41
ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿನ ವಾಹನಗಳ ಸಂಚಾರ ದಟ್ಟಣೆಯಿಂದ ಜನತೆ ರೋಸಿ ಹೋಗಿದ್ದು, ಮೊದಲು ಇದನ್ನು ತಪ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಮುನಿಸಿಪಾಲಿಕಾ-2023” 17ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸಂಚಾರ ದಟ್ಟಣೆಯ ಒತ್ತಡದಿಂದ ಜನ ಅನುಭವಿಸುತ್ತಿರುವ ಕಿರಿಕಿರಿ ಹಾಗೂ ಮೂಲಭೂತ ಸೌಕರ್ಯಗಳಿಗೆ ಪರದಾಡುವುದನ್ನು ತಪ್ಪಿಸುವುದು ಮೊದಲ ಆದ್ಯತೆಯಾಗಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಶೇ.38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ, ಇವರೆಲ್ಲರಿಗೂ ವಾಹನಗಳ ಸಂಚಾರ ದಟ್ಟಣೆಯ ತೊಂದರೆ ಇಲ್ಲದ, ಸುಗಮ ಸಂಚಾರ ವ್ಯವಸ್ಥೆ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದರು.