Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಪ್ರಪ್ರಥಮ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳ

by KM Shivaraju November 25, 2023
written by KM Shivaraju November 25, 2023 0 comments 2 minutes read
3FacebookTwitterPinterestEmail
72
ಇಂದು ಹಾಗೂ ನಾಳೆ ನಡೆಯುತ್ತಿರುವ ಕರಾವಳಿಯ ಕಂಬಳ

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಕರಾವಳಿಯ ಕಂಬಳ ನಡೆಯಲಿದೆ.  ಕರಾವಳಿಯ ಜಾನಪದ ಕ್ರೀಡೆಯನ್ನು ಬೆಂಗಳೂರಿಗರು ಕಣ್ತುಂಬಿ ಕೊಳ್ಳಲು ಕೌಂಟ್ ಡೌನ್  ಶುರುವಾಗಿದೆ.

 ಅರಮನೆ ಮೈದಾನವು ಜೋಡಿ ಕೋಣಗಳ ಮಿಂಚಿನ ಓಟಕ್ಕೆ ಸಾಕ್ಷಿಯಾಗಲಿದೆ. ಐತಿಹಾಸಿಕ ಕಂಬಳಕ್ಕೆ ಸಾಕ್ಷಿಯಾಗಲಿದೆ ರಾಜಧಾನಿ. ಕಂಬಳದ ಸೊಗಡನ್ನ ಸವಿಯಲು ಸಿಲಿಕಾನ್ ಸಿಟಿ ಜನರು ಕೌತುಕದಿಂದ ಕಾಯುತ್ತಿದ್ದಾರೆ.  ಇಂದು ಸಂಜೆ 6 ಗಂಟೆಗೆ ಮುಖ್ಯ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.

ಕಂಬಳದ ಕಾರ್ಯಕ್ರಮಗಳು

ಇಂದು ಬೆಳಿಗ್ಗೆ 10.30 ರವೇಳಗೆ ಅಶ್ವಿನಿ ಪುನೀತ್ ರಾಜಕುಮಾರ್  ಅವರು ಜೋಡು ಕರೆ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11ಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಸಭಾ ಕಾರ್ಯಕ್ರಮ ಉದ್ಘಾಟನೆ ಮಾಡುವರು. 12 ಗಂಟೆ ಹೊತ್ತಿಗೆ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆ ಉದ್ಘಾಟನೆಯನ್ನು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ.

ಕೆಲವು ಸಾಧಕರಿಗೆ ಸನ್ಮಾನ ಕಾರ್ಯಕ್ರಮ/ ವಿವಿಧ ಸೆಲೆಬ್ರಿಟಿ ಭಾಗಿ

ಸಿಲಿಕಾನ್ ಸಿಟಿಯಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯಲಿದೆ ಕರಾವಳಿ ಕಂಬಳ ದಲ್ಲಿ ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 180ಕ್ಕೂ ಅಧಿಕ ಕೋಣ ಸಜ್ಜಾಗಿವೆ.

 ಸಾರ್ವಜನಿಕರಿಗೆ ಉಚಿತ

ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಕಂಬಳ ಕ್ಕೆ ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರಿಗೆ ಪ್ರವೇಶವಿದೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಪ್ರತ್ಯೇಕ ಪ್ರವೇಶ  ವ್ಯವಸ್ಥೆ ಮಾಡಲಾಗಿದೆ. ಕಂಬಳ ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು.

ಈ ಕಂಬಳದ ವಿಶೇಷತೆ

ಬೆಂಗಳೂರು ಕಂಬಳದಲ್ಲಿ ಕೋಣಗಳ  180-200ಜೋಡಿ ಭಾಗಿಯಾಗೋ ಸಾಧ್ಯತೆ ಇದೆ. ಬೆಂಗಳೂರು ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್ ಕುಮಾರ್ ಹೆಸರು ಇಡಲಾಗಿದೆ.  ಕಂಬಳದ ಕರೆಗೆ ರಾಜ ಮಹಾರಾಜ ಎಂದು ಹೆಸರು  ಹಾಗೂ ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವವೂ ಇರಲಿದೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಇರಲಿದೆ.

ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ.ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಇದು ಕಂಬಳದ ಇತಿಹಾಸದಲ್ಲಿ ಹೊಸ  ಚರಿತ್ರೆ ಸೃಷ್ಟಿಸಲಿದೆ. 228 ಕೋಣಗಳ ಜೋಡಿ ರಿಜಿಸ್ಟ್ರೇಷನ್ ಆಗಿದ್ದು 180-200 ಜೋಡಿ‌ ಫೈನಲ್‌ ಆಗಲಿದೆ.  ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ ಎಂದು ಆಯೋಜಕರು ಹೇಳಿದ್ದಾರೆ.

 ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರಿಂದ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳಿಗೆ ಬೈಹುಲ್ಲು, ಊರಿನಿಂದಲೇ ತರಲಾಗುತ್ತದೆ.  ಆಹಾರ ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ  ಇದೆ. ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬಂದಿದ್ದಾರೆ.

ಬಹುಮಾನ

ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ  16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು, ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು, ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.  ಕಂಬಳ ಓಡಿಸುವವರಿಗೆ ಕೂಡ ವಿಶೇಷ ಬಹುಮಾನ ಇರಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ

ಬೆಳಿಗ್ಗೆಯಿಂದ ಸಂಜೆವರೆಗೂ ನಡೆಯಲಿರುವ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಲಿದೆ. ಕರಂಗೋಲು ನೃತ್ಯ, ಯಕ್ಷಗಾನ , ಕಾಲಿವುಡ್ ಸಮಕಾಲೀನ ನೃತ್ಯ , ಹುಲಿ ವೇಷ, ಮಾಂಕಳಿ ನಲಿಕೆ  ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bangalorecoastlineinaugurationpalace groundsSiddaramaiahsilicon city
3 FacebookTwitterPinterestEmail
KM Shivaraju

previous post
ಕ್ಯಾಪ್ಟನ್ ಪ್ರಾಂಜಲ್  ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ
next post
ಜಗತ್ತಿನಲ್ಲಿ ಯಾರಿಗಿಂತಲೂ ಕಡಿಮೆ ಇಲ್ಲ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ