ವಂದಿತಾ ಶರ್ಮಾ ಅವರು ನವೆಂಬರ್ 30ರಂದು ನಿವೃತ್ತಿ
ಬೆಂಗಳೂರು: ರಾಜ್ಯ ಸರ್ಕಾರದ ಹೊಸ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಇಂದು ನೇಮಕವಾಗಿದ್ದಾರೆ.
ರಾಜ್ಯ ಸರ್ಕಾರದ ಹಾಲಿ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು, ನವೆಂಬರ್ 30ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ವಂದಿತಾ ಶರ್ಮಾ ಅವರ ನಿವೃತ್ತಿಯಿಂದ ತೆರವಾಗುವ ಮುಖ್ಯಕಾರ್ಯದರ್ಶಿ ಹುದ್ದೆಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೇವಾ ಹಿರಿತನವನ್ನು ಪರಿಗಣಿಸಿ ನೂತನ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನೇಮಕ ಮಾಡಿ ಆದೇಶಿಸಿದೆ.
ಡಿಸೆಂಬರ್ ಒಂದರಿಂದ ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆಗೆ ರಾಜ್ಯದ ಹೊಸ ಮುಖ್ಯಕಾರ್ಯದರ್ಶಿಯಾಗಿ ಅವರು ಸೇವೆ ಸಲ್ಲಿಸಲಿದ್ದಾರೆ.