Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಜೆಪಿ-ಜೆಡಿಎಸ್ ಕ್ಷೇತ್ರ ಹಂಚಿಕೆಗೆ ಸರ್ವೆ ಆಧಾರ

by admin November 28, 2023
written by admin November 28, 2023 0 comments 2 minutes read
5FacebookTwitterPinterestEmail
182
ದೆಹಲಿ ಮೂಲದ 4 ಖಾಸಗಿ ಸಂಸ್ಥೆಗಳಿಂದ ಸಮೀಕ್ಷೆ

ಬೆಂಗಳೂರು: ಲೋಕಸಭೆ ಚುನಾವಣಾ ಪೂರ್ವ ಸಮೀಕ್ಷೆ ಆಧಾರದ ಮೇಲೆ ಕ್ಷೇತ್ರಗಳನ್ನು ಹಂಚಿಕೆ ಮಾಡಿಕೊಳ್ಳಲು  ಬಿಜೆಪಿ ಹಾಗೂ ಜೆಡಿಎಸ್ ತೀರ್ಮಾನಿಸಿವೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ರಿಂದ 25 ಸ್ಥಾನಗಳನ್ನು ಗೆಲ್ಲಲ್ಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, ಇದಕ್ಕಾಗಿ ಜೆಡಿಎಸ್ ಅನ್ನು ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದರ ಜತೆಗೆ ದೆಹಲಿ ಮೂಲದ 4 ಖಾಸಗಿ ಸಂಸ್ಥೆಗಳ ಮೂಲಕ ಸಮೀಕ್ಷೆ ನಡೆಸಿದೆ.

ಒಂದು ತಾಸಿಗೂ ಹೆಚ್ಚುಕಾಲ ಮಾತುಕತೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಳೆದ ಭಾನುವಾರ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬಿಡದಿ ತೋಟದಲ್ಲಿ ಭೇಟಿಯಾಗಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಒಂದು ತಾಸಿಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶ ಹೊರಬಿದ್ದ ನಂತರ ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ, ಸೀಟು ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಸಲು ತೀರ್ಮಾನಿಸಿದ್ದಾರೆ.

ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್, ಕಳೆದ ವಿಧಾನಸಭೆ ಚುನಾವಣೆ ಫಲಿತಾಂಶದ ಆಧಾರದ ಮೇಲೆ 20 ಸ್ಥಾನಗಳನ್ನು ಗೆಲ್ಲಲ್ಲೇಬೇಕು ಎಂದು ಪಣ ತೊಟ್ಟು ಸಿದ್ಧತೆ ಆರಂಭಿಸಿದೆ.

25 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ

ಕಾಂಗ್ರೆಸ್ ಸಿದ್ಧತೆ ಬಗ್ಗೆಯೂ ಚರ್ಚೆ ನಡೆಸಿದ ಉಭಯ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಬಳಸಿಕೊಂಡು ಈ ಬಾರಿಯೂ ಕನಿಷ್ಠ 25 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು.

ಅದಕ್ಕಾಗಿ ವರ್ಚಸ್ವಿ ನಾಯಕರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ಮಾಡಿದ್ದಾರೆ. ಆದರೆ, ಯಾರನ್ನು ಯಾವ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದರೆ ಹೇಗೆ? ಎಂಬ ಬಗ್ಗೆಯೂ ವಿಚಾರ ವಿನಿಮಯ ಮಾಡಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ವರಿಷ್ಠರ ತೀರ್ಮಾನವಾದರೂ ಇಂಥವರನ್ನು ಕಣಕ್ಕಿಳಿಸಿದರೆ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ಮಾಹಿತಿ ರವಾನಿಸಲಿವೆ. ಇದೂ ಕೂಡ ಸಮೀಕ್ಷೆ ಆಧಾರದ ಮೇಲೆ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಯೋಗೇಶ್ವರ್ ಕಣಕ್ಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಪೈಪೋಟಿ ಇದ್ದರೂ ಆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಕುಮಾರಸ್ವಾಮಿ ಒಪ್ಪಿದ್ದಾರೆ.

ಈ ಕ್ಷೇತ್ರದಲ್ಲಿ ಐದು ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ಜತೆಗೆ ಮೂರು ನಗರ ಪ್ರದೇಶಗಳ ವಿಧಾನಸಭಾ ಕ್ಷೇತ್ರಗಳು ಒಳಗೊಂಡಿದ್ದು, ಅಲ್ಲಿ ಬಿಜೆಪಿ ಬಲಾಢ್ಯವಾಗಿದೆ.

ಬೆಂಗಳೂರು: ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳು ರಾಜ್ಯದ ಎಲ್ಲ 33 ಜಿಲ್ಲೆಗಳಿಗೆ ಪ್ರವಾಸ ಮಾಡಲಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ತಂಡ 2 ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ಯಡಿಯೂರಪ್ಪನವರ ತಂಡ ತುಮಕೂರು, ಮಧುಗಿರಿ, ಬೆಂಗಳೂರಿನ ಪ್ರವಾಸ ಮಾಡಲಿದೆ. ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ತಂಡವು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ಸಿ.ಟಿ.ರವಿಯವರ ತಂಡವು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದೆ ಎಂದರು. ಈಶ್ವರಪ್ಪ ಅವರ ತಂಡ ಬಳ್ಳಾರಿ, ಕೊಪ್ಪಳ, ಸದಾನಂದಗೌಡರ ತಂಡ- ಮಂಡ್ಯ, ಹಾಸನ, ಗೋವಿಂದ ಕಾರಜೋಳ ಅವರು ಧಾರವಾಡ ಮತ್ತು ವಿಜಯನಗರ, ಬಸನಗೌಡ ಪಾಟೀಲ ಯತ್ನಾಳರು ಮೈಸೂರು, ಚಾಮರಾಜನಗರ- ಹೀಗೆ ವಿವಿಧ ತಂಡಗಳು ವಿವಿಧ ಜಿಲ್ಲೆಗಳಿಗೆ ತೆರಳುತ್ತಿವೆ ಎಂದು ವಿವರ ನೀಡಿದರು. ನವೆಂಬರ್ 10ರಂದು ಬರ ಪರಿಸ್ಥಿತಿ ಸಂಬಂಧ ವರದಿಯನ್ನು ಬಿಡುಗಡೆ ಮಾಡಲಿದ್ದು, ಅದನ್ನು ಸರಕಾರಕ್ಕೆ ಸಲ್ಲಿಸಲಿದ್ದೇವೆ ಎಂದರು. ಬರದ ಕುರಿತು ಚರ್ಚೆಗೆ ಅಧಿವೇಶನದಲ್ಲಿ ವಿಶೇಷ ಸಮಯ ನಿಗದಿಗೆ ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು. ರಾಜ್ಯದ ಅಣೆಕಟ್ಟುಗಳಲ್ಲಿ ನೀರಿಲ್ಲ. ಜಮೀನುಗಳು ಒಡೆದು ಹೋಗಿವೆ. ಕುಡಿಯುವ ನೀರು ಲಭಿಸುತ್ತಿಲ್ಲ. ಟ್ಯಾಂಕರ್ಗಳಲ್ಲಿ ನೀರು ಪೂರೈಸುವ ಪರಿಸ್ಥಿತಿ ಇದೆ. ಕರೆಂಟ್ ದುಬಾರಿಯಾಗಿದೆ. ಸಣ್ಣ ಕೈಗಾರಿಕೆಗಳು ಬಂದ್ ಆಗಿವೆ ಎಂದು ವಿವರಿಸಿದರು. ಬೋರ್ವೆಲ್ಗಳು ಬತ್ತಿ ಹೋಗಿವೆ. ನೀರಿದ್ದರೂ ಅದನ್ನು ಸರಬರಾಜು ಮಾಡಲು ವಿದ್ಯುತ್ ಇಲ್ಲ. ಎಪಿಎಂಸಿಗಳಿಗೆ ಸಂಪೂರ್ಣ ವ್ಯಾಪಾರ ಇಲ್ಲವಾಗಿದೆ. ಇದು ಸೇರಿ ಗೋಶಾಲೆಗಳಿಗೆ ಭೇಟಿ ಮಾಡಲು 17 ತಂಡಗಳನ್ನು ಪಕ್ಷವು ನಿಯೋಜಿಸಿದೆ ಎಂದು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಳಿನ್ಕುಮಾರ್ ಕಟೀಲ್, ಸಿ.ಟಿ.ರವಿ, ವಿಜಯೇಂದ್ರ, ಅರವಿಂದ ಬೆಲ್ಲದ, ಶ್ರೀರಾಮುಲು, ಕೆ.ಎಸ್.ಈಶ್ವರಪ್ಪ, ಅರವಿಂದ ಲಿಂಬಾವಳಿ, ಬಸನಗೌಡ ಪಾಟೀಲ ಯತ್ನಾಳ, ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ವಿಶ್ವೇóಶ್ವರ ಹೆಗಡೆ ಕಾಗೇರಿ, ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಡಿ.ವಿ.ಸದಾನಂದ ಗೌಡರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ರಾಜ್ಯದ ಎಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಈ ತಂಡದಲ್ಲಿ ಇರುತ್ತಾರೆ. ಎಲ್ಲ 33 ಜಿಲ್ಲೆಗಳಿಗೆ 17 ತಂಡಗಳು ಪ್ರವಾಸ ಮಾಡಲಿವೆ ಎಂದು ತಿಳಿಸಿದರು. ಕಲೆಕ್ಷನ್ ಸರ್ಕಾರ- ರವಿಕುಮಾರ್ ಟೀಕೆ ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಸರ್ಕಾರ ನಿಲ್ಲಿಸಿಲ್ಲ. ಇದೊಂದು ಎಟಿಎಂ ಸರ್ಕಾರ. ಇದೊಂದು ಲೂಟಿ ಸರ್ಕಾರ ಎಂದು ಟೀಕಿಸಿದರು. ವರ್ಗಾವಣೆ ದಂಧೆ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ಷೇಪಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ನಡೆಸಿದ ಎಫ್ಡಿಎ ಪರೀಕ್ಷೆಯಲ್ಲಿ 20 ಜನರಿಗೆ ನಿಗದಿತ ಅವಧಿಗೆ ಬದಲಿಗೆ ಒಂದು ಗಂಟೆ ಹೆಚ್ಚುವರಿ ಅವಧಿಯನ್ನು ನೀಡಿದ್ದು ಯಾಕೆ? ಎಂದು ಕೇಳಿದ ಅವರು, ಈ ಸಂಬಂಧ 9 ಜನರನ್ನು ಮಾತ್ರ ಬಂಧಿಸಲಾಗಿದೆ. ಯಾಕೆ ಆರ್.ಡಿ.ಪಾಟೀಲ್ ಬಂಧಿಸಿಲ್ಲ? ನಿಮ್ಮ ಕಾರ್ಯಕರ್ತನೆಂದು ಬಂಧಿಸಿಲ್ಲವೇ ಎಂದು ಪ್ರಶ್ನಿಸಿದರು. ಈ ವಿಷಯವನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಳ್ಳಲಿದೆ. ಕೂಡಲೇ ಆರೋಪಿಗಳೆಲ್ಲರನ್ನು ಬಂಧಿಸಿ ಎಂದು ಅವರು ಆಗ್ರಹಿಸಿದರು. ಕಲಬುರ್ಗಿ, ಯಾದಗಿರಿಯಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದ ಅವರು, ಅಧಿಕಾರಿಗಳು, ಸಚಿವರ ಸಹಕಾರ ಇಲ್ಲದೆ ಹೀಗಾಗಲು ಸಾಧ್ಯವಿಲ್ಲ ಎಂದು ಆರೋಪಿಸಿದರು. ಇದರ ಬಗ್ಗೆ ಸಮಗ್ರ ತನಿಖೆ ಮಾಡಿಸಲು ಒತ್ತಾಯಿಸಿದರು. ಈ ಕುರಿತು ಅಧ್ಯಯನಕ್ಕೆ ತಂಡವೊಂದು ಕಲಬುರ್ಗಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.

ಹಾಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರನ್ನು ಈ ಬಾರಿ ಸೋಲಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ಈ ಕ್ಷೇತ್ರ ಬಿಜೆಪಿ ಬಿಟ್ಟುಕೊಡಲಿದ್ದು, ಅಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ಮಾಡಿದ್ದಾರೆ.

ಯಡಿಯೂರಪ್ಪ ಕುಟುಂಬಕ್ಕೂ ಯೋಗೇಶ್ವರ್ ನಡುವೆ ಭಿನ್ನಾಭಿಪ್ರಾಯಗಳಿದ್ದರೂ ಕುಮಾರಸ್ವಾಮಿ ಕ್ಷೇತ್ರದ ಗೆಲುವಿನ ದೃಷ್ಟಿಯಿಂದ ಟಿಕೆಟ್ ಅವರಿಗೆ ನೀಡುವಂತೆ ಸಲಹೆ ಮಾಡಿದ್ದಾರೆ.

4 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ

ರಾಜ್ಯದ 28 ಕ್ಷೇತ್ರಗಳ ಪೈಕಿ ಕೇವಲ 4 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದ್ದು, ಉಳಿದ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಿದೆ.

ಹಾಸನ, ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಣಕ್ಕಿಳಿಯಲು ಜೆಡಿಎಸ್ ನಿರ್ಧರಿಸಿದ್ದರೂ ಸಮೀಕ್ಷಾ ವರದಿ ಬಳಿಕವಷ್ಠೆ ಕ್ಷೇತ್ರ ಹಂಚಿಕೆ ಅಂತಿಮಗೊಳ್ಳಲಿದೆ.

ಲೋಕಸಭಾ ಚುನಾವಣೆಯ ಜತೆಗೆ ಸರ್ಕಾರದ ವಿರುದ್ಧ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸುವುದು ಮತ್ತು ಕೆಲವು ಹಗರಣಗಳನ್ನು ಬಯಲಿಗೆಳೆಯಲು ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಕಾರ್ಯತಂತ್ರ ರೂಪಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4 contestbjp-jds seat sharingdelhi based surveyjdskmskmskannadasurvey basistarget 25 mpconstituenciesyogeshwar contest
5 FacebookTwitterPinterestEmail
admin

previous post
ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ
next post
62 ಕೈಗಾರಿಕಾ ಯೋಜನೆಗಳಿಗೆ ಅನುಮತಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ