26
ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಿಸಬೇಕು
ಬೆಂಗಳೂರು:ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ, ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ಕುಸಿಯುತ್ತಿದೆ, ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಗ್ರಹಿಸಿದ್ದಾರೆ.
ಬಡತನ-ದಾರಿದ್ರ್ಯ-ಅನಕ್ಷರತೆ ಹೋಗಲಾಡಿಸಿದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ, ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ.
ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ಸರ್ಕಾರದ ಗುರಿಯಾಗಿದೆ. ಇದಕ್ಕೆ ಸರ್ಕಾರ ಅಗತ್ಯ ಹಣ ನೀಡಲು ಸಿದ್ಧವಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ರಾಜ್ಯದ ಮಕ್ಕಳು ಮತ್ತು ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ಹೆಚ್ಚೆಚ್ಚು ಸಿಗುವಂತೆ ಶ್ರಮವಹಿಸಿ ಎಂದು ಸಲಹೆ ನೀಡಿದರು.