Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಪರಿಹಾರ ನಿಧಿಯಡಿ 25 ಕೋಟಿ ರೂ. ಬಿಡುಗಡೆ

by KM Shivaraju November 27, 2023
written by KM Shivaraju November 27, 2023 0 comments 2 minutes read
2FacebookTwitterPinterestEmail
369

ಜನರ ವಿಶ್ವಾಸವನ್ನು ಉಳಿಸುವ ಪ್ರಯತ್ನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು  ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದು, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಮನವಿಗಳು ಸ್ವೀಕೃತವಾಗಿದೆ. ನಾನು ಬೆಳಿಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ

 ಇಂದಿನ ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ  ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ.

ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ. ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ ಎಂದರು.

ಜನರ ಆರೋಗ್ಯ ವೆಚ್ಚಕ್ಕೆ 25 ಕೋಟಿ ರೂ. ಬಿಡುಗಡೆ

ಕ್ಯಾನ್ಸರ್, ಕಿಡ್ನಿ, ಹೃದಯ ಸೇರಿದಂತೆ ಆರೋಗ್ಯ ಸಮಸ್ಯೆಯಿಂದ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು  ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣ ಪ್ರಮಾಣವನ್ನು ಸರ್ಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ ಎಂದರು.

ಸಚಿವರು ಜನತಾ ದರ್ಶನ ಸಮರ್ಪಕವಾಗಿ ಮಾಡುತ್ತಿಲ್ಲವೇಕೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎಲ್ಲ ಸಚಿವರೂ ಜನತಾ ದರ್ಶನ ಮಾಡಿದ್ದು, ಕಾರ್ಯಕ್ರಮ ನಡೆಸಿದ ಬಗ್ಗೆ ವರದಿ ನೀಡಲಿದ್ದಾರೆ ಎಂದರು.

ಮಕ್ಕಳ ಪೌಷ್ಟಿಕಾಂಶ

ಮಕ್ಕಳ ಪೌಷ್ಟಿಕಾಂಶ ಸಮಸ್ಯೆಗಳ ಬಗ್ಗೆ ಇಂದು ಅಹವಾಲುಗಳ ಬಂದಿರುವ ಬಗ್ಗೆ ಉತ್ತರಿಸಿ, ಮಕ್ಕಳ ಪೌಷ್ಠಿಕಾಂಶ ವೃದ್ಧಿಸುವ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ 185 ಕೋಟಿ ರೂಗಳನ್ನು ನಿಗದಿಪಡಿಸಲಾಗಿದೆ. ಅನೀಮಿಯಾ ಇರುವ ಮಕ್ಕಳಿಗೆ ಔಷಧಿ, ಶಾಲಾಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ , ಪ್ರತಿದಿನವು ಹಾಲು, ಬಿಸಿಯೂಟಗಳನ್ನು  ನೀಡಲಾಗುತ್ತಿದೆ.

ಭ್ರೂಣ ಹತ್ಯೆ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಹೆಣ್ಣು ಭ್ರೂಣಹತ್ಯೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಭ್ರೂಣಹತ್ಯೆ ಬಗ್ಗೆ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ, ಈ ದುಷ್ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಡಿತರ ಅಕ್ಕಿ ಕಳುವು

ಯಾದಗಿರಿಯಲ್ಲಿ ಪಡಿತರ ಅಕ್ಕಿ ಕಳುವು ಹಗರಣ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಿಲ್ಲೆಯಲ್ಲಿ ಅಕ್ಕಿ ಕಳುವು ನಡೆದಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಹೆಚ್ಚುವರಿ ಬಸ್ ಗಳಿಗೆ ವ್ಯವಸ್ಥೆ

ಶಕ್ತಿ ಯೋಜನೆ ಯಶಸ್ವಿಯಾದರೂ, ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ 971 ಬಸ್ಸಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವೆಡೆ ಹೆಚ್ಚು ಬಸ್ಗಳನ್ನು ಹಾಕಲು ತಿಳಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
25 crore releasecmrfefforts to people's trust: siddaramaiahkmskmskannadapeople's appeal
2 FacebookTwitterPinterestEmail
KM Shivaraju

previous post
ಜನರ ಅಹವಾಲಿಗೆ ಮುಖ್ಯಮಂತ್ರಿ ಸ್ಪಂದನೆ
next post
ಎಂ.ಫಿಲ್, ಪಿ.ಹೆಚ್.ಡಿ ಫೆಲೋಶಿಪ್ ಗೆ  ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ