Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸಂಪುಟದ ಸಹೋದ್ಯೋಗಿಗಳಿಂದ ಮುಖ್ಯಮಂತ್ರಿಗೆ ಒತ್ತಡ

by KM Shivaraju November 22, 2023
written by KM Shivaraju November 22, 2023 0 comments 1 minutes read
7FacebookTwitterPinterestEmail
268
ಹಿಂದುಳಿದ ವರ್ಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಅಧಿಕಾರಾವಧಿ ಒಂದು ತಿಂಗಳ ಮಟ್ಟಿಗೆ ವಿಸ್ತರಣೆ

ಬೆಂಗಳೂರು: ಜಾತಿ ಗಣತಿಗೆ ವೀರಶೈವ-ಲಿಂಗಾಯತ, ಒಕ್ಕಲಿಗ ಸಮುದಾಯಗಳ ತೀವ್ರ ವಿರೋಧಕ್ಕೆ ತಲೆಬಾಗಿರುವ ರಾಜ್ಯ ಸರ್ಕಾರವು ಆಂತರಿಕವಾಗಿ ಕೆಲವು ಬದಲಾವಣೆ ಮಾಡಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಅವರ ಅಧಿಕಾರಾವಧಿಯನ್ನು ಒಂದು ತಿಂಗಳ ಮಟ್ಟಿಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ಈ ಹಿಂದೆ ಆಯೋಗದ  ಅಧ್ಯಕ್ಷರಾಗಿದ್ದ ಕಾಂತರಾಜ್ ನೀಡಿರುವ ವರದಿಯಲ್ಲಿ ಲಿಂಗಾಯತ, ಒಕ್ಕಲಿಗ ಸೇರಿದಂತೆ ಮುಂದುವರೆದ ಜಾತಿಗಳನ್ನು ಆಂತರಿಕವಾಗಿ ವಿಭಜಿಸಿ ಸಮುದಾಯಗಳನ್ನು ಗುಂಪುಗಳಾಗಿ ಒಡೆಯಲಾಗಿತ್ತು.  ಇದರಿಂದ ಈ ಎರಡೂ ಸಮುದಾಯಗಳು ಇತರ ಸಮುದಾಯಗಳಿಗಿಂತ ಅಂಕಿ-ಸಂಖ್ಯೆಯಲ್ಲಿ ಕೆಳಮಟ್ಟಕ್ಕೆ ಹೋಗಿದ್ದವು ಎಂಬ ಆರೋಪಗಳಿವೆ.

ಶಾಶ್ವತ ಆಯೋಗ ನೀಡಿರುವ ವರದಿಯ ಅಂಕಿ-ಅಂಶಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಸಮುದಾಯಗಳ ಆಂತರಿಕ ವಿಂಗಡಣೆಯನ್ನು ತಪ್ಪಿಸಿ ಸಮುದಾಯವನ್ನು ಒಟ್ಟಾಗಿ ಪರಿಗಣಿಸಲಾಗುವುದು.

ಸಾಮಾಜಿಕ-ಆರ್ಥಿಕ-ಶೈಕ್ಷಿಣಿಕ ವರದಿ ಅನುಷ್ಟಾನಕ್ಕೆ ಆಸಕ್ತಿ

ಕಳೆದ ಎಂಟು ವರ್ಷಗಳ ಹಿಂದೆಯೇ ವರದಿ ಸೋರಿಕೆಯಾಗಿ ಈ ಸಮುದಾಯಗಳ ಕೆಂಗಣ್ಣಿಗೆ ಗುರಿಯಾಗಿತ್ತು.  ಮತ್ತೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಹಿಂದಿನ ಆಡಳಿತಾವಧಿಯಲ್ಲಿ ಸಿದ್ಧಗೊಂಡಿರುವ ಸಾಮಾಜಿಕ-ಆರ್ಥಿಕ-ಶೈಕ್ಷಿಣಿಕ ವರದಿಯನ್ನು ಅನುಷ್ಟಾನಗೊಳಿಸಲು ಆಸಕ್ತಿ ತೋರಿದರು.

ಶಾಶ್ವತ ಆಯೋಗದ ಹಾಲಿ ಅಧ್ಯಕ್ಷರು ನೀಡುವ ವರದಿಯನ್ನು ಸ್ವೀಕರಿಸಿ ಅನುಷ್ಟಾಗೊಳಿಸುವುದಾಗಿ ಮುಖ್ಯಮಂತ್ರಿ ಹೇಳಿಕೆ ನೀಡಿದ ಬೆನ್ನಲ್ಲೇ ಪಕ್ಷಾತೀತವಾಗಿ ಈ ಸಮುದಾಯಗಳ ಜನಪ್ರತಿನಿಧಿಗಳು ಮತ್ತು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಸಹೋದ್ಯೋಗಿಗಳೇ ಅಪಸ್ವರ ಎತ್ತಿ ಕಾಂತರಾಜ್ ವರದಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಅನುಷ್ಟಾಗೊಳಿಸಲು ಮುಖ್ಯಮಂತ್ರಿ ಮೇಲೆ ಒತ್ತಡ ತಂದರು.

ಸಚಿವ ಸಂಪುಟದ ಉಪಸಮಿತಿ ರಚನೆಗೆ ನಿರ್ಧಾರ

ಲೋಕಸಭಾ ಚುನಾವಣೆ ಸನಿಹದಲ್ಲಿ ಜಾತಿ ಕಲಹಕ್ಕೆ ಅವಕಾಶ ಮಾಡಿಕೊಡಬಾರದು ಮತ್ತು ಸರ್ಕಾರದ ನಿಲುವು ಅಚಲವಾಗಿರಬೇಕೆಂಬ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಉಂಟಾಗಿರುವ ಲೋಪದೋಷವನ್ನು ಸರಿಪಡಿಸಲು ಆಯೋಗದ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ವರದಿ ಬಂದ ನಂತರ ಸಚಿವ ಸಂಪುಟದ ಉಪಸಮಿತಿ ರಚಿಸಿ ಆ ಸಮಿತಿಗೆ ತಜ್ಞರ ನೇಮಕ ಮಾಡಿ, ಅವರು ನೀಡುವ ವರದಿಯನ್ನು ಆಧರಿಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

ಸಮಾಜದ ಎಲ್ಲಾ ವರ್ಗಗಳಲ್ಲಿ ಇರುವ ಕಡುಬಡವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಉಪಸಮಿತಿ ತೀರ್ಮಾನ ಮಾಡಲಿದೆ.

ಸರ್ಕಾರಿ ಸೌಲಭ್ಯಗಳು ಉಳ್ಳವರಿಗೇ ದೊರೆಯುತ್ತದೆ ಎಂಬ ಅಪವಾದದಿಂದ ದೂರವಾಗಿ ಸಾಮಾಜಿಕ-ಆರ್ಥಿಕ-ಶೈಕ್ಷಣಿಕವಾಗಿ ಹಿಂದುಳಿದ ಎಲ್ಲರಿಗೂ ಶಿಕ್ಷಣ, ಉದ್ಯೋಗ ಹಾಗೂ ಸರ್ಕಾರಿ ಸವಲತ್ತುಗಳನ್ನು ದೊರೆಯುವಂತೆ ಮಾಡಲು ಉಪಸಮಿತಿ ಶಿಫಾರಸು ಮಾಡಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinet minister pressureeducational reportkmskmskannadaokkaliga communitiesopposeSiddaramaiahsocio-economicveerashaiva-lingayat
7 FacebookTwitterPinterestEmail
KM Shivaraju

previous post
ರಾಜ್ಯಾದ್ಯಂತ ಮರು ಭೂ ಮಾಪನಕ್ಕೆ (ರೀ ಸರ್ವೇ) ಸೂಚನೆ
next post
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ