Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಕಂಬಳ ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಯಲಿ

by KM Shivaraju November 25, 2023
written by KM Shivaraju November 25, 2023 0 comments 1 minutes read
0FacebookTwitterPinterestEmail
74
ತುಳು ಭಾಷೆಗೆ ಹೆಚ್ಚುವರಿ ಭಾಷೆ ಸ್ಥಾನಮಾನ ಪರಿಶೀಲನೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ  ಚರ್ಚಿಸಿ ತೀರ್ಮಾನಿಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬೆಂಗಳೂರು ಕಂಬಳ ಸಮಿತಿ ಇವರ ವತಿಯಿಂದ  ಬೆಂಗಳೂರಿನ ಅರಮನೆ ಮೈದಾನ ದಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ.   ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕ್ರೀಡೆ ಪ್ರೋತ್ಸಾಹಿಸುವ ಅವಕಾಶ

 ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ.  ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು, ಕ್ರೀಡೆ ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಜನ ಬಂದು ನೋಡುವ , ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದರು. 

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ  ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ.  ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ  ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದು ಹೇಳಿದರು.

ಮನರಂಜನೆಯ ಕ್ರೀಡೆ

 ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು.

ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡಿಸುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ. ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆ ಯಾಗುತ್ತದೆ ಎಂದು ಮುಖ್ಯಮಂತ್ರಿ ಗಳು ಅಭಿಪ್ರಾಯಪಟ್ಟರು.

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು ಎಂದರು. 

ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮೇಲ್ಮನೆ ಸದಸ್ಯ ಮಂಜುನಾಥ್ ಭಂಡಾರಿ, ಕಾರ್ಯಾಧ್ಯಕ್ಷ ಗುರುಕಿರಣ್, ರಂಜನ್ ಶೆಟ್ಟಿ, ರಾಜೇಂದ್ರ ಕುಮಾರ್, ಶಂಕುತಲಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

kms, kmskannada, bangalore, coastle sports, kambala, siddaramaiah, every year continue

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bangalorecoastle sportskambalakmskmskannadaSiddaramaiah
0 FacebookTwitterPinterestEmail
KM Shivaraju

previous post
ವಾಯಭಾರ ಕುಸಿತ: ತುಂತುರು ಮಳೆಯ ಸಿಂಚನ
next post
15 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳ ಕೊರತೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ