್ರೋರಾತ್ರಿ ಅಂಟಿಸಿದರು. ಈಗ ಜನಪರ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡುತ್ತಿರುವ ಕುಮಾರಸ್ವಾಮಿ ಅವರ ಬಗ್ಗೆ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ ಅಂಟಿಸಿ ಮೇಲುಗೈ ಸಾಧಿಸುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ.

ನಾವು ಕಾಂಗ್ರೆಸ್‌ನವರ ವಿರುದ್ಧದ ಪೋಸ್ಟರ್‌ಗಳನ್ನು ಅಂಟಿಸುವುದು ದೊಡ್ಡ ವಿಚಾರವಲ್ಲ, ಅವರು ಒಂದು ಮಾಡಿದರೆ ಹತ್ತು ಮಾಡುವ ಶಕ್ತಿ ನಮಗೂ ಇದೆ, ಇದು ಯಾವುದು ರಾಜಕಾರಣದಲ್ಲಿ ಶಾಶ್ವತ ಅಲ್ಲ ಎಂದರು.

ಪೊಲೀಸ್ ಮಹಾನಿರ್ದೇಶಕರಿಗೂ ಸಹ ಮನವಿ ಮಾಡುತ್ತೇವೆ, ಇದಕ್ಕೆಲ್ಲಾ ಕಡಿವಾಣ ಹಾಕುವ ಕೆಲಸ ಮಾಡಬೇಕು, ವಿದ್ಯುತ್ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದಾಗ ಗೃಹ ಇಲಾಖೆ ಏನು ಮಾಡುತ್ತಿತ್ತು, ಮತ್ತೆ ಪೋಸ್ಟರ್ ಅಂಟಿಸಿದ್ದಾರೆ.

ಇದು ಹೀಗೇ ಮುಂದುವರೆದರೆ ಹಾದಿ-ಬೀದಿಯಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯುವ ಪರಿಸ್ಥಿತಿ ಸೃಷ್ಟಿ ಆಗುತ್ತದೆ, ಅಂತಹ ಪರಿಸ್ಥಿತಿ ಸೃಷ್ಟಿಯಾದರೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯೇ ಹೊಣೆ ಆಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಹಿಂಬಾಲಕರು ಈ ಕೃತ್ಯದಲ್ಲಿ ತೊಡಗಿದ್ದಾರೆ, ಗೃಹ ಇಲಾಖೆ ಇದಕ್ಕೆ ಕಡಿವಾಣ ಹಾಕದಿದ್ದರೆ ಇದಕ್ಕಿಂತ ಹೆಚ್ಚಿನ ಪೋಸ್ಟರ್ ಚಳವಳಿ ನಡೆಯುತ್ತದೆ.

ರಾಜ್ಯದ ಜನತೆಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ತಿಳಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಮಾಡಿದ್ದೆಲ್ಲಾ ಸರಿಯಾಗಿದ್ದರೆ ಈ ರೀತಿ ಪೋಸ್ಟರ್ ಅಂಟಿಸುವ ಕೆಲಸ ಮಾಡುತ್ತಿರಲಿಲ್ಲ ಎಂದು ಕಿಡಿಕಾರಿದರು. ಪೋಸ್ಟರ್ ಅಂಟಿಸಲು ನಮ್ಮಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಇದ್ದಾರೆ, ಕಾಂಗ್ರೆಸ್ ಮಾಡಿದ್ದನ್ನೇ ನಾವು ಮಾಡುತ್ತೇವೆ.

ಡಿಸೆಂಬರ್ 4ರಿಂದ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು ಕುಮಾರಸ್ವಾಮಿ ಅವರ ಆರೋಪಗಳಿಗೆ ಸರ್ಕಾರ ಸದನದಲ್ಲಿ ಉತ್ತರ ನೀಡಲಿ, ಜೆಡಿಎಸ್ ನಾಯಕರು ಗಾಜಿನ ಮನೆಯಲ್ಲಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕು ಎಂದು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟರ್ ಅಂಟಿಸಬಾರದು ಎಂಬುದಾಗಿ ಹೈಕೋರ್ಟ್‌ನ ಸ್ಪಷ್ಟ ಆದೇಶವಿದೆ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರವಾಗಿ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಿದ್ದ ಏಜೆನ್ಸಿಯೇ ಇಂದು ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸುವ ಕೆಲಸ ಮಾಡುತ್ತಿದೆ.
ಕುಮಾರಸ್ವಾಮಿ ಯಾವುದೇ ಆರೋಪ ಮಾಡಿದರೂ ದಾಖಲೆ ಇಟ್ಟುಕೊಂಡು ಮಾತನಾಡುತ್ತಾರೆ. ನಮ್ಮ ನಾಯಕರ ಆರೋಪಕ್ಕೆ ಕಾಂಗ್ರೆಸ್‌ನವರು ಏಕೆ ಹೆದರುತ್ತಾರೆ.

ಪೆನ್‌ಡ್ರೈವ್ ಬಗ್ಗೆಯೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ, ’ಪೆನ್‌ಡ್ರೈವ್ ವಿಷಯ ಬೇಡ, ಸರ್ಕಾರ ಬಂದು ಸ್ವಲ್ಪ ತಿಂಗಳಾಗಿದೆ’ ಎಂದು ಕಾಂಗ್ರೆಸ್ ನಾಯಕರೇ ಕುಮಾರಸ್ವಾಮಿ ಬಳಿ ಮನವಿ ಮಾಡಿದ್ದರು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congressdemand to home ministryjdskarnatakakmsposter war
2 FacebookTwitterPinterestEmail
KM Shivaraju

previous post
ಸಿಎಂ, ಡಿಸಿಎಂ, ಇಂಧನ ಸಚಿವರ ಮೇಲೆ ಎಫ್‌ಐಆರ್ ಹಾಕಿ
next post
ರಾಜ್ಯಕ್ಕೆ ರಜನೀಶ್ ಗೋಯಲ್ ಹೊಸ ಮುಖ್ಯ ಕಾರ್ಯದರ್ಶಿ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ