Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲು

by KM Shivaraju November 28, 2023
written by KM Shivaraju November 28, 2023 0 comments 1 minutes read
1FacebookTwitterPinterestEmail
96
ಕೆಐಎಡಿಬಿಯಿಂದ ತ್ವರಿತ ಕ್ರಮ: ಎಂ ಬಿ ಪಾಟೀಲ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನಿವೇಶನ ಪಡೆದುಕೊಂಡು, ದಶಕಗಳಿಂದ ಹಾಗೆಯೇ ಉಳಿಸಿಕೊಂಡಿದ್ದ ಹಲವರಿಂದ ಕಳೆದ ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲಿ ಮಾಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ಕೆಐಎಡಿಬಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯು ಕೈಗೊಂಡಿರುವ ವಿವಿಧ ಉಪಕ್ರಮಗಳು ಮತ್ತು ಅನುಸರಣ ಕಾರ್ಯಗಳ ಪರಾಮರ್ಶೆ ನಡೆಸಿದರು.

ಬಳಿಕ ಮಾತನಾಡಿದ ಅವರು, `ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಗಳನ್ನು ಪಡೆದುಕೊಂಡಿದ್ದ ಹಲವರು ಹತ್ತಿಪ್ಪತ್ತು ವರ್ಷಗಳಿಂದ ಹಾಗೆಯೇ ಉಳಿಸಿಕೊಂಡಿದ್ದರು. ಇದರ ಬಾಬತ್ತು ಬೊಕ್ಕಸಕ್ಕೆ 2,400 ಕೋಟಿ ರೂ. ಬಾಕಿ ಬರಬೇಕಾಗಿದೆ.

ಇದರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಬಾಕಿ ವಸೂಲಿ ಮಾಡುವಂತೆ ಮೂರ್ನಾಲ್ಕು ವಾರಗಳ ಹಿಂದೆ ಮಂಡಲಿಯ  ನಿರ್ದೇಶಕರುಗಳಿಗೆ ಸೂಚಿಸಲಾಗಿತ್ತು. ಇದರ ನಂತರ ಕ್ಷಿಪ್ರ ಗತಿಯಲ್ಲಿ 115 ಕೋಟಿ ರೂ. ವಸೂಲು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಈ ವಸೂಲಿ ಕ್ರಮವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.

ವಿಜಯಪುರ ವಿಮಾನ ನಿಲ್ದಾಣದ ಫೆಬ್ರವರಿಯಲ್ಲಿ ಉದ್ಘಾಟನೆ

ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಕ್ಷಿಪ್ರ ಗತಿಯಲ್ಲಿ ಸಾಗುತ್ತಿದ್ದು, 2024ರ ಫೆಬ್ರವರಿಯಲ್ಲಿ ಉದ್ಘಾಟಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ, ಕೇಂದ್ರ ಸರಕಾರದ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅಗತ್ಯವಿರುವ ಅನುಮೋದನೆಗಳನ್ನು ಪಡೆದುಕೊಳ್ಳಬೇಕು. ಜೊತೆಗೆ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇನ್ನು ಒಂದು ತಿಂಗಳಲ್ಲಿ ರಾತ್ರಿ ಹೊತ್ತಿನಲ್ಲೂ ವಿಮಾನ ಸೇವೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಹಾಸನ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿಗಳ ಕಡೆಗೆ ಆದ್ಯತೆ ಕೊಡಲಾಗುವುದು. ಕಾರವಾರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಒಂದಿಷ್ಟು ಬಾಕಿ ಇದ್ದು, ಇದನ್ನು ತ್ವರಿತಗೊಳಿಸಲಾಗುವುದು. ಬಜೆಟ್ಟಿನಲ್ಲಿ ಧರ್ಮಸ್ಥಳ, ಚಿಕ್ಕಮಗಳೂರು, ಕೊಡಗುಗಳಲ್ಲಿ ಏರ್-ಸ್ಟ್ರಿಪ್ಸ್ ನಿರ್ಮಾಣ ಘೋಷಿಸಲಾಗಿದ್ದು, ಅದನ್ನು ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಮೂಲಕ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

ಉತ್ತರ ಕನ್ನಡದ ತಡದಿಯನ್ನು ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ಪಾಟೀಲ ನುಡಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ‌ ಡಾ.ಮಹೇಶ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
115 Croreallotteeskiadb plotkmskmskannadamb patilquick actionrecoveredthree week
1 FacebookTwitterPinterestEmail
KM Shivaraju

previous post
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ
next post
 ಡಿಕೆಶಿ ಕಂಡು ಹಿರಿಯ ನಟಿ ಲೀಲಾವತಿ ಏನಂದರು ಗೋತ್ತೆ?

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ