Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಹಣ

by KM Shivaraju November 28, 2023
written by KM Shivaraju November 28, 2023 0 comments 2 minutes read
5FacebookTwitterPinterestEmail
420
ವೈಯಕ್ತಿಕವಾಗಿ ಹಣ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣದ ಚೆಕ್ ಅನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.

ಮೊದಲ ಕಂತು ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.

ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ‌ ಹರಕೆ ತೀರಿಸಿದ್ದೆವು.

ರಾಜ್ಯದ ಯಜಮಾನಿಯರ‌ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

5 ವರ್ಷವೂ ಯೋಜನೆ

ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ.

ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ.

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮಾಡಿದ ವಾಗ್ದಾನದಂತೆ ದೇವಿಗೆ ಹಣ ಸಲ್ಲಿಸುತ್ತಿದ್ದೇವೆ. ಮುಂದಿನ ಐದು ವರ್ಷ ಕೂಡ ನಿರಂತರವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಮಾತ್ರವಲ್ಲ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ.

ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಕಿವಿಗೊಡಬೇಡಿ. ಕೇವಲ ಈ ಐದು ವರ್ಷವಲ್ಲ,ಮುಂದಿನ ಐದು ವರ್ಷವೂ ನಾವೇ ಅಧಿಕಾರದಲ್ಲಿರುತ್ತೇವೆ. ಮತ್ತೆ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chamundeshwarifive yearsgruhalaxmikms.kmskannadalaxmihebalkarmoney
5 FacebookTwitterPinterestEmail
KM Shivaraju

previous post
ಮನೆ ಅಂದ್ರೆ ಮೋದಿಗೇಕೆ ಸಿಟ್ಟು?
next post
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆಹ್ವಾನ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ