Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳ ಬಂಧನಕ್ಕೆ ಜೆಡಿಎಸ್ ಆಗ್ರಹ

by KM Shivaraju November 24, 2023
written by KM Shivaraju November 24, 2023 0 comments 3 minutes read
2FacebookTwitterPinterestEmail
103
ಎಸ್.ಮನೋಹರ್ ಬಂಧಿಸದಿದ್ದರೆ ಗೃಹ ಸಚಿವರ ಕಚೇರಿ ಎದುರು ಧರಣಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳ ಬಂಧನಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ  ಎಂದು  ಪೋಲಿಸರ ವಿರುದ್ಧ ಕಿಡಿಕಾರಿರುವ ಜೆಡಿಎಸ್,  ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದರೆ ವಿಧಾನಸೌಧದಲ್ಲಿರುವ ಗೃಹ ಸಚಿವರ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು  ಹೇಳಿದೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ ಜೆಡಿಎಸ್  ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಪಕ್ಷದ ರಾಜ್ಯದ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಮುಖಂಡ ಕೆ.ಮಂಜು ಅವರು, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

 ತಿಪ್ಪೇಸ್ವಾಮಿ ಮಾತನಾಡಿ, ‘ನಮ್ಮ ಪಕ್ಷದ ನಾಯಕರ ವಿರುದ್ಧ ಜೆಡಿಎಸ್ ಪಕ್ಷದ ಕಚೇರಿಯ ಆವರಣದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿದರು. ಯಾರು ಹೀಗೆ ಮಾಡಿದ್ದಾರೆ ಎಂದು ನಾವು ಕೂಡ ಪರಿಶೀಲನೆ ನಡೆಸಿ  ಪೋಲಿಸ್ ಕಮಿಷನರ್‌ಗೆ ದೂರು ನೀಡಿದ್ದೆವು. ಕಮಿಷನರ್ ಸೂಚನೆಯಂತೆ  ಶ್ರೀರಾಂಪುರ ಠಾಣೆಯಲ್ಲಿ ಕೂಡ ದೂರು ದಾಖಲಿಸಿದ್ದೇವೆ ಎಂದರು.

 ನಮ್ಮ ನಾಯಕರ ವಿರುದ್ಧ  ಪೋಸ್ಟರ್ ಅಂಟಿಸಿರುವ ವಿಚಾರ ಮತ್ತು ವೈಯಕ್ತಿಕ ತೇಜೋವಧೆ, ವ್ಯಕ್ತಿ ನಿಂದನೆ ಆಧಾರವಾಗಿ ದೂರು ದಾಖಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ಪೋಲಿಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಇಂಡಿಯನ್ ಪಿನಲ್ ಕೋಡ್‌‌, ಐಟಿ ಆಕ್ಟ್‌ನಡಿ ಕ್ರಮ ಜರುಗಿಸಬೇಕಾಗಿತ್ತು. ಅದನ್ನು ಪೊಲೀಸರು ಮಾಡಿಲ್ಲ ಎಂದು ಹೇಳಿದರು.

ಪೋಲಿಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ

ರಾಜಕೀಯದಲ್ಲಿ ಪಕ್ಷದ  ಹಿರಿಯ ನಾಯಕರ ವಿರುದ್ಧ ವ್ಯಕ್ತಿನಿಂದನೆ ಮಾಡಿದಾಗ ಅವರ ಹಿಂಬಾಲಕರು, ಅಭಿಮಾನಿಗಳು, ಕಾರ್ಯಕರ್ತರಿಗೆ ನೋವು ಉಂಟಾಗುತ್ತದೆ. ನಮ್ಮ ಕಾರ್ಯಕರ್ತರನ್ನು ಕೂಡ ನಾವು ಸಮಾಧಾನಪಡಿಸಿದ್ದೇವೆ. ಆದರೆ ಇಲ್ಲಿಯವರೆಗೂ ಪೋಲಿಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.

ಆರೋಪಿ ಎಸ್.ಮನೋಹರ್ ಶುಕ್ರವಾರ ಬೆಂಗಳೂರು ನಗರ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್‌ಗೌಡರವರ  ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದು ಅಲ್ಲದೇ, ವೈಯಕ್ತಿಕ ತೇಜೋವಧೆ, ವ್ಯಕ್ತಿ ನಿಂದನೆ ಮಾಡುವ ಕೆಲಸ ಮಾಡಿದ್ದಾರೆ ಎಂದು ಅವರು ದೂರಿದರು.

ಕಾಂಗ್ರೆಸ್ ಸರ್ಕಾರ ಕೂಡಲೇ ಈ ಬಗ್ಗೆ ಎಚ್ಚೆತ್ತುಕೊಂಡು ಕಡಿವಾಣ ಹಾಕಬೇಕಾಗಿದೆ. ಇಲ್ಲವಾದರೆ ಪರಸ್ಪರ ಪ್ರತಿಭಟನೆಗಳು ನಡೆಯುತ್ತವೆ, ಪರಿಸ್ಥಿತಿ ಮಿತಿ ಮೀರಿದರೆ ಕಾನೂನು ಸುವ್ಯವಸ್ಥೆ ಹದಗೆಡಬಹುದು. ಗೃಹ ಇಲಾಖೆ, ಡಿಜಿಪಿಯವರು ಇದನ್ನು ಸೂಕ್ಷ್ಮವಾಗಿ ಗಮನಹರಿಸಿ ಈ ರೀತಿಯ ಘಟನೆಗಳು ಪುನರಾವರ್ತನೆ ಆಗದಂತೆ ಕ್ರಮ ವಹಿಸಬೇಕು. ಇದು ನಿಲ್ಲದಿದ್ದರೆ ನಾವು ಹೋರಾಟ ಮಾಡಲಿದ್ದೇವೆ ಎಂದು ಸರ್ಕಾರಕ್ಕೆ ಅವರು ಎಚ್ಚರಿಕೆ ನೀಡಿದರು‌.

ನನ್ನ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ

ಜೆಡಿಎಸ್ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ರಮೇಶ್‌ಗೌಡ ಮಾತನಾಡಿ,  ‘ಚಿಕ್ಕವಯಸ್ಸಿನಲ್ಲೇ ವಿಧಾನ ಪರಿಷತ್ ಸದಸ್ಯನಾಗಿದ್ದೇನೆ ಎಂದು ನನ್ನ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಅವರುಗಳಂತೆ ಜಾಮೀನು ತೆಗೆದುಕೊಂಡು ಓಡಾಡುತ್ತಿಲ್ಲ. ಎಸ್ ಮನೋಹರ್ ವಿರುದ್ಧ ನಾನು ಕಾಂಗ್ರೆಸ್ ವರಿಷ್ಠ ನಾಯಕರಿಗೂ ಕೂಡ ಪತ್ರ ಬರೆಯುತ್ತೇನೆ ಎಂದರು.

ಕುಮಾರಸ್ವಾಮಿಯವರು ಈ ಸರಕಾರದ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾರೆ ಎನ್ನುವ ಕಾರಣಕ್ಕೆ ಅವರ ವಿರುದ್ಧ ಪೋಸ್ಟರ್ ಅಂಟಿಸಿದ್ದಾರೆ. ಮನೋಹರ್ ಪೋಸ್ಟರ್ ಅಂಟಿಸಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಪುರಾವೆಗಳಿವೆ. ಮನೋಹರ್ ರೀತಿಯಲ್ಲಿ ಕೀಳುಮಟ್ಟದ ರಾಜಕೀಯ ನಾವು ಮಾಡಲ್ಲ. ನಾನು ಅವ್ಯವಹಾರ ಮಾಡಿರುವುದಕ್ಕೆ ಒಂದೇ ಒಂದು ಸಾಕ್ಷಿ ನೀಡಿದರೆ ರಾಜಕೀಯ ತೊರೆಯುತ್ತೇನೆ. ಈ ಸಂದರ್ಭದಲ್ಲಿ ಅವರು ಎಸ್.ಮನೋಹರ್ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು.

ಪೋಸ್ಟರ್ ಅಂಟಿಸಿದ್ದು ನಾನೇ ಎಂದು ರಾಜರೋಷವಾಗಿ ಹೇಳಿಕೊಂಡಿರುವ ಮನೋಹರ್‌ ಅವರನ್ನು ಪೋಲಿಸರು ಬಂಧಿಸಬೇಕು. ಇಲ್ಲವಾದರೆ ಜೆಡಿಎಸ್ ಪಕ್ಷದ‌ ಶಾಸಕರು, ಮುಖಂಡರು ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಪೋಸ್ಟರ್ ಅಂಟಿಸುವ ಕೆಲಸ ನಮಗೂ ಬರುತ್ತದೆ. ಮೌಲ್ಯಾಧಾರಿತ ರಾಜಕಾರಣ ಮಾಡಬೇಕು ಎಂದು ನಮ್ಮ ನಾಯಕರು ಸೂಚನೆ ನೀಡಿದ್ದಕ್ಕೆ ನಮ್ಮ ಪಕ್ಷದ ಯುವ ಕಾರ್ಯಕರ್ತರು ಸುಮ್ಮನಿದ್ದಾರೆ ಎಂದು ಆಕ್ರೋಶ ಹೊರಹಾಕಿದರು‌.

ಕೂಡಲೇ ಕಾಂಗ್ರೆಸ್ ಕಾರ್ಯಕರ್ತ ಎಸ್.ಮನೋಹರ್ ಬಂಧನವಾಗದಿದ್ದರೆ ವಿಧಾನಸೌಧದ ಗೃಹ ಸಚಿವರ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸುವುದಾಗಿ ಅವರು ಎಚ್ಚರಿಕೆ ನೀಡಿದರು‌.

ಜೆಡಿಎಸ್ ಗೆ ಒಂದು ಕಾನೂನು, ಕಾಂಗ್ರೆಸ್ ಗೆ ಒಂದು ಕಾನೂನು ಇರುತ್ತದೆಯೇ?

ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮಾತನಾಡಿ, ಸರಕಾರ, ಪೋಲಿಸ್ ಕಮಿಷನರ್ ಮತ್ತು ಗೃಹ ಸಚಿವರು ಒಬ್ಬೊಬ್ಬರಿಗೆ ಒಂದೊಂದು ರೀತಿಯ ಕಾನೂನು ಮಾಡಬಾರದು. ಎಲ್ಲಾ ಪಕ್ಷಕ್ಕೂ ಒಂದೇ ನಿಯಮ. ಜೆಡಿಎಸ್ ಪಕ್ಷದ ಕಾರ್ಯಕರ್ತ ಬೆಟ್ಟಪ್ಪ ಎಂಬಾತ ಫೇಸ್‌‌ಬುಕ್‌ನಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದಕ್ಕೆ ಕೆ‌.ಜಿ.ಎಫ್ ಪೋಲಿಸ್ ಸ್ಟೇಷನ್‌ನಲ್ಲಿ ಜಾಮೀನುರಹಿತ ಕೇಸ್ ದಾಖಲಿಸುತ್ತಾರೆ.

ಆದರೆ, ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದವರ ವಿರುದ್ಧ ಪೋಲಿಸ್ ಕಮಿಷನರ್‌ಗೆ ದೂರು ನೀಡಿದರೂ ಕೂಡ ಜಾಮೀನು ಸಹಿತ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಪೋಸ್ಟರ್ ಅಂಟಿಸಿದವರು ರಾಜರೋಷವಾಗಿ ಓಡಾಡಿಕೊಂಡಿದ್ದಾರೆ. ನಮಗೊಂದು ಅವರಿಗೊಂದು ಕಾನೂನು ಸರಿಯಲ್ಲ. ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ.ಕೂಡಲೇ ಜಾಮೀನು ರಹಿತ ಪ್ರಕರಣ ದಾಖಲಿಸಿ  ಕ್ರಮ ಜರುಗಿಸಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿದರೂ ಕೂಡ ತಪ್ಪು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ, ಮನೋಹರ್  ನಿನ್ನೆ ನಾನೇ ಪೋಸ್ಟರ್ ಅಂಟಿಸಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.  ಮನೋಹರ್ ವಿರುದ್ಧ ಯಾವ ಕ್ರಮ ಜರುಗಿಸಿದ್ದೀರಾ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ರಂಗನಾಥ್ ಪ್ರಶ್ನಿಸಿದರು.

ಮನೋಹರ್‌ರಿಗೆ ಕಾಂಗ್ರೆಸ್ ಪಕ್ಷ ಯಾವುದೇ ಸ್ಥಾನಮಾನ ನೀಡಿಲ್ಲ ಎಂದು ಹತಾಷೆಗೆ ಒಳಗಾಗಿ ಈ ರೀತಿ ಮಾಡಿದ್ದಾರೆ. ಅಥವಾ ಈ ರೀತಿ ಮಾಡಿದರೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಗಬಹುದು ಎಂಬ ನೀರಿಕ್ಷೆಯಲ್ಲಿ ಮಾಡಿರಬಹುದು. ಡಿ.ಕೆ.ಶಿವಕುಮಾರ್  ಕೂಡ ಕ್ರಮ ಜರುಗಿಸಬೇಕು ಎಂದು  ಅವರು ಆಗ್ರಹಿಸಿದರು.

ಮುಖಂಡರಾದ ಪ್ರವೀಣ್, ಚಂದ್ರಶೇಖರ್ ಮುಂತಾದವರು ಹಾಜರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congresshdkjdskmskmskannadapostwarprotestramesh gowdaranganath
2 FacebookTwitterPinterestEmail
KM Shivaraju

previous post
ಕರ್ಮಕಾಂಡ ಮುಚ್ಚಿಹಾಕಲು ಎಜಿ ನೇಮಕ
next post
ಸಿದ್ದರಾಮಯ್ಯ ಸಂಪುಟ ಡಿ.ಕೆ.ಶಿವಕುಮಾರ್ ಪಾದದಡಿಯಲ್ಲಿದೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ