Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

 28ಲೋಕಸಭೆ ಕ್ಷೇತ್ರ ಗೆಲ್ಲುತ್ತೇವೆ

by KM Shivaraju November 26, 2023
written by KM Shivaraju November 26, 2023 0 comments 2 minutes read
2FacebookTwitterPinterestEmail
88
ಬಿಡದಿಯ ತೋಟದಲ್ಲಿ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಹೇಳಿಕೆ

ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಲೋಕಸಭೆ ಚುನಾವಣೆ, ಎರಡೂ ಪಕ್ಷಗಳ ಮೈತ್ರಿ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾಗಿ ಇಬ್ಬರೂ ನಾಯಕರು ಭೇಟಿಯ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.

ದೇಶದ ಹಿತದೃಷ್ಟಿಯಿಂದ ಮುಂದಿನ ಅವಧಿಗೂ ನರೇಂದ್ರ  ‌ಮೋದಿಯವರೇ ಪ್ರಧಾನಿ ಆಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಕ್ಷೇತ್ರ ಹಂಚಿಕೆ ಕುರಿತು ‌ಹೈಕಮಾಂಡ್ ನಲ್ಲಿ ‌ಚರ್ಚಿಸುತ್ತಾರೆ. ರಾಜ್ಯದಲ್ಲಿ ನಮ್ಮ ಮೈತ್ರಿಕೂಟ 28ಕ್ಕೆ‌ 28 ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಲಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

2006ರಲ್ಲಿ ಮೈತ್ರಿ ಸರಕಾರದ ಕಾಲದಲ್ಲಿ ಬಿ.ಎಸ್. ಯಡಿಯೂರಪ್ಪ ‌ಹಾಗೂ ನಾನು ಜೊತೆಯಾಗಿ ಅತ್ಯುತ್ತಮ ‌ಕೆಲಸ ನಿರ್ವಹಿಸಿದ್ದೇವೆ. ಅದು ಪುನಃ ಮರುಕಳಿಸಬೇಕು ಎಂಬುದು ರಾಜ್ಯದ ಜನರ ಆಸೆಯಾಗಿದೆ. ವಿಜಯೇಂದ್ರ‌, ‌ನಿಖಿಲ್‌ ಕುಮಾರಸ್ವಾಮಿ ಅವರುಗಳು, ‌ನಾನು‌ ಎರಡೂ ಪಕ್ಷಗಳ ಎಲ್ಲಾ ನಾಯಕರು ಜೊತೆಗೂಡಿ ‌ 2006-07ರ ಉತ್ತಮ ಸ್ಥಿತಿಯನ್ನು ಮರಳಿ ತರಲು ಶ್ರಮಿಸುತ್ತೇವೆ ಎಂದರು.

ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಹೋದರರ ರೀತಿ ರಾಜ್ಯದಲ್ಲಿ ಓಡಾಡಲಿದ್ದಾರೆ. ಎರಡೂ ಪಕ್ಣಗಳು ಒಟ್ಟಾಗಿ ‌ಹೋರಾಟ ನಡೆಸಲಿವೆ. ಆಡಳಿತ ಪಕ್ಷದ ತಪ್ಪುಗಳನ್ನು ದಾಖಲೆ ಸಮೇತ‌ ಎತ್ತಿ ಹಿಡಿಯುತ್ತೇವೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ಸಿನ ಏಕೈಕ ಸಂಸದರೂ ಇರಬಾರದು: ವಿಜಯೇಂದ್ರ

ರಾಜ್ಯದ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಒಟ್ಟಾಗಿ‌ ಹೋಗುವ ಕುರಿತು ಇಬ್ಬರು‌ ಮಾತುಕತೆ ನಡೆಸಿದ್ದೇವೆ. ದೆಹಲಿಯಲ್ಲಿ ‌ವರಿಷ್ಠರು ಸೀಟು‌ ಹಂಚಿಕೆ ‌ಬಗ್ಗೆ ಚರ್ಚಿಸುತ್ತಾರೆ ಎಂದು ವಿಜಯೇಂದ್ರ ಅವರು  ತಿಳಿಸಿದರು.

ನಾಯಕರಾದ ಮೋದಿ,‌ ನಡ್ಡಾ,‌ ಅಮಿತ್ ಶಾ, ‌ಹೆಚ್ ಡಿಕೆ ಅವರು ಈಗಾಗಲೇ ದೆಹಲಿಯಲ್ಲಿ ‌ಚರ್ಚೆ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ಒಗ್ಗಟ್ಟಾಗಲು ನಿರ್ಧರಿಸಲಾಗಿದೆ. ನಾನು ಕೂಡ ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು  ಭೇಟಿಯಾಗಿ ಚರ್ಚಿಸಿದ್ದೇನೆ. ಹಿರಿಯರಾದ‌ ಹೆಚ್.ಡಿ.ಕುಮಾರಸ್ವಾಮಿ ಅವರ‌ ಜತೆಯೂ ಚರ್ಚಿಸಿದ್ದೇನೆ. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ, ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷದ ಏಕೈಕ ಸಂಸದ ಡಿ.ಕೆ.ಸುರೇಶ್ ಅವರನ್ನು ಎದುರಿಸುವ ಕುರಿತು ನಾಲ್ಕು ಗೋಡೆಗಳ ಮಧ್ಯೆ ಕೂತು ಕಾರ್ಯತಂತ್ರ  ಮಾಡಲಾಗುವುದು ಎಂದರು ವಿಜಯೇಂದ್ರ‌. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಸಂಸದನೂ ಇರಬಾರದು. ದೇಶದ, ರಾಜ್ಯದ ಹಿತದೃಷ್ಟಿಯಿಂದ ಜೆಡಿಎಸ್ – ಬಿಜೆಪಿ ಮೈತ್ರಿಯಾಗಿದೆ ಎಂದರು.

ಸಿಎಂ ಜನತಾ‌ದರ್ಶನಕ್ಕೆ ಹೆಚ್ ಡಿಕೆ ಕೌಂಟರ್

ಸಿಎಂ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಟಾಂಗ್ ನೀಡಿದ ಕುಮಾರಸ್ವಾಮಿ, ಜನರ ತೆರಿಗೆ ಖರ್ಚು ಮಾಡಿ ಜಾಹೀರಾತು‌ ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು‌ ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.

ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp-jdskmskmskannadakumaraswamymp seat discussionnikhil kumaraswamyVijayendra
2 FacebookTwitterPinterestEmail
KM Shivaraju

previous post
ಸಿಎಂ ಪ್ರಥಮ ಪೂರ್ಣಾವಧಿ ಜನತಾ ದರ್ಶನ
next post
ತೆಲಂಗಾಣದ ಸಿಎಂಆರೋಪ ಚುನಾವಣಾ ಪ್ರೇರಿತ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ