49
ಲೋಕಸಭಾ ಚುನಾವಣೆವರೆಗೆ ವರದಿ ಬರಲ್ಲ
ರಾಮನಗರ:ಲೋಕಸಭಾ ಚುನಾವಣೆವರೆಗೂ ರಾಜ್ಯ ಸರ್ಕಾರ ಜಾತಿ ಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಟೀಕಿಸಿದ್ದಾರೆ.
ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿಯನ್ನು ಸರ್ಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎನ್ನುತ್ತಿದೆ, ಲೋಕಸಭಾ ಚುನಾವಣೆವರೆಗೆ ವರದಿ ಬರಲ್ಲ, ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ ಎಂದರು.
2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವರದಿ ಸ್ವೀಕರಿಸಲಿಲ್ಲ, ಹೊಸ ಸರ್ಕಾರ ಬಂದು 6 ತಿಂಗಳಾಗಿದೆ, ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ ಎಂದರು.