ರಾಜ್ಯದಲ್ಲಿ 10,755 ಮಂದಿಗೆ ಉದ್ಯೋಗಾವಕಾಶ
ಬೆಂಗಳೂರು:ಬೃಹತ್ ಮತ್ತು ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ಇಂದಿಲ್ಲಿ ನಡೆದ 141ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3617.09ಕೋಟಿ ರೂ. ಬಂಡವಾಳ ಹೂಡಿಕೆಯ ೬೨ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಇದರಿಂದ ರಾಜ್ಯದಲ್ಲಿ 10,755 ಮಂದಿಗೆ ಉದ್ಯೋಗಾವಕಾಶ ದೊರೆಯಲಿವೆ.
ತಲಾ 50 ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ ರಾಜ್ಯದಲ್ಲಿ 2088.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. ಉದ್ಯೋಗಾವಕಾಶ ಅಂದಾಜು 6,360.
ಅಲ್ಲದೆ, 15 ಕೋಟಿ ರೂ.ಗಳಿಂದ 50 ಕೋಟಿ ರೂ. ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 51 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಇದರಿಂದ 841.40 ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 4,395 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ.
ಹೆಚ್ಚುವರಿ ಬಂಡವಾಳ ಹೂಡಿಕೆಯ ೩ ಯೋಜನೆಗಳಿಗೆ ಸಭೆ ಅನುಮೋದನೆ ನೀಡಿದ್ದು, ಇದರಿಂದ 577.35 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದೆ.