Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

 ಡಿಕೆಶಿ ಕಂಡು ಹಿರಿಯ ನಟಿ ಲೀಲಾವತಿ ಏನಂದರು ಗೋತ್ತೆ?

by KM Shivaraju November 28, 2023
written by KM Shivaraju November 28, 2023 0 comments 1 minutes read
0FacebookTwitterPinterestEmail
112
ಅಮ್ಮನ ಸ್ಪಂದನೆಗೆ ಪುತ್ರ ವಿನೋದ್ ರಾಜ್ ಗೆ  ಆಶ್ಚರ್ಯ

ನೆಲಮಂಗಲ: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಶಿವಕುಮಾರ್ ಅವರ ಮಾತುಗಳಿಗೆ ಸ್ಪಂದಿಸಿದ ಲೀಲಾವತಿ ಅವರು “ಚೆನ್ನಾಗಿರಪ್ಪ” ಎಂದು ಹರಸಿದರು.

ಕಳೆದ ಎರಡು ಮೂರು ದಿನಗಳಿಂದ ಲೀಲಾವತಿ ಅವರ ಆರೋಗ್ಯ ಹದಗೆಟ್ಟಿದ್ದು, ಅವರು ಯಾರ ಮಾತಿಗೂ ಸ್ಪಂದಿಸಿರಲಿಲ್ಲ. ಶಿವಕುಮಾರ್ ಅವರ ಧ್ವನಿ ಕೇಳಿದ ನಂತರ ಲೀಲಾವತಿ ಅವರು ಸ್ಪಂದಿಸಿದ್ದನ್ನು ಕಂಡು ಸ್ವತಃ ಮಗ ವಿನೋದ್ ರಾಜ್ ಅವರೇ ಆಶ್ಚರ್ಯಚಕಿತರಾದರು. ಇದನ್ನು ಅವರೇ ಹೇಳಿಕೊಂಡರು.

ಲೀಲಾವತಿ ಅವರನ್ನು ಭೇಟಿ ಮಾಡಿದ ಶಿವಕುಮಾರ್ ಅವರು “ನೀವು ನನ್ನ ಮನೆಗೇ ಬಂದು ಕರೆದ ಕಾರಣ ಪಶು ವೈದ್ಯ ಆಸ್ಪತ್ರೆ ಉದ್ಘಾಟನೆಗೆ ಬಂದಿರುವೆ, ಇಲ್ಲಿ ನೋಡಿ” ಎಂದರು.

ಅವರ ಮಾತಿಗೆ ಆಳಧ್ವನಿಯಲ್ಲಿ ಸ್ಪಂದಿಸಿದ ಲೀಲಾವತಿ ಅವರು “ಚೆನ್ನಾಗಿರಪ್ಪ” ಎಂದು ಮಲಗಿದ ಜಾಗದಿಂದಲೇ ಆಶೀರ್ವದಿಸಿದರು.

ಈ ಭೇಟಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಕೆಲವು ದಿನಗಳ ಹಿಂದೆ, ಹಿರಿಯ ಜೀವದ ಆರೋಗ್ಯ ಅಷ್ಟಾಗಿ ಚೆನ್ನಾಗಿಲ್ಲ. ಮನೆಯ ಬಳಿ ಬರುವುದು ಬೇಡ ಎಂದರೂ ಮನೆ ಬಾಗಿಲಿಗೆ ಬಂದು ತಾವು ಪ್ರೀತಿಯಿಂದ ಕಟ್ಟಿದ ಪಶು ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕು ಎಂದು ಹೇಳಿದ್ದರು.

ಲೀಲಾವತಿ ಅವರು ಸುಮಾರು 60 ವರ್ಷಗಳ ಕಾಲ ಚಿತ್ರರಂಗದಲ್ಲಿ ಅಮೂಲ್ಯ ಸೇವೆ ಸಲ್ಲಿಸಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್, ಇಂದಿರಾ ಗಾಂಧಿ ಅವರಿಂದ ಗೌರವ ಸ್ವೀಕರಿಸಿದ್ದಾರೆ. ಕಳೆದ 35 ವರ್ಷಗಳಿಂದ ಅವರು ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಎಂದರು.

ಅವರ ಸೇವೆ ಚಿಕ್ಕದು, ದೊಡ್ಡದು ಎನ್ನುವುದಕ್ಕಿಂತ ಅವರ ಆಲೋಚನೆಯೇ ಮಾದರಿಯಾದುದು. ದೊಡ್ಡ, ದೊಡ್ಡ ಶ್ರೀಮಂತರನ್ನು ನೋಡಿದ್ದೇವೆ. ಆದರೆ, ಸೇವೆ ಮಾಡುವ ಮನೋಭಾವನೆ ಎಷ್ಟೋ ಮಂದಿಯಲ್ಲಿ ನೋಡಿಲ್ಲ. ನಾನು ಬದುಕಿರುವಾಗಲೇ ಬಂದು ಈ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕು ಎಂದು ನನ್ನ ಮನೆಗೆ ಬಂದು ಮನವಿ ಮಾಡಿದ್ದರು.

ಸಮಾಜಮುಖಿ ಕೆಲಸಗಳನ್ನು ನೋಡಿ ಆಶ್ಚರ್ಯ

ಅವರ ಪ್ರೀತಿ, ಮಮತೆಗೆ ಕಟ್ಟುಬಿದ್ದು ಇಲ್ಲಿಗೆ ಬಂದಿದ್ದೇನೆ. ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಇದ್ದ ಕಾರಣ ಕಳೆದ ಭಾನುವಾರ ಬರಲು ಆಗಿರಲಿಲ್ಲ. ಇವರಿಗೆ ಯಾರ ಸಹಾಯ, ಸಿಎಸ್ಆರ್ ಅನುದಾನವೂ ದೊರೆತಿಲ್ಲ. ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಆದರೆ ಹಣ ಮಾಡಿಲ್ಲ. ಆದರೂ ಇವರ ಸಮಾಜಮುಖಿ ಕೆಲಸಗಳನ್ನು ನೋಡಿ ಆಶ್ಚರ್ಯನಾಗಿದ್ದೇನೆ. ಇವರು ದೊಡ್ಡ ಶ್ರೀಮಂತರೇನಲ್ಲ, ಆದರೂ ತಮ್ಮ ದುಡಿಮೆಯ ಹಣದಲ್ಲಿ ಉಸಿರು ಹೋದರೂ, ಹೆಸರು ಉಳಿಯಬೇಕು ಎನ್ನುವಂತಹ ಕೆಲಸ ಮಾಡಿದ್ದಾರೆ”.

ಲೀಲಾವತಿ ಅವರು ಇನ್ನೂ ಹೆಚ್ಚು ಕಾಲ ನಮ್ಮೊಂದಿಗೆ ಇರಬೇಕು ಎಂದು ಬಯಸುತ್ತೇನೆ. ಆ ಭಗವಂತನಲ್ಲಿ ಕೇಳುತ್ತೇನೆ ಎಂದು ಹೇಳಿದರು.

ಪಶು ಆಸ್ಪತ್ರೆ ಉದ್ಘಾಟನೆ

ಇದಾದ ನಂತರ ಶಿವಕುಮಾರ್ ಸೋಲದೇವನಹಳ್ಳಿಯಲ್ಲಿ ಅಮ್ಮ ಮತ್ತು ಮಗ ನಿರ್ಮಿಸಿರುವ ಡಾ. ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯ ಉದ್ಘಾಟನೆಯನ್ನು ಹಸುಗಳಿಗೆ ಆಹಾರ ತಿನ್ನಿಸುವ ಮೂಲಕ ನೆರವೇರಿಸಿದರು.

ಈ ಆಸ್ಪತ್ರೆಗೆ ಸರಕಾರದಿಂದಲೇ ಅಗತ್ಯ ವೈದ್ಯಕೀಯ ಮತ್ತಿತರ ಸಿಬ್ಬಂದಿ ನಿಯೋಜಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
animal hospitalkmskmskannadamother's responseopeningveteran actress lilavati dkshivinod raj surprised
0 FacebookTwitterPinterestEmail
KM Shivaraju

previous post
ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲು
next post
ಛಾಯಾಚಿತ್ರಗಳ ಮೂಲಕ ಇತಿಹಾಸ ಕಟ್ಟುವ  ಕೆಲಸ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ