Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತೆಲಂಗಾಣ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಚರ್ಚೆ

by KM Shivaraju November 28, 2023
written by KM Shivaraju November 28, 2023 0 comments 2 minutes read
2FacebookTwitterPinterestEmail
99
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು:ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದ್ದು, ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಬಂಧ ಟ್ವೀಟ್ ಮಾಡಿರುವ ಅವರು, ಇದರಿಂದ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸೋಲಿನ ಭೀತಿಗೀಡಾಗಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ ನಡೆಸಿದ್ದಾರೆ ಎಂದರು.

ಕಾಂಗ್ರೆಸ್‌ನ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷ

ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ಧ ಕಾಂಗ್ರೆಸ್ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ, ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವೂ ಆಗಿದೆ.

ಒಂಬತ್ತೂವರೆ ವರ್ಷಗಳ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿನ ಶೇಕಡಾ 10ರಷ್ಟು ಭರವಸೆಗಳನ್ನು ಸಹಾ ಈಡೇರಿಸಿಲ್ಲ ಎನ್ನುವುದು ಅಲ್ಲಿನ ಮತದಾರರಿಗೆ ಅರಿವಾಗಿದೆ. ಇದರಿಂದ ಅಲ್ಲಿ ಪ್ರಧಾನಿ ಮೋದಿಯವರ ಪ್ರಚಾರದಿಂದ ಆ ಪಕ್ಷಕ್ಕೆ ನಷ್ವವೇ ಹೊರತು ಲಾಭ ಇಲ್ಲ ಎಂದಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಬದ್ಧತೆಯಿಂದ ತೆಲಂಗಾಣದ ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಅಲ್ಲಿನ ಮತದಾರರು ನಂಬುವಂತಾಗಿದೆ. ಇದರಿಂದ ತೆಲಂಗಾಣದ ಮತದಾರರ ವಿಶ್ವಾಸಾರ್ಹತೆಯನ್ನು ನಮ್ಮ ಪಕ್ಷ ಗಳಿಸಿದೆ.

ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಕರ್ನಾಟಕದವರೇ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಭಾಷಣಗಳಲ್ಲಿ “ಕರ್ನಾಟಕ ಮಾದರಿ” ಆಡಳಿತವನ್ನು ಉಲ್ಲೇಖಿಸಿ ಮತದಾರರನ್ನು ಸೆಳೆಯತೊಡಗಿದ್ದಾರೆ.

ನಮ್ಮ ಹಿಂದಿನ 2013-18ರ ಸರ್ಕಾರ ಮತ್ತು ಈಗಿನ ಆರು ತಿಂಗಳ ಅವಧಿಯ ಸರ್ಕಾರದ ಸಾಧನೆಗಳನ್ನು ಆ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮನೆ-ಮನೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ಭರವಸೆಯ ಆಶಾಕಿರಣದಂತೆ ಕಾಣಿಸುತ್ತಿದೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಮರೆತುಬಿಟ್ಟಿರುವ ತೆಲಂಗಾಣ ಆಡಳಿತದಲ್ಲಿರುವ ಬಿಆರ್‌ಎಸ್ ಪಕ್ಷ ಮತ್ತು ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನಡುವೆ ತೆಲಂಗಾಣದ ಮತದಾರರಿಗೆ ಕಾಂಗ್ರೆಸ್ ಪಕ್ಷ ಭರವಸೆಯ ಆಶಾಕಿರಣದಂತೆ ಕಾಣಿಸುತ್ತಿರುವುದರಿಂದ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಎದ್ದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ನರೇಂದ್ರಮೋದಿ ಅವರ ಜನಪ್ರಿಯತೆಯ ಎಕ್ಸ್‌ಪೈರಿ ಡೇಟ್ ಮುಗಿದಿದೆ, ಎಂಬುದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ, ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಇದು ಮರುಸಾಬೀತಾಗಲಿದೆ.

ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂಬ ದುರುದ್ದೇಶದಿಂದ ಬಿಜೆಪಿಯಲ್ಲಿರುವ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರ ಮೋದಿ ಮತ್ತು ಅಮಿತ್ ಷಾ ಜೋಡಿ ಕಡೆಗಣಿಸಿರುವುದು ಯಾವ ರಾಜ್ಯದಲ್ಲಿಯೂ ಜನತೆ ನಂಬಿಕೆ ಇಡಬಲ್ಲ ಯಾವ ಸ್ಥಳೀಯ ನಾಯಕರೂ ಇಲ್ಲದಂತಾಗಿದೆ.

ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಕಾರಣ

ಪ್ರತ್ಯೇಕ ರಾಜ್ಯವಾಗಿ ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು ವಿಳಂಬವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಆಶೋತ್ತರದ ಹೆಸರಲ್ಲಿ ಜನರನ್ನು ಮರುಳು ಮಾಡುತ್ತಾ ಬಂದಿರುವ ಬಿಆರ್‌ಎಸ್ ಪಕ್ಷದ ನಾಟಕ ಅಲ್ಲಿನ ಮತದಾರರಿಗೆ ಅರಿವಾಗಿದೆ.

ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಮಿತಿಮೀರಿದ ಭ್ರಷ್ಟಾಚಾರದಿಂದಾಗಿ ಬಿಆರ್‌ಎಸ್ ಪಕ್ಷ ಜನತೆಯ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದೆ. ಬಿಜೆಪಿ ಮತ್ತು ಬಿಆರ್‌ಎಸ್ ಎರಡೂ ಪಕ್ಷಗಳನ್ನು ಹಿಂದಕ್ಕಟ್ಟಿ ಮುಂದೋಡುತ್ತಿರುವ ಕಾಂಗ್ರೆಸ್ ಪಕ್ಷ ಅಚ್ಚರಿಯ ಗೆಲುವನ್ನು ದಾಖಲಿಸಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congresselectionindiakarnatakakmskmskannadapoliticsSiddaramaiahtelangana
2 FacebookTwitterPinterestEmail
KM Shivaraju

previous post
ರಾಜ್ಯದ 316 ನಗರಗಳಿಗೆ ಅಗತ್ಯ ನಾಗರಿಕ ಸವಲತ್ತು
next post
ನಗರ ವಾಹನ ಸಂಚಾರ ದಟ್ಟಣೆ ತಪ್ಪಿಸಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ