ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ನ. 30ರ ಗಡುವು
ಬೆಂಗಳೂರು: ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯುವಜನರಿಗೆ 2023-24ನೇ ಸಾಲಿನ ಉದ್ಯಮಶೀಲತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಸಮಾಜ ಕಲ್ಯಾಣ ಇಲಾಖೆಯ ಆನ್ ಲೈನ್ ತಂತ್ರಾಂಶದ ಮೂಲಕ ಅರ್ಜಿಗಳನ್ನು ನವೆಂಬರ್ 30 ರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು https://www.scsptsp.karnataka.gov.in/HMS/CDOC/EDPRe gistrationForm.aspread ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರ ವಯೋಮಿತಿ ಕನಿಷ್ಟ 21 ವರ್ಷ, ಗರಿಷ್ಟ 50 ವರ್ಷದೊಳಗಿರಬೇಕು. ಶೈಕ್ಷಣಿಕ ಅರ್ಹತೆಯು ಪಿ.ಯು.ಸಿ ಮತ್ತು ಮೇಲ್ಪಟ್ಟವರಾಗಿರಬೇಕು. ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ 1000 ರೂ.ಗಳನ್ನು ನೀಡಲಾಗುವುದು .
ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಛೇರಿ. ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217. 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ -562110. ದೂರವಾಣಿ ಸಂಖ್ಯೆ-080-29787447 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.